ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್​ ಅತ್ತೆ ಮನೆಯಲ್ಲಿ ಕಳ್ಳತನ

ಪ್ರತ್ಯೇಕ ಎರಡು ಪ್ರಕರಣ: ಬೆಂಗಳೂರಿನ ಚಂದ್ರಾಲೇಔಟ್​ನಲ್ಲಿರುವ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್​ ಅತ್ತೆ ಕಸ್ತೂರಿ ಶೆಟ್ಟಿ ಅವರ ಮನೆಯಲ್ಲಿ ಕಳ್ಳತನವಾಗಿದೆ. ಕಲಬುರಗಿ ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್​ ಅತ್ತೆ ಮನೆಯಲ್ಲಿ ಕಳ್ಳತನ
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 10, 2024 | 12:10 PM

ಬೆಂಗಳೂರು, ಜನವರಿ 10: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ (Gurukiran)​ ಅತ್ತೆ ಕಸ್ತೂರಿ ಶೆಟ್ಟಿ ಅವರ ಮನೆಯಲ್ಲಿದ್ದ 2.5 ಲಕ್ಷ ಕಳ್ಳತನವಾಗಿದೆ (Theft). ಕಸ್ತೂರಿ ಶೆಟ್ಟಿ ಅವರು 2023ರ ಡಿಸೆಂಬರ್​​ 31ರ ಮಧ್ಯಾಹ್ನ, ರೂಮ್‌ ಬೀರುವಿನಲ್ಲಿ 2.05 ಲಕ್ಷ ಹಣ ಇಟ್ಟಿದ್ದರು. ಆದರೆ ಈಗ ಆ ಹಣ ಕಾಣೆಯಾಗಿದೆ. ಮನೆ ಕೆಲಸದಾಕೆ ಮೇಲೆ ಅನುಮಾನಗೊಂಡು ಕಸ್ತೂರಿ ಶೆಟ್ಟಿ ಅವರು ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮನೆ ಕೆಲಸದಾಕೆ ರತ್ನಮ್ಮ ಅವರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ರತ್ನಮ್ಮ ಕಳೆದ ಆರು ತಿಂಗಳಿನಿಂದ ಕಸ್ತೂರಿ ಶೆಟ್ಟಿ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್​

ಕಲಬುರಗಿ: ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಪುರಾವ್ ಸಾವಳಂಕೆ, ನಾಮದೇವ್ ಪವಾರ್ ಬಂಧಿತ ಆರೋಪಿಗಳು. ಬಂಧಿತರಿಂದ 3.68 ಲಕ್ಷದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದವು‌. ಸದ್ಯ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ