ಬೆಂಗಳೂರು: ಪತ್ನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ ಪತಿಗೆ ಜೈಲು ಶಿಕ್ಷೆ, 45000 ರೂ. ದಂಡ

ವಿದೇಶದಲ್ಲಿರುವ ಪತ್ನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ ವ್ಯಕ್ತಿಯೊಬ್ಬನಿಗೆ ಬೆಂಗಳೂರಿನ ಸ್ಥಳಿಯ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಅಷ್ಟಕ್ಕೂ ಆಪಾದಿತ ಮತ್ತು ಆತನ ಪತ್ನಿಯ ನಡುವಿನ ವಿರಸಕ್ಕೆ ಕಾರಣವೇನು? ಅಶ್ಲೀಲ ವಿಡಿಯೋ ಕಳುಹಿಸಿದ್ದಕ್ಕೆ ಆತನಿಗೆ ವಿಧಿಸಲಾದ ಶಿಕ್ಷೆ ಏನು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು: ಪತ್ನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ ಪತಿಗೆ ಜೈಲು ಶಿಕ್ಷೆ, 45000 ರೂ. ದಂಡ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Mar 19, 2024 | 10:50 AM

ಬೆಂಗಳೂರು, ಮಾರ್ಚ್​ 19: ಪತ್ನಿಗೆ ಇಮೇಲ್ ಮೂಲಕ ಅಶ್ಲೀಲ ವೀಡಿಯೋ ಕಳುಹಿಸಿದ 30ರ ಹರೆಯದ ವ್ಯಕ್ತಿಯೊಬ್ಬನನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ (IT Act) ಅಪರಾಧಿ ಎಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದ್ದು, ಒಂದು ತಿಂಗಳ ಜೈಲು ಶಿಕ್ಷೆ ಮತ್ತು 45,000 ರೂ. ದಂಡ ವಿಧಿಸಿದೆ. ರಾಜಾಜಿನಗರದ (Rajajinagar) ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿಯ ವಿರುದ್ಧ ಸಿಐಡಿ ಪೊಲೀಸರು (CID Police) ದೋಷಾರೋಪ ಹೊರಿಸಿದ್ದರು. ಶಿಕ್ಷೆಗೊಳಗಾದ ವ್ಯಕ್ತಿಯ ಪತ್ನಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

2016 ರಲ್ಲಿ ಇಬ್ಬರೂ ಮದುವೆಯಾಗಿದ್ದರು. ನಂತರದಲ್ಲಿ ಅವರ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿತ್ತು. ಬಳಿಕ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ತನಿಖಾಧಿಕಾರಿಯೊಬ್ಬರು ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಅಶ್ಲೀಲ ವಿಡಿಯೋ ಕಳುಹಿಸಿದ್ದ ಬಗ್ಗೆ ಸಂತ್ರಸ್ತೆಯ ಕಿರಿಯ ಸಹೋದರ ದೂರು ದಾಖಲಿಸಿದ್ದರು. ನಂತರ ಮಹಿಳೆ ಕೂಡ ಬೆಂಗಳೂರಿಗೆ ಆಗಮಿಸಿ ದೂರು ನೀಡಿದ್ದರು. ಅದರಂತೆ ಪೊಲೀಸರು ಎಫ್‌ಐಆ‌ರ್ ದಾಖಲಿಸಿದ್ದರು. ಆರೋಪಿಯು ಅಶ್ಲೀಲ ವೀಡಿಯೊ ಲಿಂಕ್ ಅನ್ನು ಆತನ ಪತ್ನಿಗೆ ಕಳುಹಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾಗಿ ವರದಿ ಉಲ್ಲೇಖಿಸಿದೆ.

ಇತ್ತೀಚೆಗೆ ನಡೆದ ಇನ್ನೊಂದು ಘಟನೆಯಲ್ಲಿ ಪತ್ನಿಯು ಪತಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವಿವಾಹ ವಾರ್ಷಿಕೋತ್ಸವದ ಉಡುಗೊರೆ ಕೊಡದ ಕಾರಣ 35 ವರ್ಷದ ಮಹಿಳೆ ಪತಿ ಮಲಗಿದ್ದಾಗ ಅಡುಗೆಮನೆಯ ಚಾಕುವನ್ನು ಬಳಸಿ ಕೈಗೆ ಇರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಚ್ಚೆತ್ತುಕೊಂಡ ಪತಿಯು ಪತ್ನಿಯನ್ನು ದೂರ ತಳ್ಳಿ ಅಕ್ಕಪಕ್ಕದವರ ಸಹಾಯ ಪಡೆದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಆರೋಪಿ ಮಹಿಳೆಯು ಕೆಲವು ವೈಯಕ್ತಿಕ ಸಮಸ್ಯೆಗಳಿಂದ ತೊಂದರೆಗೀಡಾಗಿದ್ದಾರೆ. ಆಕೆಯನ್ನು ತಜ್ಞರ ಬಳಿ ಸಮಾಲೋಚನೆಗೆ ಒಳಪಡಿಸಬೇಕು ಎಂದು ಬಯಸಿದ್ದಾಗಿ ಪತಿ ಹೇಳಿರುವುದನ್ನು ಸಹ ವರದಿ ಉಲ್ಲೇಖಿಸಿದೆ.

ರಾಮನಗರ: ವಾಹನ ಡಿಕ್ಕಿ, ವಿದ್ಯಾರ್ಥಿ ಸ್ಥಿತಿ ಗಂಭೀರ

ವಾಹನ ಡಿಕ್ಕಿಯಾಗಿ ಎಂಜಿನಿಯರಿಂಗ್ ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ರಾಮನಗರ ಜಿಲ್ಲೆ ಹಾರೋಹಳ್ಳಿ ತಾಲೂಕಿನ ಜೈನ್ ವಿವಿ ಹಾಸ್ಟೆಲ್ ಬಳಿ ಸಂಭವಿಸಿದೆ. ಆಂಧ್ರಪ್ರದೇಶದ ಮೂಲದ ವಿದ್ಯಾರ್ಥಿ ತೇಜಸ್ ರೆಡ್ಡಿ (19) ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತೇಜಸ್ ರೆಡ್ಡಿ ಜೈನ್ ವಿವಿಯಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಭಾಗ್ಯ ಪಡೆಯಲು ಅಕ್ಕನನ್ನೇ ಮದುವೆಯಾದ… ಆಮೇಲೆ ಏನಾಯ್ತು?

ಹಾಸ್ಟೆಲ್ ಮುಂದೆ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿತ್ತು. ಜೈನ್ ವಿವಿ ಹಾಸ್ಟೆಲ್ ಮುಂದಿನ ಬೆಂಗಳೂರು-ಕನಕಪುರ ಹೆದ್ದಾರಿಯಲ್ಲಿ ಘಟನೆ ಸಂಭಿಸಿತ್ತು. ಗಾಯಾಳು ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ತೇಜಸ್ ಬದುಕಿಲ್ಲ ಆದರೂ ಆಸ್ಪತ್ರೆಗೆ ಕರೆದೊಯ್ದಿದ್ದಾರೆಂದು ಇತರ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೈನ್ ವಿವಿ ಹಾಸ್ಟೆಲ್ ಆವರಣದಲ್ಲಿ ಊಟಬಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಜೈನ್ ವಿವಿಯ ಅವೈಜ್ಞಾನಿಕ ನಡೆಯಿಂದ ಅಪಘಾತವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:48 am, Tue, 19 March 24

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ