ಬೆಂಗಳೂರು: ಮೊಬೈಲ್ ಶಾಪ್​ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ್ದ ಐವರು ಅರೆಸ್ಟ್​​

ಬೆಂಗಳೂರಿನ ನಗರತ್​ಪೇಟೆಯಲ್ಲಿರುವ ಮೊಬೈಲ್​ ಅಂಗಡಿಯಲ್ಲಿ ಜೋರಾಗಿ ಸೌಂಡ್​ ಇಟ್ಟು ಹನುಮಾನ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಲಾಗಿತ್ತು. ಹಲ್ಲೆ ಮಾಡಿದ್ದ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಮೊಬೈಲ್ ಶಾಪ್​ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ್ದ ಐವರು ಅರೆಸ್ಟ್​​
ಮೊಬೈಲ್ ಶಾಪ್​ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ

Updated on: Mar 19, 2024 | 9:39 AM

ಬೆಂಗಳೂರು, ಮಾರ್ಚ್​​ 19: ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ (Hanuman Chalisa) ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ (Assault) ನಡೆಸಿದ್ದ ಮತ್ತಿಬ್ಬರು ಆರೋಪಿಗಳನ್ನು ನಿನ್ನೆ (ಮಾ.14)ರ ರಾತ್ರಿ ಹಲಸೂರುಗೇಟ್ ಪೊಲೀಸರು (Halasuru Gate Police) ವಶಕ್ಕೆ ಪಡೆಯುವ ಮೂಲಕ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಪೊಲೀಸ್​ ಕಸ್ಟಡಿಯಲ್ಲಿದ್ದಾರೆ. ಐವರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಏನಿದು ಪ್ರಕರಣ

ನಗರತ್​ಪೇಟೆಯಲ್ಲಿರುವ ಮೊಬೈಲ್ ಶಾಪ್​ನಲ್ಲಿ ಯುವಕ ಹುನುಮಾನ್​ ಚಾಲಿಸಾ ಅನ್ನು ಜೋರು ಸೌಂಡ್​ ಇಟ್ಟು ಹಚ್ಚಿದ್ದರು. ಈ ವೇಳೆ ಅಂಗಡಿಗೆ ಬಂದ ಆರು ಜನ ಯುವಕರು ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ ಎಂದಿದ್ದರು. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ನಂತರ ಆರು ಜನ ಯುವಕರು ಅಂಗಡಿಯಲ್ಲಿದ್ದ ಯುವಕ ಮುಖೇಶ್​ ಅವರ ಕೊರಳ ಪಟ್ಟಿ ಹಿಡಿದು, ಅಂಗಡಿಯಿಂದ ಹೊರಗೆ ಎಳೆದೊಯ್ದು ಹಲ್ಲೆ ಮಾಡಿದ್ದರು.

ಗ್ಯಾಂಗ್​ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇನ್ನು ಗಾಯಗೊಂಡ ಮುಖೇಶ್​ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ​ದೂರು ದಾಖಲಿಸಿದ್ದರು. ಯುವಕನ ದೂರಿನನ್ವಯ, ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಐವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ; ತೀವ್ರ ಸ್ವರೂಪ ಪಡೆದ ಪ್ರಕರಣ; ಕಠಿಣ ಕ್ರಮಕ್ಕೆ ವಿಜಯೇಂದ್ರ ಆಗ್ರಹ

ಕರ್ನಾಟಕ ತಾಲಿಬಾನ್ ಆಗಿ ಬದಲಾಗುತ್ತಿದೆ: ಬಿಜೆಪಿ

ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ. ಬೆಂಗಳೂರಿನ ಸಿದ್ದಣ್ಣಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ.

ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ ಸಮಯದಲ್ಲಿ ಭಕ್ತಿ ಗೀತೆಗಳನ್ನು ಹಾಕಿದ್ದೇ ಮತಾಂದ ದುರುಳರು ಹಲ್ಲೆ ಮಾಡಲು ಕಾರಣ‌. ಹಲ್ಲೆಗೊಳಗಾದ ಮುಖೇಶ್ ಹಲಸೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೂ, ಪೊಲೀಸರು ದೂರು ದಾಖಲಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ ಎಂದರೆ, ಇದರ ಹಿಂದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರದ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ.

ಕೂಡಲೇ ಪಾ’ಕೈ’ಸ್ತಾನ್ ಸರ್ಕಾರ ಮತಾಂಧ ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ! ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ