ಬೆಂಗಳೂರು, ಜನವರಿ 2: ಲೋಕಾಯುಕ್ತ ಇನ್ಸ್‌ಪೆಕ್ಟರ್ (Lokayukta Inspector) ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು (CCB Police) ಬಂಧಿಸಿದ್ದಾರೆ. ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ ರೆಡ್ಡಿ ಎಂದು ಗುರುತಿಸಲಾಗಿದೆ. ವಂಚನೆಗೊಳಗಾಗಿರುವ ಬಗ್ಗೆ ಸರ್ಕಾರಿ ಅಧಿಕಾರಿ ರಾಮದಾಸ್ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿಯನ್ನು ಬಂಧಿಸಲಾಗಿದೆ.
‘ಲೋಕಾಯುಕ್ತ ಇನ್ಸ್‌ಪೆಕ್ಟರ್ ಸೋಗಿನಲ್ಲಿ ಅಧಿಕಾರಿಗಳಿಗೆ ಕರೆ ಮಾಡಿ ಅವರಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಅಧಿಕಾರಿಯಿಂದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದಾರೆ.
ಆರೋಪಿಯು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡಿದ್ದಾನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯು ಚಲನಚಿತ್ರದಿಂದ ಸ್ಫೂರ್ತಿ ಪಡೆದ ನಂತರ ಅಧಿಕಾರಿಗಳಿಂದ ಸುಲಿಗೆ ಮಾಡಲು ಪ್ರಾರಂಭಿಸಿದ್ದ.
ಆರೋಪಿಯು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಸುಲಿಗೆ ಕರೆಗಳನ್ನು ಮಾಡಿದ್ದ. ಸುಮಾರು 40 ರಿಂದ 50 ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿದ್ದಾನೆ. ಆರೋಪಿಯು ಕ್ರಿಮಿನಲ್ ಹಿನ್ನೆ ಉಳ್ಳವನಾಗಿದ್ದಾನೆ. ಈತ 2007ರ ಹಿಂದಿನ ದರೋಡೆ ಪ್ರಕರಣಗಳಲ್ಲಿ ಶಾಮೀಲಾಗಿದ್ದ. ತೆಲುಗು ಸಿನಿಮಾವೊಂದರಿಂದ ಪ್ರೇರಿತನಾಗಿ ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಲು ಆರಂಭಿಸಿದ್ದ ಎಂದು ಬಿ ದಯಾನಂದ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಮಂಗಳೂರಿನಲ್ಲಿ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್
ಶ್ರೀನಿವಾಸ್ ರೆಡ್ಡಿ 10 ನೇ ತರಗತಿಯವರೆಗೆ ಓದಿದ್ದಾನೆ ಮತ್ತು 2007 ರಿಂದ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿದ್ದಾನೆ. ಈತನ ವಿರುದ್ಧ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ 36 ಪ್ರಕರಣಗಳು ದಾಖಲಾಗಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ