ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಿಕ್ಷುಕರ ಹಾವಳಿ ಹೆಚ್ಚಾಗಿದೆ; ಅದರಲ್ಲೂ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವವರಿಂದ ಕಿರಿಕಿರಿ ಜಾಸ್ತಿಯಾಗಿದೆ ಎನ್ನುವವರಿಗೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸಮಾಧಾನದ ಸುದ್ದಿ ನೀಡಿದ್ದಾರೆ. ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡಿದ್ರೆ ಹುಷಾರ್ ಎಂದು ಎಚ್ಚರಿಕೆ ನೀಡಿರುವ ಕಮಿಷನರ್ ಪಂತ್ ಅವರು ಟ್ರಾಫಿಕ್ ಸಿಗ್ನಲ್ನಲ್ಲಿ ಭಿಕ್ಷೆ ಬೇಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮ್ಮ ಪೊಲೀಸರಿಗೆ ಆದೇಶ ನೀಡಿದ್ದಾರೆ.
ಭಿಕ್ಷುಕರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಅಲ್ಲದೇ ಭಿಕ್ಷೆ ಬೇಡುವಾಗ ಹಣ ಕೊಡದವರ ಜೊತೆ ಅನುಚಿತವಾಗಿ ವರ್ತಿಸುತ್ತಾರೆ. ಹೀಗಾಗಿ ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸುವಂತೆ ಪೊಲೀಸ್ ಸಿಬ್ಬಂದಿಗೆ ಕಮಿಷನರ್ ಸೂಚನೆ ನೀಡಿದ್ದಾರೆ. ಲಾ ಅಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದಾರೆ. ಎಲ್ಲಾ ಡಿಸಿಪಿ ವಿಭಾಗಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸಲು ಸೂಚನೆ ನೀಡಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
Also Read:
ರಾತ್ರಿ ಊಟಕ್ಕಾಗಿ ಹಣ ಸಂಗ್ರಹಿಸಲು.. ಜೋಳಿಗೆ ಹಿಡಿದು ಭಿಕ್ಷೆ ಬೇಡಿದ ಸಾರಿಗೆ ಸಿಬ್ಬಂದಿ
Published On - 9:54 am, Tue, 16 February 21