ನೆಲಮಂಗಲ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್​

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಲಾಗಿದೆ. ಅತ್ಯಾಚರವೆಸಗಿದ ಆರೋಪಿ ಬಾಲಕಿ ಕುಟುಂಬ ವಾಸವಾಗಿದ್ದ ಮನೆಯ ಮಾಲಿಕನಾಗಿದ್ದಾನೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ನೆಲಮಂಗಲ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್​
ಸಾಂದರ್ಭಿಕ ಚಿತ್ರ
Follow us
ಬಿ ಮೂರ್ತಿ, ನೆಲಮಂಗಲ
| Updated By: ವಿವೇಕ ಬಿರಾದಾರ

Updated on: Apr 30, 2024 | 9:24 AM

ನೆಲಮಂಗಲ, ಏಪ್ರಿಲ್​ 30: ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಬೆಂಗಳೂರು ಉತ್ತರ (Bengaluru North) ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರೀಶ್ (35) ಅತ್ಯಾಚಾರವೆಸಗಿದ ಆರೋಪಿ. ಬಾಲಕಿಯನ್ನು ಸದ್ಯ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಪೋಷಕರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕುಟುಂಬ ಒಂದು ತಿಂಗಳನಿಂದ ಆರೋಪಿ ಹರೀಶ್ ಮನೆಯಲ್ಲಿ ಬಾಡಿಗೆಗೆ ವಾಸವಾಗಿದೆ. ಬಾಲಕಿ ಮನೆಯವರು ಕೆಲಸಕ್ಕೆ ತೆರಳಿದ್ದಾಗ ಆರೋಪಿ ಹರೀಶ್​ ಅತ್ಯಾಚಾರವೆಸಗಿದ್ದಾನೆ. ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯನ್ನ ಪೋಷಕರು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಮೋರಿಗೆ ಬಿದ್ದ ಕಾರು, ಚಾಲಕ ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿಗೆ ಸ್ಕಾರ್ಪಿಯೊ ಬಿದ್ದ ಪರಿಣಾಮ ಕಾರಿನಲ್ಲಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ನೆಲಮಂಗಲದ ಹಳೆ ನಿಜಗಲ್ ಗ್ರಾಮದ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಚಾಲಕ ಸಚಿನ್ (19) ಮೃತ ದುರ್ದೈವಿ. ಇನ್ನು ಗಾಯಳು ಬಲವಂತ್ ಸಿಂಗ್ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕರು ದಾಬಸ್ ಪೇಟೆಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಾವ ಅತ್ಯಾಚಾರ ಮಾಡಿದ್ದಾನೆಂದು ಗಂಡನ ಬಳಿ ಹೇಳಿಕೊಂಡ್ರೆ, ನೀನು ನನ್ನ ಪತ್ನಿಯೇ ಅಲ್ಲ ಎಂದ

ಕುಡಿದ ಮತ್ತಿನಲ್ಲಿ ಕಾರು ಚಾಲನೆ, ಅಪಘಾತ

ಕುಡಿದು ಕಾರು ಚಾಲನೆ ಮಾಡಿದ ಚಾಲಕ ಟಾಟಾ ಎಸ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ ಗೊರಗುಂಟೆ ಪಾಳ್ಯ ಬಳಿ ನಡೆದಿದೆ. ಅಪಘಾತದ ಬಳಿಕ ಕಾರಿನಲ್ಲಿದ್ದವರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಮದ್ಯದ ಬಾಟಲ್, ಗಾಂಜಾ ಸಿಕ್ಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ