AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ, ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವಿಡಿಯೋ ಚಿತ್ರಿಕರಿಸಿ ವಿಕೃತಿ

ಮಹಾಪಾಪಿ ಪತಿ ತನ್ನ ಪತ್ನಿಯನ್ನು ಸ್ನೇಹಿತರೊಂದಿಗೆ ಬಲವಂತವಾಗಿ ಮಲಗಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಲೈಂಗಿಕ ಕಿರುಕುಳದಿಂದ ಬೇಸತ್ತ ಮಹಿಳೆ ತನ್ನ ಗಂಡನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ, ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವಿಡಿಯೋ ಚಿತ್ರಿಕರಿಸಿ ವಿಕೃತಿ
ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ, ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವಿಡಿಯೋ ಚಿತ್ರಿಕರಿಸಿ ವಿಕೃತಿ Image Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 10, 2022 | 10:48 AM

Share

ಬೆಂಗಳೂರು: ಮಹಾಪಾಪಿ ಪತಿ ತನ್ನ ಪತ್ನಿಯನ್ನು ಸ್ನೇಹಿತರೊಂದಿಗೆ ಬಲವಂತವಾಗಿ ಮಲಗಿಸಿ ಅಶ್ಲೀಲ ವಿಡಿಯೋ (Obscene Video) ಚಿತ್ರೀಕರಣ ಮಾಡುತ್ತಿದ್ದ ಹೇಯ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಪತಿಯ ಹಲ್ಲೆಗೆ ತಾಳಲಾರದೇ ಆತನ ಗೆಳೆಯರೊಂದಿಗೆ ದೈಹಿಕ ಸಂಪರ್ಕಕ್ಕೆ ಒಪ್ಪಿದ್ದಾಳೆ. ಬಳಿಕ ಪತ್ನಿ ಸ್ನೇಹಿತರೊಂದಿಗೆ ಬೆಡ್​ನಲ್ಲಿದ್ದಾಗ ವಿಡಿಯೋ ಚಿತ್ರಕರಣ ಮಾಡಿದ್ದಲ್ಲದೆ, ಆಕೆಯ ಸಹೋದರಿಯನ್ನು ತನ್ನ ಜೊತೆ ಮಲಗುವಂತೆ ಕಿರುಕುಳ ನೀಡುತ್ತಿದ್ದನು. ಪತಿಯ ಕೆಟ್ಟ ನಡೆಯಿಂದ ಬೇಸತ್ತ ಪತ್ನಿ, ಸಂಪಿಗೆಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ದೂರಿನನ್ವಯ ಲೈಂಗಿಕ ಕಿರುಕುಳ (Sexual harassment), ಎನ್​ಡಿಪಿಎಸ್ (NDPS) ಹಾಗೂ ಐಟಿ ಆಕ್ಟ್ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಂಪಿಗೆಹಳ್ಳಿ ನಿವಾಸಿ ಜಾನ್ ಪಾಲ್ ಎಂಬಾತಾ 2011ರಲ್ಲಿ ಮಹಿಳಾ ಟೆಕ್ಕಿಯೊಬ್ಬಳನ್ನು ಮದುವೆಯಾಗಿದ್ದಾನೆ. ಆರಂಭದಲ್ಲಿ ಚೆನ್ನಾಗಿಯೇ ಸಂಸಾರ ನಡೆಸುತ್ತಿದ್ದ ಜಾನ್ ಪಾಲ್, ಮದುವೆಯಾದ ಮೂರ್ನಾಲ್ಕು ವರ್ಷಕ್ಕೆ ಅಂದರೆ 2015ರಲ್ಲಿ ಹೇಯ ಕೃತ್ಯ ಎಸಗಲು ಆರಂಭಿಸಿದ್ದಾನೆ. ಪಾರ್ಟಿಗೆಂದು ಸ್ನೇಹಿತರನ್ನು ಮನೆಗೆ ಕರೆಸಿ ಅವರೊಂದಿಗೆ ಹಾಸಿಗೆ ಹಂಚಿಕೊಳ್ಳುವಂತೆ ಪತ್ನಿಗೆ ಒತ್ತಾಯಿಸಲು ಆರಂಭಿಸಿದ್ದಾನೆ.

ಇದನ್ನೂ ಓದಿ: ಅಮೆರಿಕ: ತನ್ನ ತಂದೆ 70ಕ್ಕಿಂತ ಹೆಚ್ಚು ಮಹಿಳೆಯರನ್ನು ಕೊಂದಿದ್ದಾನೆ ಅಂತ ಒಬ್ಬ ಮಹಿಳೆ ಆರೋಪಿಸಿದರೆ ಅವಳ ಅಕ್ಕ ಅದು ಸುಳ್ಳು ಅನ್ನುತ್ತಾಳೆ!

ಪತಿಯ ಹೇಯ ನಡೆಗೆ ಪತ್ನಿ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಪತಿ ಜಾನ್ ಪಾಲ್ ಪತ್ನಿ ಮೇಲೆ ಹಲ್ಲೆ ನಡೆಸಿ ಬಲವಂತ ಮಾಡಿದ್ದಾನೆ. ಪತಿಯ ಏಟನ್ನು ತಾಳಲಾಗದೆ ಮನೆಗೆ ಬರುತ್ತಿದ್ದ ಗೆಳೆಯರೊಂದಿಗೆ ದೈಹಿಕ ಸಂಪರ್ಕ ನಡೆಸಲು ಪತ್ನಿ ಒಪ್ಪಿದ್ದಾಳೆ. ಅದರಂತೆ ಪಾರ್ಟಿಗಾಗಿ ಮನೆಗೆ ಬಂದಿದ್ದ ಸ್ನೇಹಿತರಾದ ಸಜೀಶ್ ಹಾಗೂ ನಾಜಿ ಎಂಬುವವರ ಜೊತೆ ಜಾನ್ ಪಾಲ್ ತನ್ನ ಪತ್ನಿಯನ್ನು ಮಲಗಿಸಿದ್ದಾನೆ.

ತನ್ನ ಸ್ವಂತ ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿದ ಜಾನ್ ಪಾಲ್ ದೈಹಿಕ ಸಂಪರ್ಕದ ಪೊಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಇಷ್ಟಕ್ಕೂ ಸುಮ್ಮನಾಗದ ಪಾಪಿಷ್ಟ ಮತ್ತೊಂದು ಕೆಟ್ಟ ಹೆಜ್ಜೆ ಮುಂದಿಟ್ಟು ಪತ್ನಿಯ ತಂಗಿಯನ್ನು ತನ್ನೊಡನೆ ಮಲಗುವಂತೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಗಂಡನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಪತ್ನಿ ಪತಿಗೆ ವಿಚ್ಚೇಧನ ನೀಡಲು ಮುಂದಾಗಿದ್ದಾಳೆ. ಈ ವೇಳೆ ಪತ್ನಿ ತನ್ನ ಗೆಳೆಯರೊಂದಿಗಿನ ಅಶ್ಲೀಲ ಪೊಟೋ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಲು ಆರಂಭಿಸಿದ್ದಾನೆ.

ಗಂಡನ ಕಾಟ, ಕಿರುಕುಳ ತಾಳಲಾಗದೆ ಗಟ್ಟಿ ಮನಸ್ಸು ಮಾಡಿ ಪತಿಯ ವಿರುದ್ಧ ಪತ್ನಿ ಠಾಣೆ ಮೆಟ್ಟಿಲೇರಿ ಪತಿಯ ಹೇಯ ಕೃತ್ಯದ ಬಗ್ಗೆ ದೂರು ನೀಡಿದ್ದಾರೆ. ಅಲ್ಲದೆ ಆತನೊಬ್ಬ ಗಾಂಜಾ ವ್ಯಸನಿಯಾಗಿದ್ದು, ಮನೆಯಲ್ಲಿಯೇ ಗಾಂಜಾ ಸಸಿಗಳನ್ನ ಫಾಟ್​ಗಳಲ್ಲಿ ಬೆಳೆದಿದ್ದಾನೆ ದೂರಿನಲ್ಲಿ ಆರೋಪಿಸಿದ್ದಾಳೆ. ದೂರಿನ ಅನ್ವಯ ಸಂಪಿಗೆಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:09 am, Sat, 10 December 22

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್