ಬೆಂಗಳೂರು: ಹಲ್ಲೆ ಮಾಡಲು ಯತ್ನಿಸಿದ ರೌಡಿಶೀಟರ್ ಕಾಲಿಗೆ​ ಪೊಲೀಸರಿಂದ ಫೈರಿಂಗ್‌

ರೌಡಿಶೀಟರ್ ದಿನೇಶ್ ಹಲ್ಲೆ ಮಾಡಲು ಪ್ರಯತ್ನಿಸಿದ್ದರಿಂದ ಕಾನ್ಸ್‌ಟೇಬಲ್ ವಸಂತ್‌ ಎಂಬುವವರಿಗೆ ಗಾಯವಾಗಿದೆ. ತದ ನಂತರ ಕಾನ್ಸ್‌ಟೇಬಲ್ ವಸಂತ್ ಮತ್ತು ರೌಡಿಶೀಟರ್‌ ದಿನೇಶ್ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ

ಬೆಂಗಳೂರು: ಹಲ್ಲೆ ಮಾಡಲು ಯತ್ನಿಸಿದ ರೌಡಿಶೀಟರ್ ಕಾಲಿಗೆ​ ಪೊಲೀಸರಿಂದ ಫೈರಿಂಗ್‌
ಸಾಂದರ್ಭಿಕ ಚಿತ್ರ
Follow us
guruganesh bhat
|

Updated on: Apr 25, 2021 | 6:44 PM

ಬೆಂಗಳೂರು: ನಗರದ ಲಾಂಗ್ ಫೋರ್ಡ್ ರಸ್ತೆಯ ಕ್ರಿಶ್ಚಿಯನ್ ಸೆಮೆಟ್ರಿ ಬಳಿ ರೌಡಿಶೀಟರ್ ದಿನೇಶ್ ಎಂಬ ವ್ಯಕ್ತಿಯ ಕಾಲಿಗೆ ಅಶೋಕ್‌ನಗರ ಠಾಣೆಯ ಇನ್ಸ್‌ಪೆಕ್ಟರ್ ಭರತ್‌ ಫೈರಿಂಗ್ ನಡೆಸಿದ್ದಾರೆ. ಕೊಲೆ ಪ್ರಕರಣವೊಂದರ ಸಂಬಂಧ ಮಾರಕಾಸ್ತ್ರ ಜಪ್ತಿಗೆ ತೆರಳಿದ್ದ ವೇಳೆ ರೌಡಿಶೀಟರ್ ದಿನೇಶ್ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಭರತ್‌ ರೌಡಿಶೀಟರ್ ದಿನೇಶ್ ಮೇಲೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ರೌಡಿಶೀಟರ್ ದಿನೇಶ್ ಹಲ್ಲೆ ಮಾಡಲು ಪ್ರಯತ್ನಿಸಿದ್ದರಿಂದ ಕಾನ್ಸ್‌ಟೇಬಲ್ ವಸಂತ್‌ ಎಂಬುವವರಿಗೆ ಗಾಯವಾಗಿದೆ. ತದ ನಂತರ ಕಾನ್ಸ್‌ಟೇಬಲ್ ವಸಂತ್ ಮತ್ತು ರೌಡಿಶೀಟರ್‌ ದಿನೇಶ್ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಮಾರ್ಚ್ 20 ರಂದು ರವಿವರ್ಮ ಎಂಬ ವ್ಯಕ್ತಿಯ ಕೊಲೆ ನಡೆದಿತ್ತು. ಈ ಪ್ರಕರಣದ ಸಂಬಂಧ ಮಾರ್ಚ್ 24ರಂದು ಆರು ಆರೋಪಿಗಳನ್ನು ಅಶೋಕನಗರ ಪೊಲೀಸರು‌ ಬಂಧಿಸಿದ್ದರು. ಇವರಲ್ಲಿ ದಿನೇಶ್ ಎಂಬಾತನನ್ನು A1 ಆರೋಪಿಯನ್ನಾಗಿಸಲಾಗಿತ್ತು. ಪ್ರಕರಣದ ವಿಚಾರಣೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಸಿಟರ್ ದಿನೇಶ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Bengaluru Police fired at Rowdy Sheeters leg when he attempt to assault)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್