ಹನಿಟ್ರ್ಯಾಪ್ ಜಾಲದಲ್ಲಿ ಶಾಸಕರು, ನಾಲ್ವರು ಆರೋಪಿಗಳ ಅರೆಸ್ಟ್: ಭಾಸ್ಕರ್ ರಾವ್

ಬೆಂಗಳೂರು: ರಾಜ್ಯದಲ್ಲಿ ಶಾಸಕರ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಹನಿಟ್ರ್ಯಾಪ್ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಈವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಎಷ್ಟು ಜನರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಅನ್ನೋ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಕರಾವಳಿ ಮೂಲದ ಶಾಸಕರ ಖಾಸಗಿ ವಿಡಿಯೋಗಳನ್ನು ಮಾಡಿರುವುದಾಗಿ ವಿಚಾರಣೆ ವೇಳೆ ಆರೋಪಿ […]

ಹನಿಟ್ರ್ಯಾಪ್ ಜಾಲದಲ್ಲಿ ಶಾಸಕರು, ನಾಲ್ವರು ಆರೋಪಿಗಳ ಅರೆಸ್ಟ್: ಭಾಸ್ಕರ್ ರಾವ್
ಸಾಧು ಶ್ರೀನಾಥ್​

Updated on: Nov 29, 2019 | 3:07 PM

ಬೆಂಗಳೂರು: ರಾಜ್ಯದಲ್ಲಿ ಶಾಸಕರ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಹನಿಟ್ರ್ಯಾಪ್ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಈವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಎಷ್ಟು ಜನರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಅನ್ನೋ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕರಾವಳಿ ಮೂಲದ ಶಾಸಕರ ಖಾಸಗಿ ವಿಡಿಯೋಗಳನ್ನು ಮಾಡಿರುವುದಾಗಿ ವಿಚಾರಣೆ ವೇಳೆ ಆರೋಪಿ ರಾಘವೇಂದ್ರ ಅಂಡ್ ಟೀಂ ಸಿಸಿಬಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ಸಿಸಿಬಿ ಪೊಲೀಸರು ಬಂಧಿತ ಆರೋಪಿ ರಾಘವೇಂದ್ರ ಮನೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶಾಸಕರ ವಿಡಿಯೋಗಳಿದ್ದ ಮೆಮೊರಿ ಕಾರ್ಡ್ ಮತ್ತು ಪೆನ್ ಡ್ರೈವ್ ಪತ್ತೆಯಾಗಿದೆ.

ಪೊಲೀಸರ ದಾಳಿ ವೇಳೆ ರಾಘವೇಂದ್ರ ತಾಯಿ ಪೆನ್ ಡ್ರೈವ್ ಬಚ್ಚಿಟ್ಟುಕೊಂಡರು ಎನ್ನಲಾಗಿದೆ. ಆ ಪೆನ್​ಡ್ರೈವ್​ನಲ್ಲಿ ಪುಷ್ಪಾಳ ಜೊತೆ ಕರಾವಳಿ ಶಾಸಕನ ವಿಡಿಯೋ ಇತ್ತು ಎನ್ನಲಾಗಿದೆ. ಒಟ್ಟು ಐವರು ಜನಪ್ರತಿನಿಧಿಗಳನ್ನು ಹನಿಟ್ರ್ಯಾಪ್ ಮಾಡಿರುವುದು ಬೆಳಕಿಗೆ ಬಂದಿದ್ದು, ಐದೂ ಪ್ರಕರಣಗಳಲ್ಲಿ ಸಾಕ್ಷ್ಯ ಸಹಿತ ದಾಖಲೆಗಳು ಸಿಸಿಬಿ ಅಧಿಕಾರಿಗಳಿಗೆ ಲಭ್ಯವಾಗಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

Published On - 3:00 pm, Fri, 29 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us