AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮತ್ತೆ 8 ಸಹಶಿಕ್ಷಕರನ್ನು ಬಂಧಿಸಿದ ಸಿಐಡಿ ಪೊಲೀಸರು

2012-15ನೇ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಇಂದು ಮತ್ತೆ ಎಂಟು ಮಂದಿ ಸಹಶಿಕ್ಷಕರನ್ನು ಬಂಧಿಸಿದ್ದಾರೆ. ಈವರೆಗೆ ಒಟ್ಟು 69 ಆರೋಪಿತ ಶಿಕ್ಷಕರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮತ್ತೆ 8 ಸಹಶಿಕ್ಷಕರನ್ನು ಬಂಧಿಸಿದ ಸಿಐಡಿ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 10, 2023 | 7:54 PM

Share

ಬೆಂಗಳೂರು: ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮೀಷನ್ ವಿಚಾರ ಸೇರಿದಂತೆ ವಿವಿಧ ಭ್ರಷ್ಟಾಚಾರ ಆರೋಪ ಇಟ್ಟುಕೊಂಡು ಮುಗಿಬಿದ್ದ ಕಾಂಗ್ರೆಸ್ ಗೆ ಎದುರೇಟು ನೀಡಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿತ್ತು. ಇದರ ಭಾಗವಾಗಿ ಶಿಕ್ಷಕರ ನೇಮಕಾತಿ (Recruitment of Teachers) ಬಗ್ಗೆ ಬಿಜೆಪಿ ಕೆದಕಿದೆ. ಹೀಗೆ ಕೆದಕುವಾಗ ಹೊರಬಿದ್ದಿದ್ದೇ 2012-15ನೇ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ. ಸದ್ಯ ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಇಂದು ಮತ್ತೆ ಎಂಟು ಮಂದಿ ಸಹಶಿಕ್ಷಕರನ್ನು ಬಂಧಿಸಿದ್ದಾರೆ. ಈವರೆಗೆ ಒಟ್ಟು 69 ಆರೋಪಿತ ಶಿಕ್ಷಕರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

2012-13ನೇ ಸಾಲಿನಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ನಾಲ್ವರು ಸೆರೆಯಾಗಿದ್ದಾರೆ. ಬಾಗಲಕೋಟಿ ಜಿಲ್ಲೆಯ ಮದನಬಾವಿ ಶಾಲೆಯ ಶಿಕ್ಷಕ ಶ್ರೀಕಾಂತ್‌, ವಿಜಯನಗರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕೊಲ್ಹಾರ ಪ್ರೌಢಶಾಲೆಯ ಸಹಶಿಕ್ಷಕನಾದ ನಾಯಕ ಪ್ರಕಾಶ್ ರತ್ನು, ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕಮರೂರು ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಮಹಬೂಬ್ ಪಾಷ, ಬಿ.ಆರ್, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಳ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಹಶಿಕ್ಷಕ ಸುಜಾತ ಭಂಡಾರಿ ಬಂಧಿತರಾಗಿದ್ದಾರೆ.

ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ: ಕೋಲಾರದ ಇಬ್ಬರು ಅಧಿಕಾರಿಗಳ ಕಚೇರಿ ಮತ್ತು 3 ಜಿಲ್ಲೆಗಳಲ್ಲಿರುವ ನಿವಾಸಗಳ ಮೇಲೆ ಲೋಕಾಯುಕ್ತ ರೇಡ್

2014-15 ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕೊರಟಗೆರೆ ತಾಲೂಕಿನ, ಬುಕ್ಕಾಪಟ್ಲ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕಿ ದೀಪಾರಾಣಿ.ಜಿ.ಎನ್, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಮೋಹನ್ ಕುಮಾರ್. ಜಿ.ಕೆ, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಪಾವಗಡ ತಾಲೂಕಿನ ವಲ್ಲೂರು ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಮಂಜುನಾಥ್. ಎಸ್, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟೌನ್​ನ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಶಾಂತಿಲಾಲ್ ಚೌಹಾಣ್ ಎಂಬವರನ್ನು ಸಿಐಡಿ ಪೋಲಿಸರು ಬಂಧಿಸಿದ್ದಾರೆ.

ಘಟನೆ ಹಿನ್ನೆಲೆ

2014-15 ರಲ್ಲಿ ನಡೆದ ಪ್ರಾಥಮಿಕ ಹಾಗೂ ಫ್ರೌಢ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಸೌಧ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 465, 768, 471ರ ಅಡಿ ಎಫ್​ಐಆರ್​ ದಾಖಲಾಗಿತ್ತು. ಪ್ರಕರಣವನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 pm, Fri, 10 February 23

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್