ಬೆಂಗಳೂರಿನಲ್ಲಿ ಮಹಿಳೆಯ ಬೆದರಿಸಿ ಹಣ ಸುಲಿಗೆ ಪ್ರಕರಣ: ನಾಲ್ವರು ಸಂಚಾರಿ ಪೊಲೀಸರ ಅಮಾನತು

Bengaluru Traffic Police: ರಸ್ತೆ ಮಧ್ಯದಲ್ಲಿ ಪ್ರಯಾಣಿಕರನ್ನು ತಡೆದು ಸುಲಿಗೆ ಮಾಡುವ ಟ್ರಾಫಿಕ್ ಪೊಲೀಸರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಈ ಪ್ರಕರಣದ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಅಷ್ಟಕ್ಕೂ ಮಹಿಳೆ ಒಬ್ಬರಿಂದ ಹಣಸುಲಿಗೆ ಮಾಡಿದ ಈ ಪ್ರಕರಣ ನಡೆದಿದ್ದು ಯಾವಾಗ? ನಂತರ ಏನಾಯ್ತು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಮಹಿಳೆಯ ಬೆದರಿಸಿ ಹಣ ಸುಲಿಗೆ ಪ್ರಕರಣ: ನಾಲ್ವರು ಸಂಚಾರಿ ಪೊಲೀಸರ ಅಮಾನತು
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Feb 28, 2024 | 7:52 AM

ಬೆಂಗಳೂರು, ಫೆಬ್ರವರಿ 28: ಮಹಿಳೆಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಸಂಚಾರ ಪೊಲೀಸರನ್ನು (Bengaluru Traffic Police) ಅಮಾನತುಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ (Bengaluru Police Commissioner) ದಯಾನಂದ್ ಆದೇಶ ಹೊರಡಿಸಿದ್ದಾರೆ. ಜೀವನ್ ಭೀಮಾ ನಗರ ಸಂಚಾರ ಠಾಣೆ ಇನ್​ಸ್ಪೆಕ್ಟರ್ ವೆಂಕಟಾಚಲಪತಿ, ಹೆಡ್ ಕಾನ್ಸ್​ಟೇಬಲ್​ಗಳಾದ ಗಿರೀಶ್, ಹುಚ್ಚು ಸಾಬ್ ಮತ್ತು ಕಾನ್ಸ್ ಟೇಬಲ್ ಬಸಪ್ಪ ಇವರನ್ನು ಅಮಾನತುಗೊಳಿಸಲಾಗಿದೆ.

ಕಳೆದ ಶನಿವಾರ ಇಸ್ರೋ ಜಂಕ್ಷನ್ ಬಳಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲಾಗುತ್ತಿತ್ತು. ಆ ಸಂದರ್ಭದಲ್ಲಿ ಮದ್ಯಪಾನ ಮಾಡಿ ಚಾಲನೆ ಮಾಡಿರುವುದಾಗಿ ಆರೋಪಿಸಿ ಮಹಿಳೆಯನ್ನು ಬೆದರಿಸಿ 8,000 ರೂಪಾಯಿ ಸುಲಿಗೆ ಮಾಡಿದ ಆರೋಪ ವೆಂಕಟಾಚಲಪತಿ ಹಾಗೂ ಇತರರ ಮೇಲೆ ಕೇಳಿ ಬಂದಿತ್ತು.

ಸಂಚಾರ ಪೊಲೀಸರು ತಮ್ಮ ಮಗಳಿಂದ ಹಣ ಸುಲಿಗೆ ಮಾಡಿದ್ದಾರೆ ಎಂದು ಸಂತ್ರಸ್ತ ಮಹಿಳೆಯ ತಂದೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿ ದೂರು ನೀಡಿದ್ದರು. ನಂತರ ಈ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು. ಪೂರ್ವ ಸಂಚಾರ ಡಿಸಿಪಿ ಕುಲದೀಪ ಕುಮಾರ್ ಜೈನ್ ಇಲಾಖೆ ಮಟ್ಟದ ತನಿಖೆ ನಡೆಸಿ ಆಯುಕ್ತರಿಗೆ ವರದಿ ಸಲ್ಲಿಸಿದ್ದರು. ಈ ವರದಿಯ ಆಧಾರದಲ್ಲಿ ಪೊಲೀಸ್ ಆಯುಕ್ತರು ಶಿಸ್ತು ಕ್ರಮ ಕೈಗೊಂಡಿದ್ದಾರೆ.

ಪಾದಚಾರಿಗಳಿಗೆ ಬೈಕ್ ಡಿಕ್ಕಿ

ರಸ್ತೆ ದಾಟುತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಇಬ್ಬರು ಪಾದಚಾರಿಗಳು ಗಾಯಗೊಂಡ ಘಟನೆ ಬೆಂಗಳೂರಿನ ಬ್ಯಾಟರಾನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ರಸ್ತೆಯ ಗುಡ್ಡದಹಳ್ಳಿಯ ಗಿರಿಯಾಸ್ ಶೋರೂಮ್ ಬಳಿ ನಡೆದಿದೆ. ಬೈಕ್ ಡಿಕ್ಕಿಯ ಪರಿಣಾಮವಾಗಿ ಇಬ್ಬರೂ ಗಾಯಗೊಂಡಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಮಂಗಳೂರು: SSLC ಪ್ರಿಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು ನದಿ ಬಳಿ ಶವವಾಗಿ ಪತ್ತೆ

ಘಟನೆ ಬಳಿಕ ಬ್ಯಾಟರಾಯನಪುರ ಸಂಚಾರ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 am, Wed, 28 February 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ