AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 3 ಕೋಟಿ ರೂ. ಮೌಲ್ಯದ ಡ್ರಗ್ಸ್​, ಗಾಂಜಾ ಜಪ್ತಿ

ಬೆಂಗಳೂರು ಪೊಲೀಸರು ಅಮೃತಹಳ್ಳಿಯಲ್ಲಿ ನಡೆದ ಡ್ರಗ್ಸ್ ದಂಧೆಯನ್ನು ಭೇದಿಸಿ 3 ಕೋಟಿ ರೂಪಾಯಿ ಮೌಲ್ಯದ 3 ಕೆಜಿ ಡ್ರಗ್ಸ್ ಮತ್ತು ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ನೈಜೀರಿಯನ್ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಗೃಹ ಸಚಿವ ಪರಮೇಶ್ವರ್ ಅವರು ರಾಜ್ಯದಲ್ಲಿ ಡ್ರಗ್ಸ್ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ಡ್ರಗ್ಸ್ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಪೊಲೀಸರು ಶ್ರಮಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ 3 ಕೋಟಿ ರೂ. ಮೌಲ್ಯದ ಡ್ರಗ್ಸ್​, ಗಾಂಜಾ ಜಪ್ತಿ
ಡ್ರಗ್ಸ್​ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಬಂಧ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 28, 2025 | 1:19 PM

Share

ಬೆಂಗಳೂರು, ಮೇ 28: ಬೆಂಗಳೂರು (Bengaluru) ಪೊಲೀಸರು ಡ್ರಗ್ಸ್​ (Drugs) ಮಾರಾಟ ಮತ್ತು ಸೇವನೆ ವಿರುದ್ಧ ಸಮರ ಸಾರಿದ್ದಾರೆ. ಡ್ರಗ್ಸ್​ ಮುಕ್ತ ಬೆಂಗಳೂರು ಮಾಡಲು ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಅಮೃತಹಳ್ಳಿ ಭಾಗದಲ್ಲಿ ಎಂಡಿಎಂಎ ಕ್ರಿಸ್ಟಲ್, ಗಾಂಜಾ ಮಾರುತ್ತಿದ್ದ ನೈಜೀರಿಯಾ​ ಮೂಲದ ಪ್ರಜೆ ಪೆಪೆಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಹಳ್ಳಿ ಠಾಣೆ ಪೊಲೀಸರು ಆರೋಪಿ ಬಳಿ ಇದ್ದ 3 ಕೋಟಿ ಮೌಲ್ಯದ 3 ಕೆಜಿ ಡ್ರಗ್ಸ್ ಮತ್ತು ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಡ್ರಗ್ಸ್ ಜಾಲ​ ಸಂಪೂರ್ಣವಾಗಿ ನಿರ್ನಾಮ ಮಾಡಲು ಪಣ: ಪರಮೇಶ್ವರ್​

ಬೆಂಗಳೂರಿನಲ್ಲಿ ಡ್ರಗ್ಸ್ ಕಂಟ್ರೋಲ್ ಮಾಡಿದ್ದೇವೆ. ಇನ್ನೂ ಅನೇಕ‌ ಕಡೆ ಡ್ರಗ್ಸ್ ಸಿಗುತ್ತಿದೆ. ಈ ಬಗ್ಗೆ ಮಾಹಿತಿ ಇದೆ. ಡ್ರಗ್ಸ್ ಮಾರಾಟ ಸಂಬಂಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಯಾ ಇನ್ಸ್​​ಪೆಕ್ಟರ್​ಗಳು ಜವಾಬ್ದಾರಿಯಾಗಿರುತ್ತಾರೆ. ಡ್ರಗ್ಸ್​ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ಕೆಲವು ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್​ ಹೇಳಿದ್ದರು.

11 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಯುವಕ ಅರೆಸ್ಟ್

11.6ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನನ್ನು ಗೋವಾ ಪೊಲೀಸರು ಬಂಧಿಸಿದ್ದರು. ಯುವಕನ ಬಳಿ ಇದ್ದ 11 ಕೆಜಿಗಿಂತ ಹೆಚ್ಚು ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದರು ಎಂದು ವರದಿಯಾಗಿತ್ತು. ಯುವಕ ನೇಪಾಳದಿಂದ ಭಾರತಕ್ಕೆ ಮಾದಕ ದ್ರವ್ಯಗಳನ್ನು ಸಾಗಿಸುತ್ತಿದ್ದನು. ಈತನ ಚಲನವಲನದ ಮೇಲೆ ರಾಜ್ಯ ಗುಪ್ತಚರ ಇಲಾಖೆ ಕಳೆದೊಂದು ತಿಂಗಳಿನಿಂದ ನಿಗಾ ಇಟ್ಟಿತ್ತು. ಮಾದಕ ದ್ಯವ್ಯ ತೆಗೆದುಕೊಂಡು ಗೋವಾಕ್ಕೆ ಬಂದಿದ್ದ ಯುವಕನ ಬಗ್ಗೆ ರಾಜ್ಯ ಗುಪ್ತರಚರ ಇಲಾಖೆ ನೀಡಿದ ಖಚಿತ ಮಾಹಿತಿ ಆಧರಿಸಿ, ಗುಯಿರಿಮ್‌ನಲ್ಲಿ ಯುವಕನನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು.

ಇದನ್ನೂ ಓದಿ
Image
ಡ್ರಗ್ಸ್ ಪೂರೈಸುತ್ತಿದ್ದ ಆಫ್ರಿಕಾ ಪ್ರಜೆ ಬಂಧನ: 4 ಕೋಟಿ ರೂ. ಡ್ರಗ್ಸ್ ವಶ
Image
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Image
ಕರಾವಳಿ ಭದ್ರತೆಗೆ ಗಂಭೀರ ಅಪಾಯ ತಂದಿಟ್ಟ ಸರ್ಕಾರದ ಹೊಸ ಆದೇಶ
Image
ಶಾಲಾ ಕಾಲೇಜುಗಳನ್ನೇ ಗುರಿಯಾಗಿಸಿ ಚರಸ್ ಚಾಕೊಲೇಟ್ ದಂಧೆ, ಆರೋಪಿಗಳ ಬಂಧನ

ಪ್ರಕರಣ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಗುಪ್ತಾ ಮಾತನಾಡಿ, ಮಾದಕ ದ್ರವ್ಯ ವಿರುದ್ಧ ನಡೆಸಿದ್ದ ಕಾರ್ಯಾಚರಣೆ ಇತಿಹಾಸದಲ್ಲೇ ಇದುವರೆಗಿನ ಅತಿದೊಡ್ಡ ಮಾದಕ ದ್ರವ್ಯ ಜಪ್ತಿ ಇದಾಗಿದೆ. ಯುವಕನ ವಿರುದ್ಧ ಎನ್​ಡಿಪಿಎಸ್​ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್​ ಆರಂಭ: ಗೃಹ ಸಚಿವ ಅಧಿಕೃತ ಘೋಷಣೆ

ಪ್ರಕರಣ ಸಂಬಂಧ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾತನಾಡಿ, ಗೋವಾ ಸರ್ಕಾರವು ಮಾದಕ ದ್ರವ್ಯ ಸರಬರಾಜು ಮತ್ತು ಸೇವಿಸುವರ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಮಾದಕ ದ್ರವ್ಯ ಕಳ್ಳಸಾಗಣಿಕೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಮತ್ತು ಎನ್​ಡಿಪಿಎಸ್​ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದರು.

ವರದಿ: ಪ್ರದೀಪ್​ ಚಿಕ್ಕಾಟಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ