AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಇನ್​ಸ್ಪೆಕ್ಟರ್ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳಿಂದಲೇ ಹಣ ಸುಲಿಗೆ, ವಂಚಕ ಅರೆಸ್ಟ್

ಆರೋಪಿಯು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಸುಲಿಗೆ ಕರೆಗಳನ್ನು ಮಾಡಿದ್ದ. ಸುಮಾರು 40 ರಿಂದ 50 ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿದ್ದಾನೆ. ಆರೋಪಿಯು ಕ್ರಿಮಿನಲ್ ಹಿನ್ನೆ ಉಳ್ಳವನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೋಕಾಯುಕ್ತ ಇನ್​ಸ್ಪೆಕ್ಟರ್ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳಿಂದಲೇ ಹಣ ಸುಲಿಗೆ, ವಂಚಕ ಅರೆಸ್ಟ್
ಶ್ರೀನಿವಾಸ್ ರೆಡ್ಡಿ
TV9 Web
| Updated By: Ganapathi Sharma|

Updated on: Jan 02, 2024 | 2:51 PM

Share

ಬೆಂಗಳೂರು, ಜನವರಿ 2: ಲೋಕಾಯುಕ್ತ ಇನ್ಸ್‌ಪೆಕ್ಟರ್ (Lokayukta Inspector) ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು (CCB Police) ಬಂಧಿಸಿದ್ದಾರೆ. ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ ರೆಡ್ಡಿ ಎಂದು ಗುರುತಿಸಲಾಗಿದೆ. ವಂಚನೆಗೊಳಗಾಗಿರುವ ಬಗ್ಗೆ ಸರ್ಕಾರಿ ಅಧಿಕಾರಿ ರಾಮದಾಸ್ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿಯನ್ನು ಬಂಧಿಸಲಾಗಿದೆ.

‘ಲೋಕಾಯುಕ್ತ ಇನ್ಸ್‌ಪೆಕ್ಟರ್ ಸೋಗಿನಲ್ಲಿ ಅಧಿಕಾರಿಗಳಿಗೆ ಕರೆ ಮಾಡಿ ಅವರಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಅಧಿಕಾರಿಯಿಂದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದಾರೆ.

ಆರೋಪಿಯು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡಿದ್ದಾನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯು ಚಲನಚಿತ್ರದಿಂದ ಸ್ಫೂರ್ತಿ ಪಡೆದ ನಂತರ ಅಧಿಕಾರಿಗಳಿಂದ ಸುಲಿಗೆ ಮಾಡಲು ಪ್ರಾರಂಭಿಸಿದ್ದ.

ಆರೋಪಿಯು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಸುಲಿಗೆ ಕರೆಗಳನ್ನು ಮಾಡಿದ್ದ. ಸುಮಾರು 40 ರಿಂದ 50 ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿದ್ದಾನೆ. ಆರೋಪಿಯು ಕ್ರಿಮಿನಲ್ ಹಿನ್ನೆ ಉಳ್ಳವನಾಗಿದ್ದಾನೆ. ಈತ 2007ರ ಹಿಂದಿನ ದರೋಡೆ ಪ್ರಕರಣಗಳಲ್ಲಿ ಶಾಮೀಲಾಗಿದ್ದ. ತೆಲುಗು ಸಿನಿಮಾವೊಂದರಿಂದ ಪ್ರೇರಿತನಾಗಿ ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಲು ಆರಂಭಿಸಿದ್ದ ಎಂದು ಬಿ ದಯಾನಂದ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್​

ಶ್ರೀನಿವಾಸ್ ರೆಡ್ಡಿ 10 ನೇ ತರಗತಿಯವರೆಗೆ ಓದಿದ್ದಾನೆ ಮತ್ತು 2007 ರಿಂದ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿದ್ದಾನೆ. ಈತನ ವಿರುದ್ಧ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ 36 ಪ್ರಕರಣಗಳು ದಾಖಲಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ