ಬೆಂಗಳೂರಿನಲ್ಲಿ ದಿನೇ ದಿನೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ, ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೆಗಡೆನಗರ ನಿವಾಸಿ ಸಲ್ಮಾನ್ ಕೊಲೆಯಾದ ಯುವಕ, ಆತ ತಂದೆಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ, ರಾತ್ರಿ 11 ಗಂಟೆಯ ವೇಳೆಗೆ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸಮಯದಲ್ಲಿ ಹತ್ಯೆ ನಡೆದಿದೆ.
ನಡುರಸ್ತೆಯಲ್ಲೇ ಸಲ್ಮಾನ್ಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ, ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದಾರೆ, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.
ಯಾವ ಕಾರಣಕ್ಕಾಗಿ ಹತ್ಯೆ ನಡೆದಿರಬಹುದು, ಹಂತಕ ಹಾಗೂ ಸಲ್ಮಾನ್ಗೆ ಈ ಹಿಂದೆ ಯಾವುದಾದರೂ ವಿಚಾರಕ್ಕೆ ದ್ವೇಷವಿತ್ತಾ?, ಕೊಲೆಗಾರರು ಸಲ್ಮಾನ್ಗೆ ಪರಿಚಿತರೇ? ಯಾವ ಕಾರಣಕ್ಕಾಗಿ ಹತ್ಯೆ ನಡೆದಿರಬಹುದು ಎನ್ನುವ ವಿಚಾರವನ್ನು ತಿಳಿಯಲು ಪೊಲೀಸರು ಪ್ರಯತ್ನ ನಡೆಸಿದ್ದಾರೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ