AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಬ್ಲಾಸ್ಟ್: ಮತ್ತಿಬ್ಬರ ಫೋಟೋ ಬಿಡುಗಡೆ ಮಾಡಿದ NIA, ಸುಳಿವು ಕೊಟ್ಟವರಿಗೆ ಬಂಪರ್ ಬಹುಮಾನ

ಬೆಂಗಳೂರಿನ ರಾಮೇಶ್ವರಂ ಕೆಫ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎನ್​ಐಎ ಓರ್ವ ಆರೋಪಿಯನ್ನು ಬಂಧಿಸಿದೆ. ಇದೀಗ NIA ಗೆ ಬೇಕಾಗಿರುವ ಇಬ್ಬರು ಆರೋಪಿ ಅಬ್ದುಲ್ ಮಥೀನ್ ತಾಹಾ ಹಾಗು ಮುನ್ಸವಿರ್ ಶಾಜೀಬ್ ಹುಸೇನ್ ಇಬ್ಬರೂ ಪರಾರಿಯಾಗಿದ್ದಾರೆ. ಇದೀಗ ಇವರಿಬ್ಬರ ಬಂಧನಕ್ಕೆ ಎನ್​ಐಎ ಕಾರ್ಯಚರಣೆ ನಡೆಸಿದೆ. ಹೀಗಾಗಿ ಇವರಿಬ್ಬರ ಫೋಟೋವನ್ನು ಬಿಡುಗಡೆ ಮಾಡಿದ್ದು, ಇವರ ಸುಳಿವು ನೀಡಿವರಿಗೆ ಬಹುಮಾನ ಸಹ ಘೋಷಣೆ ಮಾಡಿದೆ.

ರಾಮೇಶ್ವರಂ ಕೆಫೆ ಬ್ಲಾಸ್ಟ್: ಮತ್ತಿಬ್ಬರ ಫೋಟೋ ಬಿಡುಗಡೆ ಮಾಡಿದ NIA, ಸುಳಿವು ಕೊಟ್ಟವರಿಗೆ ಬಂಪರ್ ಬಹುಮಾನ
TV9 Web
| Edited By: |

Updated on:Mar 29, 2024 | 8:15 PM

Share

ಬೆಂಗಳೂರು, (ಮಾರ್ಚ್ 29): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ (Bengaluru Rameshwaram cafe blast Case) ಸಂಬಂಧಿಸಿದಂತೆ ಎನ್​ಐಎ (NIA) ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಾಮೇಶ್ವರಂ ಕೆಫ್​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಎನ್ನುವಾತನನ್ನು ನಿನ್ನೆ(ಮಾರ್ಚ್ 29) ಅಧಿಕಾರಿಗಳು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತಿಬ್ಬರ ಪ್ರಮುಖ ಆರೋಪಗಳ ಪತ್ತೆಗೆ ಬಲೆ ಬೀಸಿದೆ. ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು, ಈ ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್​ಐಎ ಘೋಷಣೆ ಮಾಡಿದೆ.

ಸ್ಫೋಟ ನಡೆಸಿದ ಪ್ರಮುಖ ಆರೋಪಿಯನ್ನು ಮುಸ್ಸಾವಿರ್ ಶಾಜಿಬ್ ಹುಸೇನ್ ಎಂದು ತನಿಖಾ ಸಂಸ್ಥೆ ಗುರುತಿಸಿದ್ದು, ಆತನ ಚಲನವಲನಗಳು ರಾಮೇಶ್ವರಂ ಕೆಫೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಎನ್ಐಎ ಪ್ರಕಾರ, ಆತ ಸುಮಾರು 6 ಅಡಿ 2 ಇಂಚು ಎತ್ತರವಿರುವ 30 ವರ್ಷದ ವ್ಯಕ್ತಿ. ಬಾಲಕರ ಹಾಸ್ಟೆಲ್, ಪಿಜಿ ಅಥವಾ ಯಾವುದೇ ಕಡಿಮೆ ಬಜೆಟ್ ಹೋಟೆಲ್​ಗಳಲ್ಲಿ ವಾಸಿಸುತ್ತಿದ್ದಾನೆ. ಮೊಹಮ್ಮದ್ ಜುನೇದ್ ಸಯೀದ್ ಹೆಸರಿನಲ್ಲಿ ನಕಲಿ ಚಾಲನಾ ಪರವಾನಗಿ ಬಳಸುತ್ತಿದ್ದಾನೆ ಎಂದೂ ತನಿಖಾಧಿಕಾರಿಗಳು ಹೇಳಿದ್ದಾರೆ. ಆರೋಪಿ ತನ್ನ ಮೂಲ ಗುರುತನ್ನು ಮರೆಮಾಚಲು ಮುಖಗವಸು, ನಕಲಿ ಗಡ್ಡ ಅಥವಾ ವಿಗ್ ಧರಿಸುತ್ತಾನೆ ಎಂದು ಹೇಳಿದೆ.

ಸ್ಫೋಟದ ಇನ್ನೋರ್ವ ಆರೋಪಿ ಅಬ್ದುಲ್ ಮತೀನ್ ಅಹ್ಮದ್ ತಾಹಾ, ಸ್ಫೋಟ ನಡೆಸಲು ಮುಸ್ಸಾವಿರ್​ಗೆ ಸಹಾಯ ಮಾಡಿದ್ದನೆಂದು ಹೇಳಲಾಗಿದ್ದು, ಆತನಿಗೂ ಹುಡುಕಾಟ ನಡೆಯುತ್ತಿದೆ. ಈತ ತನ್ನ ಮೂಲ ಗುರುತನ್ನು ಮರೆಮಾಚಲು ವಿಘ್ನೇಶ್ ಡಿ ಮತ್ತು ಸುಮಿತ್ ಎಂಬ ಹಿಂದೂ ಹೆಸರನ್ನೂ ಬಳಸುತ್ತಿದ್ದಾನೆ ಎಂದು ಎನ್​​ಐಎ ಹೇಳಿದೆ. ಆತ ಬಹುಶಃ ಹುಡುಗರ ಹಾಸ್ಟೆಲ್ ಗಳು, ಪಿಜಿಗಳು ಅಥವಾ ಯಾವುದೇ ಕಡಿಮೆ ಬಜೆಟ್ ಹೋಟೆಲ್ ಗಳಲ್ಲಿ ವಾಸಿಸುತ್ತಿದ್ದಾನೆ ಎಂದು ಹೇಳಿದ್ದಾರೆ. ಇಬ್ಬರೂ ಆರೋಪಿಗಳು ತೀರ್ಥಹಳ್ಳಿ ಮೂಲದವರು.

Published On - 6:02 pm, Fri, 29 March 24