ಸುಳ್ಳು ದೂರು ಕೊಟ್ಟ ಮಾಜಿ ಬಿಗ್ ಬಾಸ್ ಸ್ಪರ್ಧಿ ವಿರುದ್ಧ ಕ್ರಮಕ್ಕೆ ಮುಂದಾದ ಬೆಂಗಳೂರು ಪೊಲೀಸರು
ತನ್ನ ಮೇಲೆ ಲಾರಿ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಆದಂ ಪಾಷಾ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು. ಪ್ರರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಆದಂ ಪಾಷಾ ಕಳ್ಳಾಟ ಬಯಲಾಗಿದೆ. ಸುಳ್ಳು ಪ್ರಕರಣ ದಾಖಲಿಸಿದ ಆದಂ ಪಾಷಾ ವಿರುದ್ಧ ಇದೀಗ ಪೊಲೀಸರು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.
ಬೆಂಗಳೂರು, ಫೆ.17: ತನ್ನ ಮೇಲೆ ಲಾರಿ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ಬಾಸ್ (Bigg Boss) ಸ್ಪರ್ಧಿ ಆದಂ ಪಾಷಾ (Adam Pasha) ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು. ಪ್ರರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಆದಂ ಪಾಷಾ ಕಳ್ಳಾಟ ಬಯಲಾಗಿದೆ. ಸುಳ್ಳು ಪ್ರಕರಣ ದಾಖಲಿಸಿದ ಆದಂ ಪಾಷಾ ವಿರುದ್ಧ ಇದೀಗ ಪೊಲೀಸರು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ವ್ಯಾಲಂಕೇಣಿ ಬ್ರಿಡ್ಜ್ ಬಳಿ ವಾಟರ್ ಟ್ಯಾಂಕ್ ಲಾರಿ ಅತಿವೇಗವಾಗಿ ಬರುತ್ತಿದ್ದದ್ದನ್ನು ಪ್ರಶ್ನಿಸಿದಕ್ಕೆ ಚಾಲಕ ತನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾಗಿ ಆದಂ ಪಾಷಾ ದೂರು ನೀಡಿದ್ದರು.
ಇದನ್ನೂ ಓದಿ: ರೆಸ್ಟೊರೆಂಟ್ನಲ್ಲಿ ರೊಚ್ಚಿಗೆದ್ದ ಬಿಗ್ ಬಾಸ್ ವಿನ್ನರ್; ನಡೆದೋಯ್ತು ರಾದ್ಧಾಂತ
ಎಫ್ಐಆರ್ ದಾಖಲಿಸುವ ವೇಳೆ ಆದಂ ಪಾಷಾ ರಾಂಗ್ ನಂಬರ್ ಕೊಟ್ಟಿದ್ದಾರೆ. ತನಿಖೆ ವೇಳೆ ಆದಂ ಪಾಷಾ ಸುಳ್ಳು ದೂರು ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಆದಂ ಪಾಷಾ ಕಳ್ಳಾಟ ಬಯಲಾಗಿದೆ. ತನ್ನ ಬಟ್ಟೆಗಳನ್ನ ತಾನೇ ಹರಿದುಕೊಂಡು ಬಂದು ದೂರು ಕೊಟ್ಟಿರುವುದು ತಿಳಿದುಬಂದಿದೆ.
ಇದೀಗ ಸಿಸಿಟಿವಿಯ ಒರಜಿನಾಲಿಟಿ ರಿಪೋರ್ಟ್ಗೆ ಪೊಲೀಸರು ಕಳಿಸಿದ್ದು, ಸುಳ್ಳು ದೂರು ಕೊಟ್ಟ ಹಿನ್ನಲೆ ಆದಂ ಪಾಷಾ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅದರಂತೆ ಮಾಜಿ ಬಿಗ್ಬಾಸ್ ಸ್ಪರ್ಧಿ ಆದಂ ಪಾಷಾಗೆ ಬಂಧನದ ಭೀತಿ ಶುರುವಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ