AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಮಾರಕಾಸ್ತ್ರಗಳಿಂದ ಹೊಡೆದು ಬೈಕ್​ನಲ್ಲಿ ತೆರಳುತ್ತಿದ್ದ ರೌಡಿ ಶೀಟರ್​​ ಹತ್ಯೆ

ಬೈಕ್ ಓಡಿಸುತ್ತಿದ್ದ ಸತೀಶ್ ಎಂಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತ್ಯಾಮಗೋಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Bengaluru Crime: ಮಾರಕಾಸ್ತ್ರಗಳಿಂದ ಹೊಡೆದು ಬೈಕ್​ನಲ್ಲಿ ತೆರಳುತ್ತಿದ್ದ ರೌಡಿ ಶೀಟರ್​​ ಹತ್ಯೆ
ಹತ್ಯೆಗೀಡಾದ ಜೈಶ್ರೀರಾಮ್
TV9 Web
| Edited By: |

Updated on:Oct 04, 2021 | 3:30 PM

Share

ನೆಲಮಂಗಲ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಓರ್ವನನ್ನು ನೆಲಮಂಗಲದ ಇಂದಿರಾನಗರ ಬಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಜೈಶ್ರೀರಾಮ್ ಕುಳಿತಿದ್ದ ಚಲಿಸುತ್ತಿದ್ದ ಬೈಕ್‌ಗೆ ಕಾರಿನಲ್ಲಿ ಬಂದು ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ರಭಸಕ್ಕೆ ಜೈಶ್ರೀರಾಮ್‌ ಬೈಕ್​ನಿಂದ ನೆಲಕ್ಕೆ ಬಿದ್ದಿದ್ದರು. ಈವೇಳೆ ದಾಳಿ ನಡೆಸಿರುವ ದುಷ್ಕರ್ಮಿಗಳು ಜೈಶ್ರೀರಾಮ್ ಅವರನ್ನು ಹತ್ಯೆಗೈದಿದ್ದಾರೆ. ಬೈಕ್ ಓಡಿಸುತ್ತಿದ್ದ ಸತೀಶ್ ಎಂಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತ್ಯಾಮಗೋಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Crime News: ಮೊಬೈಲ್ ಟವರ್​ಗಳಿಂದ ಚಿಪ್ ಕದಿಯುತ್ತಿದ್ದ ವ್ಯಕ್ತಿ ಬಂಧನ ಮೊಬೈಲ್​ ಟವರ್​ಗಳಲ್ಲಿ ಇರುವ ಚಿಪ್​ ಕದಿಯುತ್ತಿದ್ದ ಖತರ್ನಾಕ್ ಕಳ್ಳನನ್ನು ಸೆರೆ ಹಿಡಿಯಲಾಗಿದೆ. ಬೆಂಗಳೂರಿನ ಪೀಣ್ಯ ಪೊಲೀಸರಿಂದ ಗಂಗಾಧರ್​ ಎಂಬಾತನನ್ನು ಬಂಧಿಸಲಾಗಿದೆ. 25 ಲಕ್ಷ ರೂಪಾಯಿ ಮೌಲ್ಯದ 19 ಮೊಬೈಲ್ ಟವರ್ ಚಿಪ್ ವಶಕ್ಕೆ ಪಡೆಯಲಾಗಿದೆ. ಖಾಸಗಿ ಮೊಬೈಲ್ ಕಂಪೆನಿಯಲ್ಲಿ ಸೈಟ್ ಇಂಜಿನಿಯರ್ ಆಗಿದ್ದ ಗಂಗಾಧರ್ ಕದ್ದ ಚಿಪ್​ಗಳನ್ನು ನೂರಿನ್ನೂರು ರೂಪಾಯಿಗೆ ಮಾರುತ್ತಿದ್ದ ಎಂದು ತಿಳಿದುಬಂದಿದೆ.

ಗಂಗಾಧರ್ ಮೊಬೈಲ್ ಟವರ್​ಗಳಿಗೆ ಹೋಗಿ ಬೆಲೆಬಾಳೋ ಚಿಪ್ ಗಳನ್ನ ಕಳ್ಳತನ ಮಾಡ್ತಿದ್ದ. ಈ ಬಗ್ಗೆ ಮೊಬೈಲ್ ಕಂಪೆನಿಯವರು ಪೀಣ್ಯ ಠಾಣೆಗೆ ದೂರನ್ನು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರಿಂದ ಗಂಗಾಧರ್ ಬಂಧನವಾಗಿದೆ. ಐಟಿಐ ಓದಿದವನು ಎಲೆಕ್ಟ್ರಾನಿಕ್ ವಸ್ತುಗಳ ಮಾರಿ ಹಣ ಮಾಡಲು ತಂತ್ರ ಹೂಡಿದ್ದ. ಕೊರೊನಾ ಕಾಲದಲ್ಲಿ ಆತನನ್ನು ಕಂಪನಿಯಿಂದ ಗೇಟ್ ಪಾಸ್ ನೀಡಲಾಗಿತ್ತು. ಕೆಲಸದಿಂದ ಆಚೆ ಹಾಕಿದ ಕಂಪನಿಯಿಂದಲೇ ಕಳ್ಳತನ ಮಾಡಿದ್ದ. ಕಳೆದ ಆರು ತಿಂಗಳ ಹಿಂದೆ ಕೆಲಸ ಕಳೆದುಕೊಂಡಿದ್ದ ಗಂಗಾಧರ್ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದ.

ಟೆಲಿಕಾಂ ಕಂಪನಿಯ ಟವರ್​ಗಳ ಮ್ಯಾನೇಜ್ ಕೆಲಸ ನಿರ್ವಹಿಸುವ ಕಂಪನಿಯಲ್ಲಿ ಕೆಲಸಕ್ಕಿದ್ದ ಗಂಗಾಧರ್ ಟವರ್​ಗಳ ಸಂಪೂರ್ಣ ಮಾಹಿತಿ ಹೊಂದಿದ್ದ. ಕೆಲಸ ಕಳೆದುಕೊಂಡ ಬಳಿಕ ಹಣವಿಲ್ಲದೇ ಪರದಾಟ ಪಟ್ಟಿದ್ದ. ಬಳಿಕ ಈ ಕೃತ್ಯಕ್ಕೆ ಕೈ ಹಾಕಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಪೀಣ್ಯ, ಕೊಣನಕುಂಟೆ, ಪುಲಕೇಶಿನಗರ ಸೇರಿದಂತೆ ಕನಕಪುರದಲ್ಲೂ ಚಿಪ್ ಕಳ್ಳತನ ಮಾಡಿದ್ದ.

ಕದ್ದ ಮಾಲಿನ ಮೌಲ್ಯ ಗೊತ್ತಿದ್ದು ಸರಿಯಾದ ಮೌಲ್ಯಕ್ಕೆ ಮಾರಲಾಗದೆ ಪರದಾಟ ಪಟ್ಟಿದ್ದ. ಬಳಿಕ ಗುಜಿರಿ ಅಂಗಡಿಗೆ ಐನೂರು ರೂಪಾಯಿಗೆ ಮಾರಿದ್ದ ಎಂದು ಕೂಡ ತಿಳಿದುಬಂದಿದೆ. ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಒಟ್ಟು 9 ಪ್ರಕರಣ ಪತ್ತೆಯಾಗಿದೆ. ಪೀಣ್ಯ ಪೊಲೀಸರು ಆರೋಪಿಯ ವಿಚಾರಣೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: 

ಯಾರ ವಿರುದ್ಧ ನಿಮ್ಮ ಪ್ರತಿಭಟನೆ: ಕೃಷಿ ಕಾಯ್ದೆ ವಿರೋಧಿ ಪ್ರತಿಭಟನೆಯ ಔಚಿತ್ಯವನ್ನೇ ಪ್ರಶ್ನಿಸಿದ ಸುಪ್ರೀಂಕೋರ್ಟ್

Oral Health: ನೀವು ಆರೋಗ್ಯವಾಗಿರಲು ಬಾಯಿ ಸ್ವಚ್ಛವಾಗಿರುವುದು ಏಕೆ ಮುಖ್ಯ? ಇಲ್ಲಿದೆ ಮಾಹಿತಿ

Published On - 3:04 pm, Mon, 4 October 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್