Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯ ಫೋಟೋ ಅಶ್ಲೀಲವಾಗಿ ಎಡಿಟ್​ ಮಾಡಿ ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್, ಕ್ರಮ ಕೈಗೊಳ್ಳದ ಪೊಲೀಸರು

ಪ್ರತ್ಯೇಕ ಘಟನೆ: ಯುವತಿಯ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಫೋಟೋವನ್ನು new_up_down_official ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಆರೋಪಿ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ, ಯುವತಿಗೆ ಬ್ಲ್ಯಾಕ್​ಮೇಲ್ ಮಾಡಿ ನಗ್ನ ಫೋಟೋಗಳನ್ನು ಪಡೆದು ಆಕೆಯ ಸ್ನೇಹಿತರಿಗೆ ಮತ್ತು ಸಂಬಂಧಿಕರಿಗೆ ಶೇರ್​ ಮಾಡಿದ್ದ ಆರೋಪಿ ವಿರುದ್ಧ ದೂರು ದಾಖಲಾಗಿದೆ.

ಯುವತಿಯ ಫೋಟೋ ಅಶ್ಲೀಲವಾಗಿ ಎಡಿಟ್​ ಮಾಡಿ ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್, ಕ್ರಮ ಕೈಗೊಳ್ಳದ ಪೊಲೀಸರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Apr 28, 2024 | 8:35 AM

ಬೆಂಗಳೂರು, ಏಪ್ರಿಲ್​ 28: ಯುವತಿಯ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಫೋಟೋ new_up_down_official ಎಂಬ ಇನ್ಸ್ಟಾಗ್ರಾಮ್ (Instagram) ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಆರೋಪಿ ವಿರುದ್ಧ ಹೈಗ್ರೌಂಡ್ ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಾಗಿದೆ. new_up_down_official ಎಂಬ ಇನ್ಸ್ಟಾಗ್ರಾಮ್ ಖಾತೆ ಹೊಂದಿರುವ ಆರೋಪಿ ಯುವತಿಯ ಭಾವಚಿತ್ರವನ್ನು ಎಡಿಟ್​ ಮಾಡಿ ಮಂಗಳವಾರ ಏಪ್ರಿಲ್​ 09ರ ರಾತ್ರಿ 9 ಗಂಟೆ ಸುಮಾರಿಗೆ ತನ್ನ ಪೇಜ್​ನಲ್ಲಿ ಅಪ್ಲೋಡ್ ಮಾಡಿದ್ದಾನೆ. ಬಳಿಕ ಯುವತಿಗೆ “5 ಸಾವಿರ ನೀಡಿದರೆ ನಿನ್ನ ಅಶ್ಲೀಲ ವಿಡಿಯೋಗಳನ್ನು ಡಿಲಿಟ್​ ಮಾಡುತ್ತೇನೆ” ಎಂದು ಹೇಳಿದ್ದಾನೆ.

ಆಗ ಯುವತಿ ಈ ವಿಚಾರವನ್ನು ಪೊಲೀಸರಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾಳೆ. ಅದಕ್ಕೆ ಆರೋಪಿ “ಪೊಲೀಸ್​ನವರು ನಮ್ಮ ಮನೆಗೆ ದಿನ ಬರುತ್ತಾರೆ” ಅಂತ ಸಂದೇಶ ಕಳುಹಿಸಿದ್ದಾನೆ. ಬಳಿಕ ಯುವತಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ನೀಡಿ 8 ದಿನ ಕಳೆದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಯುವತಿಯ ನಗ್ನ ಫೋಟೋ ಇನ್ಸ್ಟಾದ​ಲ್ಲಿ ಪೋಸ್ಟ್​ ಮಾಡಿದ ಆರೋಪಿ

ಮತ್ತೊಂದು ಪ್ರಕರಣದಲ್ಲಿ, ಬೆಂಗಳೂರಿನ ಓರ್ವ ಯುವತಿಗೆ ಬ್ಲ್ಯಾಕ್​ಮೇಲ್ ಮಾಡಿ ಸಾಮಾಜಿಕ ಜಾಲತಾಣದ ಮೂಲಕ ಆಕೆಯ ನಗ್ನ ಫೋಟೋಗಳನ್ನು ಪಡೆದು ಸ್ನೇಹಿತರಿಗೆ ಮತ್ತು ಸಂಬಂಧಿಕರಿಗೆ ಶೇರ್​ ಮಾಡಿದ್ದ ಆರೋಪಿ ವಿರುದ್ಧ ದೂರು ದಾಖಲಾಗಿದೆ. ಯುವತಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಳೆ. ಯುವತಿ ತಂದೆ 16 ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತಾಯಿ ಮನೆ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕುತಿದ್ದಾರೆ. ಕಳೆದ ವರ್ಷ 2023ರಲ್ಲಿ ಸಂತ್ರಸ್ತೆಯ ಇನ್​ಸ್ಟಾಗ್ರಾಂ ಖಾತೆಗೆ bhoomikachinnu974 ಎಂಬ ಇನ್​ಸ್ಟಾಗ್ರಾಂ ಖಾತೆಯಿಂದ ಆಕೆಯ ಕುಟಂಬದ ಹಾಗೂ ತಾಯಿಯ ಎಡಿಟ್​ ನಗ್ನ ಚಿತ್ರಗಳನ್ನು ಕಳುಹಿಸಲಾಗಿದೆ.

ಇದನ್ನೂ ಓದಿ: ಬಸ್ ಟಿಕೆಟ್​ಗೆ ದುಡ್ಡುಕೇಳಿ ‘ಧೋನಿ’ ಮೆಸೇಜ್ ಹಾಕ್ತಾರೆ ಹುಷಾರ್; ದೂರಸಂಪರ್ಕ ಇಲಾಖೆಯಿಂದ ಎಚ್ಚರಿಕೆ

ಬಳಿಕ ಆರೋಪಿ, ಸಂತ್ರೆಸ್ತೆಗೆ ಮೆಸೆಜ್​ ಮಾಡಿ “ನಿನ್ನ ತಾಯಿಯ ಪೋಟೋಗಳನ್ನು ಸಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತೇನೆ. ಈ ಫೋಟೋಗಳನ್ನು ಹರಿಬಿಡಬಾರದೆಂದರೇ ನಿನ್ನ ನಗ್ನ ಚಿತ್ರಗಳನ್ನು ಕಳುಹಿಸು” ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಸಂತ್ರಸ್ತೆ ಆಕೆಯ ನಗ್ನ ಚಿತ್ರಗಳನ್ನು bhoomikachinnu974 ಎಂಬ ಇನ್​ಸ್ಟಾಗ್ರಾಂ ಖಾತೆಗೆ ಕಳುಹಿಸಿದ್ದಾಳೆ.

ಬಳಿಕ ಆರೋಪಿ ಈ ನಗ್ನ ಚಿತ್ರಗಳನ್ನು ಏ.09 ರಂದು ಇನ್​ಸ್ಟಾಗ್ರಾಂ ಮೂಲಕ ಸಂತ್ರಸ್ತೆಯ ಸ್ನೇಹಿತರಿಗೆ ಕಳಹಿಸಿದ್ದಾನೆ. ನಂತರ Chinnu Chinnu ಎಂಬ ಫೇಸ್​ಬುಕ್​ ಖಾತೆಯಿಂದ ಯುವತಿಯ ಮಾವನ ಫೇಸ್​ ಬುಕ್​ ಖಾತೆಗೆ ಕಳುಹಿಸಿದ್ದಾನೆ. ಪ್ರಕರಣ ಸಂಬಂಧ ಯುವತಿ ಅಮೃತಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್