4 ದಿನಗಳಲ್ಲಿ 38 ಡ್ರಗ್​​​​ ಪೆಡ್ಲರ್​ಗಳನ್ನು ಬಂಧಿಸಿದ ಬೆಂಗಳೂರು ಪೊಲೀಸ್​

ನಗರದ 8 ವಿಭಾಗಗಳಲ್ಲಿ ಕಳೆದ 4 ದಿನಗಳಲ್ಲಿ 38 ಡ್ರಗ್​ ಪೆಡ್ಲರ್​ಗಳನ್ನು ಪೊಲೀಸರು ಬಂಧಿಸಿದ್ದು, ಗಾಂಜಾ, ಅಫೀಮು ವಶಕ್ಕೆ ಪಡೆದಿದ್ದಾರೆ.

4 ದಿನಗಳಲ್ಲಿ 38 ಡ್ರಗ್​​​​ ಪೆಡ್ಲರ್​ಗಳನ್ನು ಬಂಧಿಸಿದ ಬೆಂಗಳೂರು ಪೊಲೀಸ್​
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 02, 2023 | 9:28 PM

ಬೆಂಗಳೂರು: ನಗರದ 8 ವಿಭಾಗಗಳಲ್ಲಿ ಕಳೆದ 4 ದಿನಗಳಲ್ಲಿ 38 ಡ್ರಗ್​​ ಪೆಡ್ಲರ್ (drug peddlers) ​ಗಳನ್ನು ಪೊಲೀಸರು ಬಂಧಿಸಿದ್ದಾರೆ. 55 ಕೆಜಿ ಗಾಂಜಾ, 215 ಗ್ರಾಂ ಗಾಂಜಾ ಎಣ್ಣೆ, 768 ಗ್ರಾಂ ಅಫೀಮು, 15 ಗ್ರಾಂ ಸಿಂಥೆಟಿಕ್ ಡ್ರಗ್ಸ್​ ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್​ ವ್ಯಸನಿಗಳು ಸೇರಿದಂತೆ 347 ಜನರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ರಾಜ್ಯ ಇತ್ತೀಚೆಗೆ ಡ್ರಗ್ಸ್​ , ಗಾಂಜಾ ಜಾಲಗಳು ಪತ್ತೆಯಾಗುತ್ತಿದ್ದು, ಈ ಹಿನ್ನಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.

ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ: ಡ್ರಗ್​​ ಪೆಡ್ಲರ್ ಬಂಧಿಸಿದ ಪೊಲೀಸರು

ಬೆಂಗಳೂರು: ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಇತ್ತೀಚೆಗೆ ಬೆಂಗಳೂರು ಪೊಲೀಸರು ಬಂಧಿಸಿದ್ದರು. ಫಯಾಜ್ ಪಾಷಾ ಅಲಿಯಾಸ್ ಪಿಲ್ಲು ಬಂಧಿತ ಡ್ರಗ್ ಪೆಡ್ಲರ್. ಗುಬ್ಬಲಾಳ ಬಳಿಯ ಖಾಲಿ ಜಾಗವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ತಲಘಟ್ಟಪುರ ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು.

ಇದನ್ನೂ ಓದಿ: ಡ್ರಗ್ ಪೆಡ್ಲರ್​ಗಳ ವಿರುದ್ಧ ಸಮರ ಸಾರಿದ ಬೆಂಗಳೂರು ಪೊಲೀಸರು: 200ಕ್ಕೂ ಹೆಚ್ಚು ಜನ ವಶ

ಬಂಧಿತ ಆರೋಪಿ ಪಿಲ್ಲುನಿಂದ 10.50 ಲಕ್ಷ ಮೌಲ್ಯದ 15 ಕೆಜಿ ಗಾಂಜಾ, ನಗದು ಮತ್ತು ಬೈಕ್ ಜಪ್ತಿ ಮಾಡಿದ್ದರು. ಆರೋಪಿ ವಿರುದ್ಧ ಬನಶಂಕರಿ, ಜಯನಗರ, ಕೋರಮಂಗಲ, ಕೆ.ಎಸ್.ಲೇಔಟ್ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ​​ ದಾಖಲಾಗಿದ್ದವು. ಸದ್ಯ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.

ಜೈಲಿನಲ್ಲಿದ್ದುಕೊಂಡೇ ಹೆಂಡತಿ–ಮಕ್ಕಳಿಂದ ಗಾಂಜಾ ದಂಧೆ

ಜೈಲಿನಲ್ಲಿ ಕೂತು ಕೊಂಡೇ ತನ್ನ ಹೆಂಡತಿ ಮಕ್ಕಳಿಂದ ಆರೋಪಿ ಗಾಂಜಾ ದಂಧೆ ಮುಂದುವರೆಸಿದ್ದು ಮಹಿಳೆ ಪೊಲೀಸರ ಬಲೆಗೆ ಬಿದ್ದಿದ್ದಳು. ಗಾಂಜಾ ದಂಧೆಯಲ್ಲಿ ಒಂದು ತಿಂಗಳ ಹಿಂದೆ ಜೆಜೆ ನಗರ ಪೊಲೀಸರಿಂದ ಅರೆಸ್ಟ್ ಆಗಿ ಜೈಲು ಪಾಲಾಗಿದ್ದ ಮುಜ್ಜು ಎಂಬುವವನ ಹೆಂಡತಿ ನಗ್ಮಾ, ಗಾಂಜಾ ಸಾಗಿಸುವಾಗ ಕಲಾಸಿಪಾಳ್ಯ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಬಳಿಕ ಪೊಲೀಸರು ಆಕೆಯನ್ನೂ ಜೈಲಿಗಟ್ಟಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧನ

ಗಂಡ-ಹೆಂಡತಿ ಇಬ್ಬರೂ ಪರಪ್ಪನ ಅಗ್ರಹಾರ ಸೇರಿದ್ದು, ಮಕ್ಕಳು ಅನಾಥರಾಗಿದ್ದಾರೆ. ಈ ಗಂಡ-ಹೆಂಡತಿ ತಮ್ಮ ಚಿಕ್ಕ ಮಕ್ಕಳನ್ನೇ ಬಳಸಿಕೊಂಡಿ ಗಾಂಜಾ ದಂಧೆ ನಡೆಸುತ್ತಿದ್ದರು ಎಂಬುವುದು ಪತ್ತೆಯಾಗಿತ್ತು. ಗಾಂಜಾ ತರಲು ತನ್ನ ಮೂವರು ಮಕ್ಕಳೇ ಅಸ್ತ್ರವಾಗಿ ಬಳಸಿಕೊಂಡಿದ್ದಳು ಎನ್ನಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ