AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನಲ್ಲಿ ಸೈಬರ್​ ಕಳ್ಳರ ಹಾವಳಿ ಹೆಚ್ಚಾಗಿದೆ. ಅನೇಕ ವಿಧವಾದ ಸೈಬರ್​ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಸೈಬರ್​ ಕಳ್ಳರ ಹಾವಳಿ ಪೊಲೀಸರ ನಿದ್ದೆಗೆಡೆಸಿದೆ. ಸೈಬರ್​ ಕ್ರೈಂ ಬಗ್ಗೆ ಪೊಲೀಸರು ಅದೆಷ್ಟು ಜಾಗೃತಿ ಮೂಡಿಸುತ್ತಿದ್ದರೂ, ಜನರು ಮಾತ್ರ ವಂಚನೆಗೆ ಒಳಗಾಗುತ್ತಿದ್ದಾರೆ. ಇದೀಗ ಉದ್ಯಮಿಯೊಬ್ಬರು ಸೈಬರ್​ ಜಾಲದಲ್ಲಿ ಸಿಲುಕಿ 5.17 ಕೋಟಿ ರೂ ಕಳೆದುಕೊಂಡಿದ್ದಾರೆ.

ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ
ಸಾಂದರ್ಭಿಕ ಚಿತ್ರ
Follow us
Praveen Sahu
| Updated By: ವಿವೇಕ ಬಿರಾದಾರ

Updated on: May 06, 2024 | 12:06 PM

ಬೆಂಗಳೂರು, ಮೇ 06: ನಗರದಲ್ಲಿ ಸೈಬರ್​ (Cyber Crime) ಕಳ್ಳರ ಹಾವಳಿ ಮುಂದುವರೆದಿದೆ. ಸೈಬರ್​ ಕಳ್ಳರ ಜಾಲಕ್ಕೆ ಸಿಲುಕಿ ಅದೆಷ್ಟೋ ಜನರು ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಇದೀಗ ಸೈಬರ್​​ ಕಳ್ಳರ ಜಾಲಕ್ಕೆ ಸಿಲುಕಿ ವ್ಯಕ್ತಿಯೊಬ್ಬ 5.17 ಕೋಟಿ ರೂ. ಕಳೆದುಕೊಂಡಿದ್ದಾರೆ. ಉದ್ಯಮಿ ಅಶೋಕ್ ತಿರುಪಲಪ್ಪ ವಂಚನೆಗೆ ಒಳಗಾದವರು. ಇದೇ ವರ್ಷ ಫೆಬ್ರವರಿ 3 ರಂದು ಅಶೋಕ್​ ಅವರ ವಾಟ್ಸಪ್​ಗೆ ಅಪರಿಚಿತ ನಂಬರ್​​ನಿಂದ https://www.bys-app.com ಬರುತ್ತದೆ. ಆದರೆ ಅಶೋಕ್​ ಈ ಲಿಂಕ್​ ಅನ್ನು ತೆರೆದಿರುವುದಿಲ್ಲ.

ಸ್ವಲ್ಪ ಸಮಯದಲ್ಲಿ ಬಳಿಕ ಅಶೋಕ್​ ಅವರನ್ನು ವೈ-5-ಎವರ್ ಕೋರ್ ಫೈನಾನ್ಸಿಯಲ್ ಲೀಡರ್ ಎಂಬ ವಾಟ್ಸಪ್​ ಗ್ರೂಪ್​ಗೆ ಆ್ಯಡ್​ ಮಾಡಲಾಗುತ್ತದೆ. ಬಳಿಕ ತೇಜಸ್ ಖೋಡೆ, ಗೋಪಾಲ್ ಕಾವಲ್ರೆಡ್ಡಿ, ಕೇರೋಲಿನ್ ಕ್ರುಕ್ಸ್ ಎಂಬ ಅಪರಿಚಿತರು ಅಶೋಕ್​ ಅವರಿಗೆ ಕರೆ ಮಾಡಿ “ಲಿಂಕ್ ಮೇಲೆ ಕ್ಲಿಕ್​ ಮಾಡಿ ಆ್ಯಪ್​ ಡೌನ್​​ಲೋಡ್​ ಮಾಡಿ. ಆ ಆ್ಯಪ್​ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ಪ್ರೇರೇಪಿಸಿದ್ದಾರೆ.

ಇದನ್ನೂ ಓದಿ: ವಿಡಿಯೋ ಕಾಲ್​​ನಲ್ಲಿ ಬೆಂಗಳೂರು ಮಹಿಳೆಯ ಬೆತ್ತಲಾಗಿಸಿ 14.57 ಲಕ್ಷ ರೂ. ಎಗರಿಸಿದ ಸೈಬರ್ ವಂಚಕರು!

ಸ್ವಲ್ಪ ದಿನಗಳ ಬಳಿಕ ಅಶೋಕ್ ಆ್ಯಪ್​ ಡೌಲೋಡ್​ ಮಾಡುತ್ತಾರೆ. ಬಳಿಕ ಅಶೋಕ್​ ತಮ್ಮ ಎಸ್​ಬಿಐ ಅಕೌಂಟ್​ನಿಂದ ಆರೋಪಿಗಳು ಸೂಚಿಸಿದ ಅಕೌಂಟ್​ಗೆ ಹಂತ ಹಂತವಾಗಿ ಹಣ ಹಾಕಲು ಆರಂಭಿಸುತ್ತಾರೆ. ಹೀಗೆ ಬರೊಬ್ಬರಿ 5.17 ಕೋಟಿ ರೂ. ಹಣವನ್ನು ಅಶೋಕ್​ ಆರೋಪಿಗಳು ಸೂಚಿಸಿದ ಅಕೌಂಟ್​ಗೆ ಹಾಕುತ್ತಾರೆ. ಇದಾದ ಬಳಿಕ ಆರೋಪಿಗಳು ಮತ್ತೆ ಅಶೋಕ್​ ಅವರನ್ನು ಸಂಪರ್ಕಿಸಿ ಇನ್ನಷ್ಟು ಹಣ ಹೂಡಿಕೆ ಮಾಡುವಂತೆ ಹೇಳುತ್ತಾರೆ.

ಆಗ ಅಶೋಕ್​ ಇದಕ್ಕೆ ಒಪ್ಪದೆ, ಮೊದಲು ಹೂಡಿಕೆ ಮಾಡಿದ್ದ ಹಣವನ್ನು ಮರಳಿ ಪಡೆಯಲು ಆ್ಯಪ್​​ನಲ್ಲಿ ಪ್ರಯತ್ನಿಸುತ್ತಾರೆ. ಆದರೆ ಅದು ಸಾಧ್ಯವಾಗುವುದಿಲ್ಲ. ಆಗ ಅಶೋಕ್​ ಅವರಿಗೆ ತಾನು ಮೋಸ ಹೋಗಿದ್ದೇನೆ ಎಂದು ತಿಳಿಯುತ್ತದೆ. ಕೊನೆಗೆ ಅಶೋಕ್​ ಸೈಬರ್​ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸುತ್ತಾರೆ. ಅಶೋಕ್​ ದೂರಿನ ಅನ್ವಯ ಸೈಬರ್​ ಕ್ರೈಂ ಪೊಲೀಸರು Fyers Securities Pvt Ltd, Eercore Company ಎಂಬ ಕಂಪನಿಗಳ ಮೇಲೆ ಎಫ್​ಐಆರ್ ದಾಖಲಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ