AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಾವ, ಅಳಿಯ ಜಗಳ ಬಿಡಿಸಲು ಹೋದ ಕಾನ್ಸ್‌ಟೇಬಲ್‌ಗೆ ಇರಿತ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಪೊಲೀಸ್ ಪೇದೆಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ . ತಬ್ರೇಜ್ ಎಂಬಾತ ತನ್ನ ಮಾವ ಶಫೀವುಲ್ಲಾ ಜೊತೆ ಜಗಳವಾಡಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ನಾಲ್ವರನ್ನು ಬಂಧಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ರಾಮನಗರದಲ್ಲಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರನ್ನು ಕೊಲೆ ಮಾಡಲಾಗಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

ಬೆಂಗಳೂರು: ಮಾವ, ಅಳಿಯ ಜಗಳ ಬಿಡಿಸಲು ಹೋದ ಕಾನ್ಸ್‌ಟೇಬಲ್‌ಗೆ ಇರಿತ
ಆರೋಪಿ ತಬ್ರೇಜ್
ವಿವೇಕ ಬಿರಾದಾರ
|

Updated on:Jul 27, 2025 | 4:32 PM

Share

ಬೆಂಗಳೂರು, ಜುಲೈ 27: ಮಾವ ಮತ್ತು ಅಳಿಯನ ಜಗಳದಲ್ಲಿ ಮಧ್ಯೆ ಹೋದ ಪೊಲೀಸ್​ ಪೇದೆಗೆ (Constable) ಚಾಕುವಿನಿಂದ ಇರಿದ ಘಟನೆ ಚಾಮರಾಜಪೇಟೆಯ(Chamarajpet) ವಾಲ್ಮೀಕಿ ನಗರದಲ್ಲಿ ಶನಿವಾರ (ಜು.26) ರಾತ್ರಿ ನಡೆದಿದೆ. ಅಳಿಯ ತಬ್ರೇಜ್, ಮಾವ ಮೊಹಮ್ಮದ್ ಶಫೀವುಲ್ಲಾ ಮಧ್ಯೆ ಜಗಳ ನಡೆದಿತ್ತು. ತಬ್ರೇಜ್ ಪಾಷಾನು ತನ್ನ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿದ್ದನು. ಹೀಗಾಗಿ, ಶಫೀವುಲ್ಲಾ ತನ್ನ ಮಗಳಿಗೆ ಬೇರೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದರು. ಇದರಿಂದ ಸಿಟ್ಟಾದ ತಬ್ರೇಜ್ ಮತ್ತು ಈತನ ಸಂಬಂಧಿಕರು ಶಫೀವುಲ್ಲಾ ಜೊತೆ ಜಗಳ ತೆಗೆದಿದ್ದಾರೆ. ಗಲಾಟೆಯಲ್ಲಿ ಅಳಿಯ ತಬ್ರೇಜ್​ನು ಮಾವ ಶಫೀವುಲ್ಲಾಗೆ ಬಾಟಲ್‌ನಿಂದ ತಲೆಗೆ ಹೊಡೆದಿದ್ದಾನೆ.

ಗಲಾಟೆ ನಡೆಯುತ್ತಿರುವ ಬಗ್ಗೆ ಮಾಹತಿ ತಿಳಿದ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ, ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಆರೋಪಿ ತಬ್ರೇಜ್​ ಡ್ಯಾಗರ್‌ನಿಂದ ಪೊಲೀಸ್​ ಪೇದೆ ಸಂತೋಷ್‌ಗೆ ಇರಿದಿದ್ದಾನೆ. ಕೂಡಲೇ ಪೇದೆ ಸಂತೋಷ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಳಿಯ ತಬ್ರೇಜ್​ ವಿರುದ್ಧ ಮಾವ ಶಫೀವುಲ್ಲಾ ಚಾಮರಾಜಪೇಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳಾದ ತಬ್ರೇಜ್ ಮತ್ತು ಅಬ್ರೇಜ್​ ಸೇರಿದಂತೆ ನಾಲ್ವರನ್ನು ಬಂಧಸಿದ್ದಾರೆ.

ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷನ ಕೊಲೆ

ರಾಮನಗರ: ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಗ್ರಾ.ಪಂ ಮಾಜಿ ಅಧ್ಯಕ್ಷ ನಂಜೇಶ್ (45) ಮೃತ ದುರ್ದೈವಿ. ನಂಜೇಶ್ ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ದಾಗ 4-5 ಜನ ಆರೋಪಿಗಳು ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಗ್ರಾ.ಪಂ. ಮಾಜಿ ಅಧ್ಯಕ್ಷ ನಂಜೇಶ್ ಮೃತಪಟ್ಟಿದ್ದಾರೆ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ
Image
ಬೆಳಗಾವಿ: ಹೂವಿನ ಅಂಗಡಿ ಮಾಲೀಕನನ್ನು ಕೊಂದ ಬಿರಿಯಾನಿ ಶಾಪ್​ ಓನರ್
Image
ಸ್ನೇಹಿತೆಯ ಮಾತು ನಂಬಿ ಹೋಟೆಲ್​ನಿಂದ ಹೊರಬಂದ ಯುವಕ ಕಿಡ್ನ್ಯಾಪ್​
Image
MBA ವಿದ್ಯಾರ್ಥಿನಿಗೆ ಡ್ರೈವರ್​​​ ಮೇಲೆ ಲವ್: ಒಂದೇ ವರ್ಷದಲ್ಲಿ ದುರಂತ!
Image
ಬೆಂಗಳೂರು ವಿಮಾನ ನಿಲ್ದಾದಲ್ಲಿ ಪ್ಯಾಸೆಂಜರ್ ಬ್ಯಾಗ್‌ಗೆ ಚಿನ್ನ ಹಾಕಿ ಪರಾರಿ!

ಇದನ್ನೂ ಓದಿ: ಪಿಎಸ್​ಐನ ಹೊಡೆತಕ್ಕೆ ಶಾಶ್ವತ ಕಿವುಡನಾದ ಮನೆ ಬಾಡಿಗೆದಾರ

ಕೊಲೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಪ್ರಕರಣದ ಎ1 ಶ್ರೀನಿವಾಸ್ ಬಿಜೆಪಿ ಪಕ್ಷದಲ್ಲಿ ಸಕ್ರಿಯನಾಗಿದ್ದಾನೆ. ರಾಜಕೀಯ ದ್ವೇಷಕ್ಕೆ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇನ್ನು, ಗ್ರಾ.ಪಂ ಮಾಜಿ ಅಧ್ಯಕ್ಷ ನಂಜೇಶ್​ನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಬಿಜೆಪಿ ಮುಖಂಡ ಅಚ್ಚಲು ಕುಮಾರ್ ಮೇಲೆ ಕಾಂಗ್ರೆಸ್ ಮುಖಂಡ ದೊಡ್ಡಾಲಹಳ್ಳಿ ಕೃಷ್ಣಪ್ಪ ಹಾಗೂ ಸಹಚರರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಬಿಗಿ ಪೊಲೀಸ್ ಬಂದೋಬಸ್ತ್​ನಲ್ಲಿ ಅಂತ್ಯಕ್ರಿಯೆ ನೆರವೇರಿತು.

“ಸ್ನೇಹಿತನ ಅಂತ್ಯಸಂಸ್ಕಾರಕ್ಕೆ ಬಂದಿದ್ದಕ್ಕೆ ಹೊಡೆದಿದ್ದಾರೆ. ರಾಜಕೀಯ ಬೇರೆ, ಸ್ನೇಹ ಬೇರೆ. ಈ ರೀತಿ ಮಾಡುವುದು ಏಕೆ? ಬಿಜೆಪಿ ಮುಖಂಡ, ಗ್ರಾ. ಪಂ ಸದಸ್ಯ ಅಚ್ಚಲು ಕುಮಾರ್ ಹೇಳಿದರು.

ವರದಿ: ಪ್ರದೀಪ್​ ಚಿಕ್ಕಾಟಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Sun, 27 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ