ಎದುರಿಗಿರುವವರು ನಗ್ನವಾಗಿ ಕಾಣುವ ನಕಲಿ ಕನ್ನಡಕ ಮಾರಾಟ, ಬೆಂಗಳೂರಿನ ನಾಲ್ವರು ಅರೆಸ್ಟ್

|

Updated on: May 07, 2023 | 12:47 PM

ತಮ್ಮ ಎದುರಿಗಿರುವವರನ್ನು ಬೆತ್ತಲೆಯಾಗಿ ಕಾಣಲು ಸಹಾಯ ಮಾಡುವ ಕನ್ನಡಕವನ್ನು ಮಾರಾಟ ಮಾಡುವ ನೆಪದಲ್ಲಿ ಸಾರ್ವಜನಿಕರಿಗೆ ಆಮಿಷವೊಡ್ಡುತ್ತಿದ್ದ ನಾಲ್ವರು ಸಿಕ್ಕಿಬಿದ್ದಿದ್ದಾರೆ.

ಎದುರಿಗಿರುವವರು ನಗ್ನವಾಗಿ ಕಾಣುವ ನಕಲಿ ಕನ್ನಡಕ ಮಾರಾಟ, ಬೆಂಗಳೂರಿನ ನಾಲ್ವರು ಅರೆಸ್ಟ್
ಸಾಂದರ್ಭಿಕ ಚಿತ್ರ
Follow us on

ಚೆನ್ನೈ: ಮುಂದೆ ನಿಂತಿರುವವರು ನಗ್ನವಾಗಿ ಕಾಣುವಂತ ನಕಲಿ ಕನ್ನಡಕವನ್ನು ಮಾರಾಟ ಮಾಡಲು ಪ್ರಯತ್ನಿಸಿದ್ದ ಬೆಂಗಳೂರು ಮೂಲದ ನಾಲ್ವರು ಆರೋಪಿಗಳನ್ನ ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಿವಾಸಿಗಳಾದ ಶಿವ ಅಲಿಯಾಸ್ ಸೂರ್ಯ (39), ಕುಗೈಪ್ (37), ಜಿತು (24) ಮತ್ತು ಇರ್ಷಾದ್ (21) ಬಂಧಿತ ಆರೋಪಿಗಳು. ಈ ನಾಲ್ವರು ಕಿರಾತಕರು, ನಕಲಿ ಕನ್ನಡಕದಿಂದ ಎದುರಿಗಿರುವವರು ನಗ್ನವಾಗಿ ಕಾಣುತ್ತಾರೆ ಎಂದು ನಂಬಿಸಿ ದೊಡ್ಡ ಮೊತ್ತದ ಹಣಕ್ಕೆ ಮಾರಾಟ ಮಾಡಲು ಯತ್ನಿಸಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ: ಪುಲಿಕೇಶಿನಗರ ಪೊಲೀಸರಿಂದ ರೈಸ್ ಪುಲ್ಲಿಂಗ್ ದಂಧೆ ಡೀಲ್ ಪ್ರಕರಣ; ಮತ್ತಿಬ್ಬರು ಪೊಲೀಸ್ ಸಿಬ್ಬಂದಿ ಅಮಾನತ್ತು

ನಗ್ನವಾಗಿ ಕಾಣುವ ನಕಲಿ ಕನ್ನಡಕವನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಎಮ್‌ಬಿಟಿ ಪೊಲೀಸರು ಕೋಯಂಬೇಡು ಬಸ್ ನಿಲ್ದಾಣದ ಬಳಿಯ ಲಾಡ್ಜ್‌ನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಇನ್ನು ಈ ನಾಲ್ವರು ಆರೋಪಿಗಳು ರೈಸ್ ಪುಲ್ಲಿಂಗ್ ಮಾಡುವ ಪುರಾತನ ಕಾಲದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ವಸ್ತುವನ್ನು ಕೊಡುವುದಾಗಿ ನಂಬಿಸಿ ಜನರಿಗೆ ಮಾರಾಟ ಮಾಡಿ ವಂಚಿಸಿದ್ದಾರೆ ಎಂಬ ಆರೋಪವೂ ಇದೆ.

ಅಲ್ಲದೇ ತಮ್ಮ ಎದುರಿಗಿರುವವರನ್ನು ಬೆತ್ತಲೆಯಾಗಿ ಕಾಣಲು ಸಹಾಯ ಮಾಡುವ ಕನ್ನಡಕವನ್ನು ಮಾರಾಟ ಮಾಡುವ ನೆಪದಲ್ಲಿ ಸಾರ್ವಜನಿಕರಿಗೆ ಆಮಿಷವೊಡ್ಡುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಇನ್ನು ದುಬಾರಿ ಹಣ ಕೊಟ್ಟು ಕನ್ನಡಕ ಖರೀದಿಸಿದ ಜನರು ಎದುರಿಗಿರುವವರು ನಗ್ನವಾಗಿ ಕಾಣದಿರುವುದನ್ನು ಪ್ರಶ್ನಿಸಿದರೆ ನಕಲಿ ಪಿಸ್ತೂಲ್‌ನಿಂದ ಬೆದರಿಸಿ ಹಣವನ್ನೂ ದೋಚಿದ್ದಾರೆ ಎಂದು ತಿಳಿದು ಬಂದಿದ್ದು, ಇನ್ನು ಈ ಆರೋಪಿಗಳು ಇನ್ನೆಷ್ಟು ಜನರಿಗೆ ಮೋಸ ಮಾಡಿದ್ದಾರೆ. ಎಲ್ಲಿಲ್ಲೆ ಈ ರೀತಿ ಮಾಡಿದ್ದಾರೆ ಎನ್ನುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ