ಐಪಿಎಲ್​ ಬೆಟ್ಟಿಂಗ್​ನಲ್ಲಿ ತೊಡಗಿದ್ದ ಇಬ್ಬರ ಬಂಧನ; 16 ಸಾವಿರ ನಗದು, 2 ಮೊಬೈಲ್ ಜಪ್ತಿ

TV9 Digital Desk

| Edited By: guruganesh bhat

Updated on: Sep 27, 2021 | 8:09 PM

ಇಂದು ನಡೆದ ಅಪರಾಧ ಸುದ್ದಿಗಳ ಗುಚ್ಛ ಇಲ್ಲಿದೆ.

ಐಪಿಎಲ್​ ಬೆಟ್ಟಿಂಗ್​ನಲ್ಲಿ ತೊಡಗಿದ್ದ ಇಬ್ಬರ ಬಂಧನ; 16 ಸಾವಿರ ನಗದು, 2 ಮೊಬೈಲ್ ಜಪ್ತಿ
ಸಾಂಕೇತಿಕ ಚಿತ್ರ

ಬೆಂಗಳೂರು: IPL ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ಇಬ್ಬರನ್ನು ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಕ್ರಮ್ ಶೇಖ್ ಹಾಗೂ ಅನ್ವರ್ ಶರೀಫ್ ಬಂಧಿತರು. ಬಂಧಿತರಿಂದ 16 ಸಾವಿರ ನಗದು, 2 ಮೊಬೈಲ್​ಗಳನ್ನು ಜಪ್ತಿ ಮಾಡಲಾಗಿದ್ದು, ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ಸುದ್ದಿಗಳು ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಟ್ಕುಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆಕ್ಸಿಜನ್ ಟ್ಯಾಂಕ್‌ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಕುಮಟಾದಿಂದ ಕಾರವಾರಕ್ಕೆ ಆಕ್ಸಿಜನ್ ಟ್ಯಾಂಕ್‌ ಸಾಗಣೆ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಯಲ್ಲಿ ಸಿಲುಕಿಕೊಂಡಿದ್ದ ಚಾಲಕ, ಕ್ಲೀನರ್ರನ್ನು ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆನೇಕಲ್: ಶಾಲಾ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ 7 ಮಕ್ಕಳಿಗೆ ಗಾಯವಾದ ಘಟನೆ ತಮಿಳುನಾಡಿನ ಜೂಜುವಾಡಿ ಬಳಿ ಸಂಭವಿಸಿದೆ. ಜೂಜುವಾಡಿ ಚೆಕ್ಪೋಸ್ಟ್ ಬಳಿ ಟರ್ನಿಂಗ್ ವೇಳೆ ಘಟನೆ ನಡೆದಿದ್ದು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ

ಹಾವೇರಿ: ಕೆಎಸ್ಆರ್​ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ದುರ್ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಗುಂಡೂರು ಗ್ರಾಮದಲ್ಲಿ ನಡೆದಿದೆ. ಹಾನಗಲ್ ತಾಲೂಕಿನ ಮಕರವಳ್ಳಿಯ ನಿವಾಸಿ ಗಜೇಂದ್ರ ಪೂಜಾರ (25) ಸಾವನ್ನಪ್ಪಿದ ದುರ್ದೈವಿ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಬದುಕಿಸಲು ಸ್ಥಳೀಯರು ಪ್ರಯತ್ನ ಮಾಡಿದರೂ ಅವರು ಬದುಕುಳಿಯಲಿಲ್ಲ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

Temple Tour: ತ್ರಿಮೂರ್ತಿಗಳಿಂದ ಸ್ಥಾಪನೆಯಾದ ಕುರುಡು ಮಲೆ ಸಾಲಿಗ್ರಾಮ ಗಣಪನ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ

ದೇಸಾಯಿವಾಡೆ: ಶಂಕರ್ ನಾಗ್ ಅವರ ಜೋಕುಮಾರ ಸ್ವಾಮಿ ಚಿತ್ರ ಶೂಟಿಂಗ್ ನಡೆದದ್ದು ಇಲ್ಲೇ

(Bengaluru Police arrest 2 men involved in IPL betting 16 thousand cash and 2 mobile foreclosures)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada