AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಖಾಸಗಿ ಶಾಲಾ ಬಸ್​​ಗೆ ಸರ್ಕಾರಿ ಶಾಲಾ ವಿದ್ಯಾರ್ಥಿ ಬಲಿ

ಸರ್ಕಾರಿ ಶಾಲೆಯ ವಿದ್ಯಾರ್ಥಿಗೆ ಖಾಸಗಿ ಶಾಲಾ ಬಸ್​ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಖಾಸಗಿ ಶಾಲಾ ಬಸ್​​ಗೆ ಸರ್ಕಾರಿ ಶಾಲಾ ವಿದ್ಯಾರ್ಥಿ ಬಲಿ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Sep 14, 2022 | 10:37 PM

Share

ಬೆಂಗಳೂರು: ಸರ್ಕಾರಿ ಶಾಲೆಯ ವಿದ್ಯಾರ್ಥಿಗೆ ಖಾಸಗಿ ಶಾಲಾ ಬಸ್​ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿದ್ಯಾರ್ಥಿ ನಿತೀಶ್ ಮೃತ ದುರ್ದೈವಿ. ನಿತೀಶ್ ನಡೆದುಕೊಂಡು ಮುನ್ನೆಕೊಳಲು ಸರ್ಕಾರಿ ಶಾಲೆಗೆ ಹೋಗುತ್ತಿದ್ದನು. ಈ ವೇಳೆ ರಾಯನ್ ಇಂಟರ್ ನ್ಯಾಷನಲ್ ಶಾಲೆಯ ಬಸ್​ ಡಿಕ್ಕಿ ಹೊಡೆದಿದೆ. ಕೂಡಲೇ ಬಸ್​ ಚಾಲಕ ಬಾಲಕನ ಬಳಿಗೆ ಬಂದು, ಕೆಳಗೆ ಬಿದ್ದ ಬಾಲಕನನ್ನು ಮೇಲೆತ್ತಿ ಏನು ಆಗಿಲ್ಲ ಅಂತ ನೀರು ಕುಡಿಸಿದ್ದಾನೆ.

ನಿತೀಶ್ ಆಪಘಾತದ ವೇಳೆ ಚೆನ್ನಾಗಿ ಮಾತಾನಾಡಿಕೊಂಡಿದ್ದನು. ಬಳಿಕ ನಡೆದುಕೊಂಡೇ ಶಾಲೆಗೆ ಹೋಗಿದ್ದಾನೆ. ಕ್ಲಾಸ್ ರೂಂ ನಲ್ಲಿ ಕುಳಿತಿದ್ದ ವೇಳೆ ತಲೆಯಲ್ಲಿ ಊತ ಕಾಣಿಸಿಕೊಂಡು ಬಾಲಕ ಕೆಳಗೆ ಬಿದ್ದಿದ್ದಾನೆ. ಕೂಡಲೇ ಶಾಲಾ ಸಿಬ್ಬಂದಿ ಪೋಷಕರಿಗೆ ವಿಷಯ ತಿಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಸ್ಪತ್ರೆಗೆ ದಾಖಲಾದ ಕೇವಲ ಒಂದು ಗಂಟೆಯಲ್ಲಿ ಬಾಲಕ ನಿತೀಶ್ ಸಾವನ್ನಪ್ಪಿದ್ದಾನೆ. ಆಂತರಿಕ ರಕ್ತಸ್ರಾವದಿಂದ ಬಾಲಕ ನಿತೀಶ್ಸ್ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಹೆಚ್ಎಎಲ್ ಸಂಚಾರಿ ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಾಲಕ ವಿಠಲ್​ನನ್ನು ಬಂಧಿಸಿ, ಬಸ್ ಸೀಜ್ ಮಾಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?