ಬೆಂಗಳೂರು: ತನ್ನನ್ನು ಆವೈಡ್ ಮಾಡಿದಳೆಂದು ಆಕ್ರೋಶಗೊಂಡ ಯುವಕನೊಬ್ಬ ತನ್ನ ಪ್ರಿಯತಮೆಯನ್ನೇ ಬರ್ಬರವಾಗಿ ಹತ್ಯೆ (Lover Murder at Bengaluru) ಮಾಡಿದ ಘಟನೆ ನಗರದ ಜೀವನ್ ಭಿಮಾ ನಗರ ಠಾಣೆ ವ್ಯಾಪ್ತಿಯ ವಿಂಡ್ ಟನಲ್ ರಸ್ತೆಯಲ್ಲಿ ಇಂದು ಸಂಜೆ (ಫೆಬ್ರವರಿ 28) ನಡೆದಿದೆ. ಆಂಧ್ರಪ್ರದೇಶ ಮೂಲದ ಲೀಲಾಪವಿತ್ರಾ (28) ಕೊಲೆಯಾದ ಯುವತಿಯಾಗಿದ್ದಾಳೆ. ದಿವಾಕರ್ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಈತನೂ ಆಂಧ್ರಪ್ರದೇಶ ಮೂಲದವನಾಗಿದ್ದಾನೆ. ಪ್ರಕರಣ ಸಂಬಂಧ ಜೀವನ್ ಭೀಮಾ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದಿವಾಕರ್ನನ್ನು ಅರೆಸ್ಟ್ ಮಾಡಿದ್ದಾರೆ.
ಲೀಲಾಪವಿತ್ರಾ ಮತ್ತು ದಿವಾಕರ ಎಂಬವರು ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ವಿಂಡ್ ಟನಲ್ ರಸ್ತೆಯಲ್ಲಿರುವ ಕಚೇರಿಯೊಂದರಲ್ಲಿ ಆಕೆ ಕೆಲಸ ಮಾಡುತ್ತಿದ್ದಳು. ಆದರೆ ಇತ್ತೀಚೆಗೆ ಆಕೆ ದಿವಾಕರನಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದಾಳೆ. ಎಷ್ಟೇ ಯತ್ನಿಸಿದರೂ ಆಕೆಯನ್ನು ತನ್ನ ದಾರಿಗೆ ತರಲಾಗದೆ ಕೋಪಗೊಂಡ ದಿವಾಕರ, ಆಕೆಯನ್ನು ಹತ್ಯೆ ಮಾಡುವ ಚಿಂತನೆ ನಡೆಸಿದ್ದಾನೆ. ಅದರಂತೆ ಇಂದು ಸಂಜೆ 7 ಗಂಟೆ ಸುಮಾರಿಗೆ ವಿಂಡ್ ಟನಲ್ ರಸ್ತೆಯಲ್ಲಿರುವ ಕಚೇರಿಯಿಂದ ಕೆಲಸ ಮುಗಿಸಿ ಹೊರ ಬಂದಾಗ ಯುವತಿಯ ಮೇಲೆ ದಾಳಿ ನಡೆಸಿದ ದಿವಾಕರ, ಚಾಕುವಿನಿಂದ 16ಕ್ಕೂ ಹೆಚ್ಚು ಬಾರಿ ಇರಿದಿದ್ದಾನೆ. ಪರಿಣಾಮವಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿ: ಬೀದರ್: ಪ್ರತ್ಯೇಕ ಘಟನೆಗಳಲ್ಲಿ ತಾಯಿಯ ಕಣ್ಣೆದುರೇ ಮಗನ ಕೊಲೆ, ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ದಾರವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೇಟ್ ಕ್ಯಾಶ್ ಕೌಂಟರ್ಗೆ ಲಾರಿ ಡಿಕ್ಕಿಯಾದ ಘಟನೆ ತಾಲೂಕಿನ ಹೆಬ್ಬಾಳ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಂಬರ್ 48 ರಲ್ಲಿ ನಡೆದಿದೆ. ಹುಬ್ಬಳ್ಳಿಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಟೋಲ್ ಗೇಟ್ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಟೋಲ್ ಗೇಟ್ ಕ್ಯಾಶ್ ಕೌಂಟರ್ಗೆ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಕೌಂಟರ್ ಕಡೆಗೆ ನುಗ್ಗುತ್ತಿರುವುದನ್ನು ನೋಡಿದ ತಕ್ಷಣ ಟೋಲ್ ಗೇಜ್ ಸಿಬ್ಬಂದಿ ಸಿನಿಮೀಯ ಶೈಲಿಯಲ್ಲಿ ಪಕ್ಕಕ್ಕೆ ಜಿಗಿದು ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದಾರೆ.
ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:39 pm, Tue, 28 February 23