ಬೆಂಗಳೂರಿನಲ್ಲಿ ಅನಧಿಕೃತವಾಗಿ ಇ ಸಿಗರೇಟ್ ಮಾರಾಟ: ಅಂಗಡಿಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು ನಗರದಲ್ಲಿ ಅನಧಿಕೃತವಾಗಿ ಇ ಸಿಗರೇಟ್ ಹಾಗೂ ಫಾರಿನ್ ಸಿಗರೇಟ್ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ಕಾರ್ಯಾಚರಣೆಗೆ ಇಳಿದ ಸಿಸಿಬಿ ಪೊಲೀಸರು ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಅನಧಿಕೃತವಾಗಿ ಇ ಸಿಗರೇಟ್ ಮಾರಾಟ: ಅಂಗಡಿಗಳ ಮೇಲೆ ಸಿಸಿಬಿ ದಾಳಿ
ಬೆಂಗಳೂರಿನಲ್ಲಿ ಅನಧಿಕೃತವಾಗಿ ಇ ಸಿಗರೇಟ್, ವಿದೇಶಿ ಸಿಗರೇಟ್ ಮಾರಾಟ ಹಿನ್ನೆಲೆ ಅಂಗಡಿಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು
Follow us
Rakesh Nayak Manchi
|

Updated on:Mar 21, 2023 | 9:54 PM

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಇ ಸಿಗರೇಟ್ (E-cigarettes) ಹಾಗೂ ಫಾರಿನ್ ಸಿಗರೇಟ್ (Foreign cigarettes) ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ಕಾರ್ಯಾಚರಣೆಗೆ ಇಳಿದ ಸಿಸಿಬಿ ಪೊಲೀಸರು (CCB Police) ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕೋರಮಂಗಲ, ಮೈಕೋಲೇಔಟ್, ಕಬ್ಬನ್ ಪಾರ್ಕ್, ಕೆ ಎಸ್ ಲೇಔಟ್, ಪುಲಿಕೇಶಿ ನಗರ ಎಲೆಕ್ಟ್ರಾನಿಕ್ ಸಿಟಿ ಪೊಲೀsf ಠಾಣಾ ವ್ಯಾಪ್ತಿಯಲ್ಲಿನ ಹಲವು ಅಂಗಡಿಗಳ ಮೇಲೆ ಇಂದು ಬೆಳಗ್ಗೆ ಏಕಕಾಲದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ 8.9 ಲಕ್ಷ ಮೌಲ್ಯದ 681 ಇ ಸಿಗರೇಟ್ ಹಾಗೂ 805 ಫಾರಿನ್ ಸಿಗರೇಟ್ ವಶಕ್ಕೆ ಪಡೆಯಲಾಗಿದ್ದು, ಕೋರಮಂಗಲ, ಮೈಕೋಲೇಔಟ್, ಕಬ್ಬನ್ ಪಾರ್ಕ್, ಕೆ ಎಸ್ ಲೇಔಟ್, ಪುಲಿಕೇಶಿ ನಗರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗಳಲ್ಲಿ ಅಂಗಡಿ ಮಾಲೀಕರ ವಿರುದ್ಧ ದಿ ಪ್ರೊಹಿಬಿಷನ್ ಆಫ್ ಎಲೆಕ್ಟ್ರಾನಿಕ್ ಸಿಗರೇಟ್ ಆ್ಯಕ್ಟ್ (THE PROHIBITION OF ELECTRONIC CIGRATE ACT) ಹಾಗೂ COTPA act ಅಡಿ ಪ್ರಕರಣ ದಾಖಲಿಸಲಾಗಿದೆ.

ದನದ ಕೊಟ್ಟಿಗೆಯಲ್ಲಿ ಅಗ್ನಿ ಅವಘಡ, ರೈತನಿಗೆ ತೀವ್ರ ಗಾಯ

ದೇವನಹಳ್ಳಿ: ಧನದ ಕೊಟ್ಟಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಬೆಂಕಿಯ ಕೆನ್ನಾಲಿಗೆಗೆ ಎರಡು ಹಸುಗಳ ದುರ್ಮರಣ ಹೊಂದಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊನ್ನಾಘಟ್ಟ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುನಿಹನುಮಯ್ಯ ಎಂಬುವವರಿಗೆ ಸೇರಿದ ಕೊಟ್ಟಿಗೆಯಲ್ಲಿ ಇಂದು ಸಂಜೆ ವೇಳೆ ಹಸುಗಳನ್ನು ಕಟ್ಟಿಹಾಕಿ ಮನೆಯೊಳಗಿದ್ದರು. ಈ ವೇಳೆ ಕೊಟ್ಟಿಗೆಗೆ ಬೆಂಕಿ ಹೊತ್ತುಕೊಂಡಿದ್ದು ಎರಡು ಹಸುಗಳು ಸಜೀವ ದಹನಗೊಂಡಿವೆ. ಕಣ್ಣಮುಂದೆ ಬೆಂಕಿಯೊಳಗೆ ಸಿಲುಕಿರುವ ಹಸುಗಳನ್ನು ರಕ್ಷಿಸಲು ಮುಂದಾದ ಮುನಿಹನುಮಯ್ಯಗೆ ತೀವ್ರ ಗಾಯಗಳಾಗಿದ್ದು, ಸ್ಥಳಿಯರು ಗಾಯಾಳು ರೈತನನ್ನ ದೊಡ್ಡಬಳ್ಳಾಪುರ ಆಸ್ವತ್ರೆಗೆ ದಾಖಲಿಸಿದ್ದಾರೆ.

ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ವ್ಯಕ್ತಿ ನೀರುಪಾಲು

ಗದಗ: ತಂಗಾಭದ್ರಾ ನದಿಯಲ್ಲಿ ಸ್ನಾನಕ್ಕೆಂದು ಇಳಿದ ವ್ಯಕ್ತಿಯೊಬ್ಬರು ನೀರುಪಾಲಾದ ಘಟನೆ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದ ದೇಗುಲ ಬಳಿ ನಡೆದಿದೆ. ಕೋಟುಮಚಗಿ ಗ್ರಾಮದ ಚಂದ್ರಶೇಖರ್ (45) ಸಾವನ್ನಪ್ಪಿದ ವ್ಯಕ್ತಿ. ಕೊರ್ಲಹಳ್ಳಿ ಗ್ರಾಮಕ್ಕೆ ಜಾತ್ರೆಗೆ ಆಗಮಿಸಿದ್ದ ಚಂದ್ರಶೇಖರ್, ಸಿಂಗಟಾಲೂರ ದೇವಸ್ಥಾನ ಬಳಿ ನದಿಯಲ್ಲಿ ಸ್ಥಾನಕ್ಕೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ನದಿಯಲ್ಲಿ ತೆಪ್ಪ ಹಾಕಿ ಶೋಧ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 pm, Tue, 21 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್