Techie Death: ಬೆಂಗಳೂರಿನಲ್ಲಿ ಕಾರಿನಲ್ಲೇ ಸಾಫ್ಟ್ವೇರ್ ಎಂಜಿನಿಯರ್ ಆತ್ಮಹತ್ಯೆ
ಸಾಫ್ಟ್ವೇರ್ ಎಂಜಿನಿಯರ್ ಒಬ್ಬರು ಕಾರಿನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕುರಬರಹಳ್ಳಿ ಜಂಕ್ಷನ್ ಬಳಿ ನಡೆದಿದೆ.
ಸಾಫ್ಟ್ವೇರ್ ಎಂಜಿನಿಯರ್ ಒಬ್ಬರು ಕಾರಿನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕುರಬರಹಳ್ಳಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ವಿಜಯ್ಕುಮಾರ್(51) ಎಂದು ಗುರುತಿಸಲಾಗಿದೆ. ಅವರು ಮಹಾಲಕ್ಷ್ಮೀ ಲೇಔಟ್ನ ನಿವಾಸಿಯಾಗಿದ್ದಾರೆ.ಕೆಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂಬುದು ತಿಳಿದುಬಂದಿದೆ.
ಆದರೆ ಕಾರಿಗೆ ಹೊದಿಕೆ ಮುಚ್ಚಿದ್ದ ಕಾರಣ ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಶಂಕೆ ವ್ಯಕ್ತವಾಗಿದೆ, ಮುಖಕ್ಕೆ ಪ್ಲಾಸ್ಟಿಕ್ ಕವರ್ ಕಟ್ಟಿತ್ತು, ಜತೆಗೆ ನೈಟ್ರೋಜನ್ ಆಕ್ಸಿಜನ್ ಪೈಪ್ ಅನ್ನು ಮೂಗಿಗೆ ಬಿಟ್ಟಿರುವ ಸ್ಥಿತಿ ಇತ್ತು.
ಅನಾರೋಗ್ಯದಿಂದ ಬೇಸತ್ತು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಹೃದಯ ಸಂಬಂಧಿ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿ ಪತ್ನಿ ಜತೆ ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವ ವಿಷಯವನ್ನು ಪ್ರಸ್ತಾಪಿಸಿದ್ದರು.
ಮತ್ತಷ್ಟು ಓದಿ: ಅಮೃತಹಳ್ಳಿ: ಟೆಕ್ಕಿಯ ಪ್ರೀತಿಸಿ ವಿವಾಹವಾಗಿದ್ದ ಟೆಕ್ಕಿ ಸಂಗೀತಾ ನೇಣಿಗೆ ಶರಣು
ಕಾರನ್ನು ವಾಷ್ ಮಾಡಿಸುವ ನೆಪದಲ್ಲಿ ಮನೆಯಿಂದ ಹೊರಗೆ ಬಂದಿದ್ದ ವಿಜಯ್ ಕುಮಾರ್, ಪಾನಿಪುರಿ ಅಂಗಡಿಗಿಂತ ಸ್ವಲ್ಪ ದೂರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸುಸ್ತಾಗಿದೆ ನಿದ್ರೆ ಮಾಡಬೇಕೆಂದು ಸಾರ್ವಜನಿಕರ ಬಳಿ ಸಹಾಯ ಪಡೆದು ಕಾರಿಗೆ ಹೊದಿಕೆ ಹಾಕಿಸಿಕೊಂಡಿದ್ದರು. ಬಳಿಕ ಕಾರಿನಲ್ಲಿದ್ದ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಅನ್ನು ಆನ್ ಮಾಡಿದ್ದರು.
ಪ್ಲಾಸ್ಟಿಕ್ ಕವರ್ ಮುಖಕ್ಕೆ ಸುತ್ತಿಕೊಂಡು ಪೈಪ್ ಮೂಲಕ ಗಾಳಿ ಪಡೆದು ಸಾವನ್ನಪ್ಪಿದ್ದಾರೆ. ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ, ಕೂಡಲೇ ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿತ್ತು. ಅಷ್ಟೊತ್ತಿಗಾಗಲೇ ಟೆಕ್ಕಿ ಮೃತಪಟ್ಟಿದ್ದರು. ಬಳಿಕ ಕುಟುಂಬಕ್ಕೆ ಪೊಲೀಸರು ಮಾಹಿತಿ ನೀಡಿದ್ದರು.
ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ