Bengaluru: ಪ್ರೀತಿಸಿ ಅವೈಡ್ ಮಾಡಿದ ಪ್ರಿಯತಮೆ; ಮನಸೋ ಇಚ್ಛೆ ಇರಿದು ಯುವತಿಯನ್ನು ಕೊಲೆ ಮಾಡಿದ ಪಾಗಲ್ ಪ್ರೇಮಿ!

ಐದು ವರ್ಷದ ಪ್ರೀತಿಸಿ ನಂತರ ಅವೈಡ್ ಮಾಡಿದಳು ಎಂಬ ಕಾರಣಕ್ಕೆ ಕುಪಿತಗೊಂಡ ಪಾಗಲ್ ಪ್ರೇಮಿಯೊಬ್ಬ, ತನ್ನ ಪ್ರಿಯತಮೆಯನ್ನು ಬಾಕುವಿನಿಂದ ಮನಸೋ ಇಚ್ಛೆ ಇರಿದು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Bengaluru: ಪ್ರೀತಿಸಿ ಅವೈಡ್ ಮಾಡಿದ ಪ್ರಿಯತಮೆ; ಮನಸೋ ಇಚ್ಛೆ ಇರಿದು ಯುವತಿಯನ್ನು ಕೊಲೆ ಮಾಡಿದ ಪಾಗಲ್ ಪ್ರೇಮಿ!
ಸಾಂದರ್ಭಿಕ ಚಿತ್ರ
Follow us
Rakesh Nayak Manchi
|

Updated on:Feb 28, 2023 | 10:40 PM

ಬೆಂಗಳೂರು: ತನ್ನನ್ನು ಆವೈಡ್ ಮಾಡಿದಳೆಂದು ಆಕ್ರೋಶಗೊಂಡ ಯುವಕನೊಬ್ಬ ತನ್ನ ಪ್ರಿಯತಮೆಯನ್ನೇ ಬರ್ಬರವಾಗಿ ಹತ್ಯೆ (Lover Murder at Bengaluru) ಮಾಡಿದ ಘಟನೆ ನಗರದ ಜೀವನ್ ಭಿಮಾ ನಗರ ಠಾಣೆ ವ್ಯಾಪ್ತಿಯ ವಿಂಡ್ ಟನಲ್ ರಸ್ತೆಯಲ್ಲಿ ಇಂದು ಸಂಜೆ (ಫೆಬ್ರವರಿ 28) ನಡೆದಿದೆ. ಆಂಧ್ರಪ್ರದೇಶ ಮೂಲದ ಲೀಲಾಪವಿತ್ರಾ (28) ಕೊಲೆಯಾದ ಯುವತಿಯಾಗಿದ್ದಾಳೆ. ದಿವಾಕರ್ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಈತನೂ ಆಂಧ್ರಪ್ರದೇಶ ಮೂಲದವನಾಗಿದ್ದಾನೆ. ಪ್ರಕರಣ ಸಂಬಂಧ ಜೀವನ್ ಭೀಮಾ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದಿವಾಕರ್​ನನ್ನು ಅರೆಸ್ಟ್ ಮಾಡಿದ್ದಾರೆ.

ಲೀಲಾಪವಿತ್ರಾ ಮತ್ತು ದಿವಾಕರ ಎಂಬವರು ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ವಿಂಡ್ ಟನಲ್ ರಸ್ತೆಯಲ್ಲಿರುವ ಕಚೇರಿಯೊಂದರಲ್ಲಿ ಆಕೆ ಕೆಲಸ ಮಾಡುತ್ತಿದ್ದಳು. ಆದರೆ ಇತ್ತೀಚೆಗೆ ಆಕೆ ದಿವಾಕರನಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದಾಳೆ. ಎಷ್ಟೇ ಯತ್ನಿಸಿದರೂ ಆಕೆಯನ್ನು ತನ್ನ ದಾರಿಗೆ ತರಲಾಗದೆ ಕೋಪಗೊಂಡ ದಿವಾಕರ, ಆಕೆಯನ್ನು ಹತ್ಯೆ ಮಾಡುವ ಚಿಂತನೆ ನಡೆಸಿದ್ದಾನೆ. ಅದರಂತೆ ಇಂದು ಸಂಜೆ 7 ಗಂಟೆ ಸುಮಾರಿಗೆ ವಿಂಡ್ ಟನಲ್ ರಸ್ತೆಯಲ್ಲಿರುವ ಕಚೇರಿಯಿಂದ ಕೆಲಸ ಮುಗಿಸಿ ಹೊರ ಬಂದಾಗ ಯುವತಿಯ ಮೇಲೆ ದಾಳಿ ನಡೆಸಿದ ದಿವಾಕರ, ಚಾಕುವಿನಿಂದ 16ಕ್ಕೂ ಹೆಚ್ಚು ಬಾರಿ ಇರಿದಿದ್ದಾನೆ. ಪರಿಣಾಮವಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ: ಬೀದರ್​​​: ಪ್ರತ್ಯೇಕ ಘಟನೆಗಳಲ್ಲಿ ತಾಯಿಯ ಕಣ್ಣೆದುರೇ ಮಗನ ಕೊಲೆ, ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೇಟ್ ಕ್ಯಾಶ್ ಕೌಂಟರ್​ಗೆ‌ ಲಾರಿ ಡಿಕ್ಕಿ

ದಾರವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೇಟ್ ಕ್ಯಾಶ್ ಕೌಂಟರ್​ಗೆ‌ ಲಾರಿ ಡಿಕ್ಕಿಯಾದ ಘಟನೆ ತಾಲೂಕಿನ ಹೆಬ್ಬಾಳ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಂಬರ್ 48 ರಲ್ಲಿ ನಡೆದಿದೆ. ಹುಬ್ಬಳ್ಳಿ‌ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಟೋಲ್ ಗೇಟ್ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಟೋಲ್ ಗೇಟ್ ಕ್ಯಾಶ್ ಕೌಂಟರ್​ಗೆ‌ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಕೌಂಟರ್​ ಕಡೆಗೆ ನುಗ್ಗುತ್ತಿರುವುದನ್ನು ನೋಡಿದ ತಕ್ಷಣ ಟೋಲ್ ಗೇಜ್ ಸಿಬ್ಬಂದಿ ಸಿನಿಮೀಯ ಶೈಲಿಯಲ್ಲಿ ಪಕ್ಕಕ್ಕೆ ಜಿಗಿದು ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Tue, 28 February 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ