ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ

ವಿದೇಶದಿಂದ ಉಡುಗೊರೆಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಸದ್ಯ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 10, 2023 | 6:02 PM

ಬೆಂಗಳೂರು, ಆಗಸ್ಟ್​ 10: ವಿದೇಶದಿಂದ ಉಡುಗೊರೆ (foreign gift) ಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ 5 ಲಕ್ಷ ರೂಪಾಯಿ ಪಡೆದು ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ನಿವಾಸಿ ಆಗಿರುವ ಪ್ಯಾಟ್ರಿಕ್ ರೋಹನ್​ ಎಂಬುವವರು ವಂಚನೆಗೊಳಗಾದ ವ್ಯಕ್ತಿ. ಫೇಸ್​ ಬುಕ್​ನಲ್ಲಿ ನಾಲ್ವರು ಅಪರಿಚಿತರ ಸ್ನೇಹ ಬೆಳೆಸಿ ಇದೀಗ ಲಕ್ಷಾಂತರ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರೋಹನ್​ಗೆ ಫೇಸ್​ ಬುಕ್​ನಲ್ಲಿ ಮಿಸ್ ಝಾ ಎಂಬ ಅಪರಿಚಿತ ವ್ಯಕ್ತಿಯ ಗೆಳೆತನವಿತ್ತು. ಆಕೆ ಲಂಡನ್‌ನಲ್ಲಿ ಡಿಸೈನರ್ ಆಗಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದಳು. ಇತ್ತ ರೋಹನ್​ ನಂಬುತ್ತಿದ್ದಂತೆ ಮಿಸ್ ಝಾ ತನ್ನ ಇತರೆ ಸ್ನೇಹಿತರಾದ ಪ್ರಿಯಾಂಕ್ ಸಕ್ಸೇನಾ, ಗೌತಮ್ ಸೇನ್ ಮತ್ತು ರೋಹಿತ್ ಜೈನ್​ ಎನ್ನುವವರನ್ನು ಪರಿಚಯಿಸಿದ್ದು, ನಾವು ಸ್ನೇಹಿತರೆಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಣ್ಣ ಪುತ್ರ ಗೌತಮ್​ ಆತ್ಮಹತ್ಯೆ: ಕಂಟ್ರಾಕ್ಟರ್ ಆಗಿದ್ದರೇ?

ಶರ್ಟ್‌, ಬೂಟ್​ ಮತ್ತು ಉಂಗುರಗಳಂತಹ ಉಡುಗೊರೆಗಳನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದು, ಅದಕ್ಕೆ ಕಸ್ಟಮ್ಸ್‌ನಲ್ಲಿ ಪಾವತಿಸಲು ಪ್ರಿಯಾಂಕ್ ಸಕ್ಸೇನಾಗೆ ಹಣ ಕಳುಹಿಸುವಂತೆ ಮಿಸ್ ಝಾ ರೋಹನ್​ಗೆ ಹೇಳಿದ್ದಾಳೆ. ಇತ್ತ ರೋಹನ್ ಹಣವನ್ನು ವರ್ಗಾಯಿಸುತ್ತಿದ್ದಂತೆ ಆರೋಪಿಗಳು ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:00 pm, Thu, 10 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ