AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​​ಸ್ಟಾಗ್ರಾಮ್ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು ನಗ್ನ ಚಿತ್ರ ಪಡೆದು ಬ್ಲ್ಯಾಕ್​ಮೇಲ್​​ ಮಾಡುತ್ತಿದ್ದ ಆರೋಪಿ ಅರೆಸ್ಟ್​​

ಇನ್​​ಸ್ಟಾಗ್ರಾಮ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು, ವಿವಿಧ ಕಾರಣ ಹೇಳಿ ಅವರ ನಗ್ನ ಫೋಟೊಗಳ ಪಡೆದು ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಆಗ್ನೆಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಇನ್​​ಸ್ಟಾಗ್ರಾಮ್ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು ನಗ್ನ ಚಿತ್ರ ಪಡೆದು ಬ್ಲ್ಯಾಕ್​ಮೇಲ್​​ ಮಾಡುತ್ತಿದ್ದ ಆರೋಪಿ ಅರೆಸ್ಟ್​​
ಆರೋಪಿ ದಿಲ್ಲಿ ಪ್ರಸಾದ (ಎಡಚಿತ್ರ) ಫೇಕ್​ ಅಕೌಂಟ್​ (ಬಲಚಿತ್ರ)
TV9 Web
| Edited By: |

Updated on: Feb 03, 2023 | 1:56 PM

Share

ಬೆಂಗಳೂರು: ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ, ನಂಬಿಸಿ ಮೋಸ ಮಾಡುವರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೇ ಈ ಜಾಲಕ್ಕೆ ಹೆಚ್ಚಾಗಿ ಯುವತಿಯರೇ ಬೀಳುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಇನ್​​ಸ್ಟಾಗ್ರಾಮ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು, ವಿವಿಧ ಕಾರಣ ಹೇಳಿ ಅವರ ನಗ್ನ ಫೋಟೊಗಳ ಪಡೆದು ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಆಗ್ನೆಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ದಿಲ್ಲಿ ಪ್ರಸಾದ್ (26) ಬಂಧಿತ ಆರೋಪಿ. ಆಂಧ್ರ ಮೂಲದ ಆರೋಪಿ ದಿಲ್ಲಿ ಪ್ರಸಾದ್​​ 2018 ರಿಂದ ಬೆಂಗಳೂರಿನಲ್ಲಿ ವಾಸವಿದ್ದನು. ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದನು. ಈತ ಮೊನಿಯ ಮತ್ತು ಮ್ಯಾನೇಜರ್ ಎಂಬ ಎರಡು ನಕಲಿ ಖಾತೆ ಸೃಷ್ಟಿ ಮಾಡಿದ್ದಾನೆ.

ಈ ಖಾತೆಗಳ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾನೆ. ನಂತರ ಯುವತಿಯರೊಂದಿಗೆ ಸಲುಗೆಯಿಂದ ವರ್ತಿಸಿ, ನಂಬಿಕಸ್ತ ಎಂದು ಭರವಸೆ ಮೂಡಿಸುತ್ತಿದ್ದನು. ಬಳಿಕ ಅವರಿಗೆ ವಿವಿಧ ಕಾರಣ ಹೇಳಿ ಅವರ ನಗ್ನ ಫೋಟೊಗಳನ್ನು ಪಡೆದು ಕೊಳ್ಳುತಿದ್ದನು. ಬಳಿಕ ಫೋಟೋಗಳನ್ನು ಬಳಸಿ ಬೆದರಿಸಿ ಬೇರೊಬ್ಬರ ಜೊತೆ ಲೈಂಗಿಕ ಕ್ರಿಯೆ ಮಾಡುವಂತೆ ಒತ್ತಾಯ ಮಾಡುತ್ತಿದ್ದನು.

ಇದನ್ನೂ ಓದಿ: ಕೆಲಸ ಕೊಡಿಸ್ತೀವಿ ಅಂತಾ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್​ ಬಂಧನ ​

ಈತ ಹೇಳಿದ ವ್ಯಕ್ತಿಗೆ ಭೇಟಿಯಾಗುವಂತೆ ಯುವತಿಯರಿಗೆ ಹೇಳುತ್ತಿದ್ದನು. ಇದರಂತೆ ಓರ್ವ ಯುವತಿ ಬ್ಯ್ಲಾಕ್​ಮೇಲ್​​ಗೆ ಒಳಗಾಗಿ ಮಡಿವಾಳದ ಓಯೋ ರೂಂನಲ್ಲಿ ಲೈಂಗಿಕ ಕ್ರಿಯೆ ವೇಳೆ ವಿಡಿಯೋ ದೃಶ್ಯವಳಿಗಳನ್ನು ಸೆರೆ ಹಿಡಿದುಕೊಂಡಿದ್ದನು. ವಿಷಯ ತಿಳಿಯುತ್ತಿದ್ದಂತೆ ಆಗ್ನೆಯ ವಿಭಾಗದ ಸಿಇಎನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ವೇಳೆ ಮತ್ತಷ್ಟು ಕೃತ್ಯದ ಕುರಿತು ಕಕ್ಕಿದ್ದಾನೆ.

ತನಿಖೆ ವೇಳೆ ಮೂರು ಯುವತಿಯ ಜೊತೆ ಈ ರೀತಿ ಕೃತ್ಯ ನಡೆದಿದ್ದಾಗಿ ಹೇಳಿದ್ದಾನೆ. ಜೊತೆಗೆ 10ಕ್ಕೂ ಅಧಿಕ ಮಹಿಳೆಯರ ಫೋಟೊಗಳ ಹೊಂದಿರೊದು ಪತ್ತೆಯಾಗಿದೆ. ಯುವತಿಯರಿಗೆ ಬ್ಯ್ಲಾಕ್​ ಮೇಲ್​ ಮಾಡಿ ಅವರ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದನು. ಅಲ್ಲದೆ ಕೆಲವರಿಂದ ಹಣ ಪಡೆಯುತ್ತಿದ್ದನು. ಈ ಹಿನ್ನೆಲೆ ಮಹಿಳೆಯರು ಸಮಾಜಿಕ ಜಾಲತಾಣ ಬಳಸುವಾಗ ಎಚ್ಚರದಿಂದರಬೇಕೆಂದು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಮನಗರ: ಒಂದೇ ಕುಟುಂಬದ ‌7 ಆತ್ಮಹತ್ಯೆಗೆ ಯತ್ನ: ಓರ್ವ ಮಹಿಳೆ ಸಾವು

ಚಾಕು ತೋರಿಸಿ ಸುಲಿಗೆ ಮಾಡ್ತಿದ್ದ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಪವನ್(20), ಪ್ರವೀಣ್(21) ಬಂಧಿತ ಆರೋಪಿಗಳು. ಜ.29ರಂದು ರಾತ್ರಿ 11.15ರ ಸುಮಾರಿಗೆ ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ಹಲ್ಲೆಗೈದು 1 ಮೊಬೈಲ್, 1 ಸಾವಿರ ನಗದು ದೋಚಿದ್ದರು. ಸದ್ಯ ಬಂಧಿತರಿಂದ 1ಲಕ್ಷ 10ಸಾವಿರ ಮೌಲ್ಯದ 7 ಮೊಬೈಲ್​ಗಳು, 1 ಬೈಕ್ ವಶಪಡಿಸಿಕೊಳ್ಳಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ