ಪಕ್ಕದ ಮನೆ ದಂಪತಿಯ ಸರಸ ಸಲ್ಲಾಪದಿಂದ ಕಿರಿಕಿರಿ, ಪೊಲೀಸ್​ ಠಾಣೆಗೆ ದೂರು ನೀಡಿದ ಮಹಿಳೆ

ಬೆಂಗಳೂರಿನ ಪೊಲೀಸ್​ ಠಾಣೆಯೊಂದರಲ್ಲಿ ವಿಚಿತ್ರ ದೂರು ದಾಖಲಾಗಿದೆ. ಪಕ್ಕದ ಮನೆಯ ದಂಪತಿ ಸರಸ ಸಲ್ಲಾಪದಿಂದ ಕಿರಿಕಿರಿಯಾಗುತ್ತಿದೆ ಎಂದು 44 ವರ್ಷದ ಮಹಿಳೆ ಗಿರಿನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 504, 506, 509, 34ರಡಿ ಪ್ರಕರಣ ದಾಖಲಾಗಿದೆ.

ಪಕ್ಕದ ಮನೆ ದಂಪತಿಯ ಸರಸ ಸಲ್ಲಾಪದಿಂದ ಕಿರಿಕಿರಿ, ಪೊಲೀಸ್​ ಠಾಣೆಗೆ ದೂರು ನೀಡಿದ ಮಹಿಳೆ
ಪಕ್ಕದ ಮನೆ ದಂಪತಿಯ ಸರಸ ಸಲ್ಲಾಪದಿಂದ ಕಿರಿಕಿರಿ, ಪೊಲೀಸ್​ ಠಾಣೆಗೆ ದೂರು
Follow us
Shivaprasad
| Updated By: ವಿವೇಕ ಬಿರಾದಾರ

Updated on: Mar 20, 2024 | 8:49 AM

ಬೆಂಗಳೂರು, ಮಾರ್ಚ್​ 20: ಬೆಂಗಳೂರಿನ (Bengaluru) ಗಿರಿನಗರ ಪೊಲೀಸ್ (Police)​ ಠಾಣೆಯಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಪಕ್ಕದ ಮನೆ ದಂಪತಿ ಸರಸ ಸಲ್ಲಾಪದಿಂದ ಕಿರಿಕಿರಿಯಾಗುತ್ತಿದೆ ಎಂದು 44 ವರ್ಷದ ಮಹಿಳೆಯೊಬ್ಬರು ದೂರು ದಾಖಲಸಿದ್ದಾರೆ. ಆವಲಹಳ್ಳಿ, ಬಿಡಿಎ ಲೇಔಟ್​ ನಲ್ಲಿ ಮಹಿಳೆ ವಾಸವಾಗಿದ್ದಾರೆ. ಮಹಿಳೆಯ ಮನೆಯ ಬಾಗಿಲಿಗೆ ಪಕ್ಕದ ಮನೆಯ ಬೆಡ್​ ರೂಮ್​ ಇದೆ. ಪಕ್ಕದ ಮನೆಯಲ್ಲಿ ವಾಸವಾಗಿರುವ ದಂಪತಿ ಬೆಡ್ ರೂಮ್ ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುವ ಮೂಲಕ ಬಹಳ ವಿಕೃತ ಮತ್ತು ಅಸಹ್ಯ ಮನಸ್ಥಿತಿಯಿಂದ ನಡೆದುಕೊಂಡಿದ್ದಾರೆ.

ಈ ಬಗ್ಗೆ, ಬಹಳ ಮುಜುಗರಕ್ಕೆ ಒಳಗಾಗಿ ಮಹಿಳೆ, ದಯವಿಟ್ಟು ಬೆಡ್ ರೂಮ್ ಕಿಟಕಿ ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪಕ್ಕದ ಮನೆಯ ವ್ಯಕ್ತಿ ಅವಾಚ್ಯ ಶಬ್ದಗಳಿಂದ ಮಹಿಳೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ನಿಂದಿಸಿದ್ದಾನೆ. ಅಲ್ಲದೆ ಮಹಿಳೆ ಮೇಲೆ ಅತ್ಯಾಚಾರ ಎಸಗುವುದಾಗಿ ಮತ್ತು ಕೊಲೆ, ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಪಕ್ಕದ ಮನೆಯ ಮನೆ ಮಾಲೀಕ ಚಿಕ್ಕಣ್ಣ ಮತ್ತು ಅವರ ಮಗ ಮಂಜುನಾಥ್ ಮಹಿಳೆ ಕುಟುಂಬದ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.

ಇದನ್ನೂ ಓದಿ: ಅನೈತಿಕ ಸಂಬಂಧದ ಶಂಕೆ; ಮಾರಕಾಸ್ತ್ರಗಳಿಂದ ಕೊಚ್ಚಿ ಜೋಡಿ ಕೊಲೆ

ಅಲ್ಲದೆ ಕೆಲವು ಯುವಕರನ್ನು ಕರೆಸಿ, ಎಲ್ಲರೂ ತುಂಬಾ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳೆ ಮತ್ತು ಮಹಿಳೆಯ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ. ಇವರಿಂದ ಸೂಕ್ತ ರಕ್ಷಣೆ ನೀಡಿ ಮತ್ತು ಇವರುಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ದೂರು ದಾಖಲಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 504, 506, 509, 34ರಡಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ