AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೂ ಡೀಪ್​ ಫೇಕ್​ ಕಾಟ, ಅಶ್ಲೀಲವಾಗಿ ಎಡಿಟ್​ ಮಾಡಿ ಫೋಟೋ ಹರಿಬಿಟ್ಟ ಕಿಡಿಗೇಡಿ

ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (AI) ಮುಖಾಂತರ ಪ್ರಸಿದ್ಧ ಚಿತ್ರನಟ ಮತ್ತು ನಟಿಯರ ಭಾವಚಿತ್ರ ಮತ್ತು ವಿಡಿಯೋಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಹರಿಬಿಡಲಾಗಿತ್ತು. ಈ ಡೀಪ್​ ಫೇಕ್​ನಿಂದ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಡೀಪ್​ ಫೇಕ್​ ಬೆಂಗಳೂರಿಗೂ ಕಾಲಿಟ್ಟಿದ್ದು, ಶಾಲಾ ವಿದ್ಯಾರ್ಥಿನಿಯರೇ ಟಾರ್ಗೆಟ್​ ಆಗಿದ್ದಾರೆ.

ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೂ ಡೀಪ್​ ಫೇಕ್​ ಕಾಟ, ಅಶ್ಲೀಲವಾಗಿ ಎಡಿಟ್​ ಮಾಡಿ ಫೋಟೋ ಹರಿಬಿಟ್ಟ ಕಿಡಿಗೇಡಿ
ವಿದ್ಯಾರ್ಥಿಗಳ ಇನ್ಸ್ಟಾಗ್ರಾಮ ಗ್ರೂಪ್​ನಲ್ಲಿ ವಿದ್ಯಾರ್ಥಿನಿಯರ ಡೀಪ್​ ಫೇಕ್ ಫೋಟೋ
ವಿನಯ್​ ಕಾಶಪ್ಪನವರ್​
| Edited By: ವಿವೇಕ ಬಿರಾದಾರ|

Updated on:May 27, 2024 | 1:46 PM

Share

ಬೆಂಗಳೂರು, ಮೇ 27: ರಾಜ್ಯದಲ್ಲಿ ಮತ್ತೊಂದು ಡೀಪ್​ ಫೇಕ್ (Deep Fake)​ ಪ್ರಕರಣ ವರದಿಯಾಗಿದೆ. ಇತ್ತೀಚಿಗೆ ನಟಿಯರ ಭಾವಚಿತ್ರಗಳನ್ನು ಬಳಸಿ ಕೃತಕ ಬುದ್ಧಿಮತ್ತೆ (AI) ಮುಖಾಂತರ ಅಶ್ಲೀಲವಾಗಿ ಎಡಿಟ್​ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬೆನ್ನಲ್ಲೇ ಇದೀಗ ಬೆಂಗಳೂರಿನ (Bengaluru) ಪ್ರತಿಷ್ಠಿತ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯ (School Students) ಭಾವಚಿತ್ರಗಳನ್ನು ಕೃತಕ ಬುದ್ಧಿಮತ್ತೆ ಮುಖಾಂತರ ಅಶ್ಲೀಲವಾಗಿ ಎಡಿಟ್​ ಮಾಡಿ ಎಲ್ಲಡೆ ಹರಿಬಿಡಲಾಗಿದೆ. ಮೇ 24 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

50ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಇನ್ಸ್ಟಾಗ್ರಾಮನಲ್ಲಿ ಗ್ರೂಪ್ ರಚಿಸಿಕೊಂಡಿದ್ದಾರೆ. ಬಳಿಕ ಈ ಗ್ರೂಪ್​ನಲ್ಲಿ ಅನಾಮದೆಯ ವ್ಯಕ್ತಿ ವಿದ್ಯಾರ್ಥಿನಿಯರ ಮಾರ್ಫಿಂಗ್ ಭಾವಚಿತ್ರಗಳನ್ನು ಶೇರ್​ ಮಾಡುತ್ತಾನೆ. ಈ ವಿಚಾರ ತಿಳಿದು ವಿದ್ಯಾರ್ಥಿನಿಯರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಪೋಷಕರು ಈಗಾಗಲೇ ಸೈಬರ್ ಸೆಲ್​ಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಮತ್ತೆ ಡೀಪ್​ಫೇಕ್ ವಿಡಿಯೋಗೆ ಬಲಿಯಾದ ರಶ್ಮಿಕಾ ಮಂದಣ್ಣ

ದುಷ್ಕರ್ಮಿಗಳು ಇತ್ತೀಚಿಗೆ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರ ಭಾವಚಿತ್ರವನ್ನು ಡೀಪ್​ ಫೇಕ್​ ಮೂಲಕ ಅಶ್ಲೀಲವಾಗಿ ವಿಡಿಯೋ ಎಡಿಟ್​ ಮಾಡಿದ್ದರು. ಈ ಪ್ರಕರಣ ನಂತರ ಇದೇ ರೀತಿ ನಟಿ ಕತ್ರಿನಾ ಕೈಫ್​ ಅವರ ಭಾವಚಿತ್ರ ಉಪಯೋಗಿಸಿ ಅಶ್ಲೀಲವಾಗಿ ಎಡಿಟ್​ ಮಾಡಲಾಗಿತ್ತು.

ಪ್ರೀತಿ ನಿರಾಕರಿಸಿದ್ದಕ್ಕೆ ಡೀಪ್​ ಫೇಕ್ ​ ಮೂಲಕ ಯಾರದೋ ನಗ್ನ ದೇಹಕ್ಕೆ ಯುವತಿಯ ಭಾವಚಿತ್ರ ಅಳವಡಿಸಿ ಯುವಕ ಬ್ಯ್ಲಾಕ್​ಮೇಲ್ ​​ ಮಾಡಿರುವ ಘಟನೆ ಕಳೆದ ವರ್ಷ ನವೆಂಬರ್​ನಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿತ್ತು. ಫೋಟೋ ಎಡಿಟ್​ ಮಾಡಿ ಬ್ಯ್ಲಾಕ್​ಮೇಲ್​ ಮಾಡಿದ್ದ ಆರೋಪಿ ಮಂಥನ್ ಪಾಟೀಲ್​ (22)​ನನ್ನು ಖಾನಾಪುರ ಪೊಲೀಸರು ಬಂಧಿಸಿದ್ದದ್ದರು. ಯುವತಿ ಮತ್ತು ಆರೋಪಿ ಮಂಥನ್ ಪಾಟೀಲ್ ಒಂದೇ ಊರವನರಾಗಿದ್ದಾರೆ. ಮಂಥನ್ ಪಾಟೀಲ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಆರೋಪಿ ಮಂಥನ್​ ಪಾಟೀಲ್​​ ಯುವತಿಗೆ ಪ್ರೀತಿ ಮಾಡುವಂತೆ ಬೆನ್ನು ಬಿದ್ದಿದ್ದನು. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಭಾವಚಿತ್ರವನ್ನು ಅಶ್ಲೀಲವಾಗಿ ಎಡಿಟ್​ ಮಾಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:36 pm, Mon, 27 May 24

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ