AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸಿನ ವಿಚಾರವಾಗಿ ಅಪಹರಿಸಿದ್ದ ವ್ಯಕ್ತಿಯ ರಕ್ಷಣೆ: ನಾಲ್ವರ ಬಂಧನ

ಹಣಕಾಸಿನ ವಿಚಾರವಾಗಿ ಅಪಹರಿಸಿದ್ದ ವ್ಯಕ್ತಿಯನ್ನು ರಕ್ಷಿಸುವ ಮೂಲಕ ನಾಲ್ವರನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಅಪಹರಿಸಿ ರಾಮನಗರ ಗೋಡೌನ್​ನಲ್ಲಿ ಇರಿಸಿದ್ದರು. ಒಂದೂವರೆ ಕೋಟಿ ಹಣದ ವಿಚಾರವಾಗಿ ಅಭಿಲಾಷ್​ನನ್ನು 10 ಜನರ ಗುಂಪು ಅಪಹರಿಸಿ ಹಲ್ಲೆ ನಡೆಸಿದ್ದಾರೆ. ಸದ್ಯ ಮೊಬೈಲ್ ನಂಬರ್ ಟ್ರ್ಯಾಕ್ ಮಾಡಿ ಅಭಿಷೇಕ್​ನನ್ನು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಣಕಾಸಿನ ವಿಚಾರವಾಗಿ ಅಪಹರಿಸಿದ್ದ ವ್ಯಕ್ತಿಯ ರಕ್ಷಣೆ: ನಾಲ್ವರ ಬಂಧನ
ಪ್ರಾತಿನಿಧಿಕ ಚಿತ್ರ
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Oct 23, 2023 | 9:00 PM

ಬೆಂಗಳೂರು, ಅಕ್ಟೋಬರ್​​​ 23: ಹಣಕಾಸಿನ ವಿಚಾರವಾಗಿ ಅಪಹರಿಸಿದ್ದ (Kidnapped) ವ್ಯಕ್ತಿಯನ್ನು ರಕ್ಷಿಸುವ ಮೂಲಕ ನಾಲ್ವರನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅಭಿಲಾಷ್​​ ಅಪಹರನಕ್ಕೊಳಗಾದ. ಬೆಂಗಳೂರಿನಿಂದ ಅಪಹರಿಸಿ ರಾಮನಗರ ಗೋಡೌನ್​ನಲ್ಲಿ ಇರಿಸಿದ್ದರು. ಒಂದೂವರೆ ಕೋಟಿ ಹಣದ ವಿಚಾರವಾಗಿ ಅಭಿಲಾಷ್​ನನ್ನು 10 ಜನರ ಗುಂಪು ಅಪಹರಿಸಿ ಹಲ್ಲೆ ನಡೆಸಿದ್ದಾರೆ. ಅಭಿಲಾಷ್​ ಕುತ್ತಿಗೆಗೆ ಚಾಕು ಇಟ್ಟು 50 ಲಕ್ಷ ಹಣ ನೀಡುವಂತೆ ಧಮ್ಕಿ ಹಾಕಿದ್ದಾರೆ.

ಅಭಿಲಾಷ್ ತಲೆಗೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದು, ಪತ್ನಿ, ತಂದೆಗೆ ಕರೆ ಮಾಡಿ 50 ಲಕ್ಷ ರೂ. ಒತ್ತೆ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಹಣ ನೀಡಲು ನಿರಾಕರಿಸಿದ್ದಕ್ಕೆ ವಿಡಿಯೋ ಕಾಲ್ ಮಾಡಿ ಮತ್ತೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಹುಲಿ ಉಗುರಿನ ಡಾಲರ್ ಧರಿಸಿದ್ದ ಇಬ್ಬರ ಬಂಧನ: ಮತ್ತಿಬ್ಬರು ಎಸ್ಕೇಪ್

ಅಪಹರಣಕಾರರು ಊಟಕ್ಕೆ ತೆರಳಿದ್ದಾಗ ಪೊಲೀಸರಿಗೆ ಅಭಿಷೇಕ್ ಕರೆ ಮಾಡಿ ಕಿಡ್ನ್ಯಾಪ್ ಬಗ್ಗೆ ಮಾಹಿತಿ ನೀಡಿದ್ದಾರೆ. ಮೊಬೈಲ್ ನಂಬರ್ ಟ್ರ್ಯಾಕ್ ಮಾಡಿ ಅಭಿಷೇಕ್​ನನ್ನು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಪ್ರಕರಣದ ತನಿಖೆ ವರ್ಗಾವಣೆ ಮಾಡಲಾಗಿದೆ.

ಪಾದಚಾರಿಗೆ ಬೈಕ್​​: ಸವಾರ ಸ್ಥಳದಲ್ಲೇ ಸಾವು

ನೆಲಮಂಗಲ: ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ75 ಮಹದೇವಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಪಾದಚಾರಿ ಮಹಿಳೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸೋಲೂರಿನ ರಂಗಸ್ವಾಮಿ(40) ಮೃತ ಬೈಕ್ ಸವಾರ.  ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾಗಿದ್ದ ಹೆಡ್​ ಕಾನ್ಸ್​ಟೇಬಲ್ ಶವವಾಗಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಹೆಡ್​ ಕಾನ್ಸ್​ಟೇಬಲ್ ಶವವಾಗಿ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಪುಲ್ಕೇರಿ ಗ್ರಾಮದಲ್ಲಿ ನಡೆದಿದೆ. ಪುಲ್ಕೇರಿ ಸಮೀಪ ಬಾವಿಯಲ್ಲಿ ಶೃತಿನ್ ಶೆಟ್ಟಿ(35) ಮೃತದೇಹ ಪತ್ತೆ ಆಗಿದೆ. ಮೃತ ಶೃತಿನ್ ಶೆಟ್ಟಿ ಕಾರ್ಕಳ ನಗರ ಠಾಣೆ ಹೆಡ್ ಕಾನ್ಸ್‌ಟೇಬಲ್ ಆಗಿದ್ದರು.

ಇದನ್ನೂ ಓದಿ: ಸೇನೆಗೆ ಸೇರಿಸುವುದಾಗಿ 150ಕ್ಕೂ ಹೆಚ್ಚು ಯುವಕರಿಂದ 1 ಕೋಟಿ ರೂ. ವಂಚನೆ: ಗಂಡ, ಹೆಂಡತಿ ಅಂದರ್​​

ಅ.19ರಂದು ನಾಪತ್ತೆಯಾಗಿದ್ದರು. ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 2008ರ ಬ್ಯಾಚ್​ನಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು. ಅಕ್ಟೋಬರ್ 18, 19ರಂದು ರಜೆ ಮೇಲೆ ತೆರಳಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು