ಸ್ನೇಹಿತೆಗೆ 3 ಕೋಟಿ ರೂ. ಮೌಲ್ಯದ ಮನೆ ಕಟ್ಟಿಸಿಕೊಟ್ಟಿದ್ದ ಕಳ್ಳನಿಗಿತ್ತು ಪ್ರಖ್ಯಾತ ನಟಿ ಜೊತೆ ನಂಟು

ಮಡಿವಾಳ ಪೊಲೀಸರು 37 ವರ್ಷದ ಪಂಚಾಕ್ಷರಿ ಸ್ವಾಮಿ ಎಂಬ ಕಳ್ಳನನ್ನು ಬಂಧಿಸಿದ್ದಾರೆ. ಈತನು ಕಳ್ಳತನದಿಂದ ಗಳಿಸಿದ ಹಣದಿಂದ ತನ್ನ ಸ್ನೇಹಿತೆಗೆ 3 ಕೋಟಿ ರೂಪಾಯಿ ಮೌಲ್ಯದ ಮನೆಯನ್ನು ಕಟ್ಟಿಸಿಕೊಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇವನಿಗೆ ಓರ್ವ ಪ್ರಸಿದ್ಧ ನಟಿಯ ಜೊತೆ ಸಂಪರ್ಕ ಇತ್ತು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಮೇಲೆ 180ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಸ್ನೇಹಿತೆಗೆ 3 ಕೋಟಿ ರೂ. ಮೌಲ್ಯದ ಮನೆ ಕಟ್ಟಿಸಿಕೊಟ್ಟಿದ್ದ ಕಳ್ಳನಿಗಿತ್ತು ಪ್ರಖ್ಯಾತ ನಟಿ ಜೊತೆ ನಂಟು
ಆರೋಪಿ ಪಂಚಾಕ್ಷರಿ ಸ್ವಾಮಿ
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on: Feb 04, 2025 | 11:58 AM

ಬೆಂಗಳೂರು, ಫೆಬ್ರವರಿ 04: ಕದ್ದ ಹಣದಿಂದ ಸ್ನೇಹಿತೆಗೆ 3 ಕೋಟಿ ರೂ. ಮೌಲ್ಯದ ಮನೆ ಕಟ್ಟಿಸಿಕೊಟ್ಟಿದ್ದ ಆರೋಪಿಯನ್ನು ಮಡಿವಾಳ ಠಾಣೆ ಪೊಲೀಸರು (Madiwala Police) ಬಂಧಿಸಿದ್ದಾರೆ. ಅಲ್ಲದೇ, ಆರೋಪಿಗೆ ಪ್ರಖ್ಯಾತ ನಟಿಯ ಜೊತೆಗೂ ನಂಟು ಹೊಂದಿದ್ದನು ಎಂದು ತಿಳಿದುಬಂದಿದೆ. ಸೊಲ್ಲಾಪುರ ಮೂಲದ ಪಂಚಾಕ್ಷರಿ ಸ್ವಾಮಿ (37) ಬಂಧಿತ ಆರೋಪಿ. ಆರೋಪಿ ಪಂಚಾಕ್ಷರಿ ಸ್ವಾಮಿಗೆ ಮದುವೆಯಾಗಿದ್ದರೂ. ಹುಡುಗಿಯರ ಶೋಕಿ ಮಾತ್ರ ಕಡಿಮೆಯಾಗಿರಲಿಲ್ಲ.

ಆರೋಪಿ ಪಂಚಾಕ್ಷರಿ ಸ್ವಾಮಿ ತಂದೆ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಪಂಚಾಕ್ಷರಿ ಸ್ವಾಮಿ ತಂದೆ ಸಾವಿನ ಬಳಿಕ ರೈಲ್ವೆ ಇಲಾಖೆ ಕೆಲಸ ತಾಯಿಗೆ ಸಿಕ್ಕಿತ್ತು. ಆರೋಪಿ ಪಂಚಾಕ್ಷರಿ ಸ್ವಾಮಿಗೆ ಮದುವೆಯಾಗಿ ಮಗು ಇದೆ. ಈತ 400 ಸ್ಕ್ವೇರ್ ಫೀಟ್ ಮನೆಯಲ್ಲಿ ವಾಸವಾಗಿದ್ದಾನೆ. ಮನೆ ಕೂಡ ಆರೋಪಿ ಪಂಚಾಕ್ಷರಿ ಸ್ವಾಮಿಯ ತಾಯಿಯ ಹೆಸರಿನಲ್ಲಿದೆ. ಈ ಮನೆ ಮೇಲೆ ಸಾಲ ಇದ್ದು, ಸಾಲ ಕಟ್ಟದ ಹಿನ್ನೆಲೆಯಲ್ಲಿ ಬ್ಯಾಂಕ್​ನಿಂದ ನೋಟಿಸ್ ಬಂದಿದೆ. ವಾಸದ ಮನೆ ಸದ್ಯ ಹರಾಜಿಗೆ ಬಂದಿದೆ.

ಪ್ರಖ್ಯಾತ ನಟಿಗಾಗಿ ಕೋಟಿ ಕೋಟಿ ಖರ್ಚು

ಪಂಚಾಕ್ಷರಿ ಸ್ವಾಮಿ 2003ರಲ್ಲಿ ಅಪ್ರಾಪ್ತನಿದ್ದಾಗಲೇ ಕಳ್ಳತನಕ್ಕೆ ಇಳಿದಿದ್ದಾನೆ. ಆರೋಪಿ ಪಂಚಾಕ್ಷರಿ ಸ್ವಾಮಿ 2009 ರಿಂದ ಪ್ರೊಫೆಷನಲ್ ಆಗಿ ಕಳ್ಳನಾಗಿದ್ದಾನೆ. ಆರೋಪಿ ಪಂಚಾಕ್ಷರಿ ಸ್ವಾಮಿ ಕಳ್ಳತನ ಮಾಡಿ ಕೋಟಿ ಕೋಟಿ ಹಣ ಗಳಿಸಿದ್ದನು. 2014-15 ರಲ್ಲಿ ಪ್ರಖ್ಯಾತ ನಟಿ ಜೊತೆಗೆ ಸಂಪರ್ಕದಲ್ಲಿದ್ದೆ ಎಂಬುವುದಾಗಿ ಹೇಳಿಕೊಂಡಿದ್ದಾನೆ. ನಟಿಗಾಗಿ ಕೋಟಿ ಕೋಟಿ ಖರ್ಚು ಮಾಡಿದ್ದಾನೆ. 2016 ರಲ್ಲಿ ಕೊಲ್ಕತ್ತದಲ್ಲಿ ಸ್ನೇಹಿತೆಗಾಗಿ 3 ಕೋಟಿ ರೂ. ಖರ್ಚು ಮಾಡಿ ಮನೆ ಕಟ್ಟಿಸಿಕೊಟ್ಟಿದ್ದಾನೆ. ಅಲ್ಲದೇ, ಆಕೆಯ ಹುಟ್ಟಿದ ಹಬ್ಬಕ್ಕೆ 22 ಲಕ್ಷ ರೂ. ಮೌಲ್ಯದ ಅಕ್ವೇರಿಯಂ ಗಿಫ್ಟ್ ಕೊಟ್ಟಿದ್ದಾನೆ. ಬಳಿಕ, 2016ರಲ್ಲಿ ಗುಜರಾತ್ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದರು.

ಜೈಲಿಂದ ಬಂದರೂ ಕಳ್ಳತನ ಬಿಡದ ಆರೋಪಿ

6 ವರ್ಷ ಗುಜರಾತ್ ಸಬರಮತಿ ಜೈಲಿನಲ್ಲಿದ್ದ ಪಂಚಾಕ್ಷರಿ ಸ್ವಾಮಿ ಹೊರಬಂದು ಮತ್ತೆ ಕಳ್ಳತನ ಮಾಡಲು ಆರಂಭಿಸಿದ್ದಾನೆ. ಆಗ, ಮಹಾರಾಷ್ಟ್ರ ಪೊಲೀಸರು ಆರೋಪಿ ಪಂಚಾಕ್ಷರಿ ಸ್ವಾಮಿಯನ್ನು ಬಂಧಿಸಿದ್ದಾರೆ. ಜೈಲಿನಿಂದ ಬಿಡುಗಡೆಯಾಗಿ 2024 ರಲ್ಲಿ ಮತ್ತೆ ಬೆಂಗಳೂರಿನಲ್ಲಿ ಕಳ್ಳತನ ಮಾಡಲು ಶುರುಮಾಡಿದ್ದಾನೆ.

ಇದನ್ನೂ ಓದಿ: ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ವಂಚನೆ: ಒಂದನ್ನು ಒತ್ತಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

ಮಡಿವಾಳದಲ್ಲಿ ಕಳ್ಳತನ

ಆರೋಪಿ ಪಂಚಾಕ್ಷರಿ ಸ್ವಾಮಿ ಜನವರಿ‌ 9 ರಂದು ಮಡಿವಾಳದಲ್ಲಿ ಮನೆಕಳ್ಳತನ ಮಾಡಿದ್ದನು. ಕಳ್ಳತನ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಈತನ ಮೇಲೆ 180 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ. ಪಂಚಾಕ್ಷರಿ ಸ್ವಾಮಿ ಬಳಿ ಚಿನ್ನಾಭರಣ ಕರಗಿಸಲು ಬಳಸುವ ಫೈರ್ ಗನ್ ಪತ್ತೆಯಾಗಿದೆ. ಚಿನ್ನದ ಒಡವೆ ಇಟ್ಟು ಕರಗಿಸುವ ಮೂಸ್ ಪತ್ತೆಯಾಗಿದೆ. ಇವುಗಳನ್ನು ಬಳಸಿ ಆರೋಪಿ ಪಂಚಾಕ್ಷರಿ ಸ್ವಾಮಿ ಬಳಸಿ ಚಿನ್ನ ಕರಗಿಸುತ್ತಿದ್ದನು.

ಆರೋಪಿ ಪಂಚಾಕ್ಷರಿ ಸ್ವಾಮಿ ಮನೆ ಕಳ್ಳತನದ ಬಳಿಕ ರಸ್ತೆಯಲ್ಲಿ ಬಟ್ಟೆ ಬದಲಿಸುತ್ತಿದ್ದನು. ಅಲ್ಲದೇ, ಪಂಚಾಕ್ಷರಿ ಸ್ವಾಮಿ ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪಡೆದಿದ್ದಾನೆ ಎಂದು ಪೊಲೀಸ್​ ವಿಚಾರಣೆಯಲ್ಲಿ ತಿಳಿದುಬಂದಿದೆ. ಮಡಿವಾಳ ಪೊಲೀಸರು ಆರೋಪಿ ಪಂಚಾಕ್ಷರಿ ಸ್ವಾಮಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಕುಟುಂಬದ ಮನೆಯನ್ನು ಸೀಜ್ ಮಾಡಿರುವ ಎಎಮ್​ಒಎಮ್ ಫೈನಾನ್ಸ್ ಸಂಸ್ಥೆ
ಕುಟುಂಬದ ಮನೆಯನ್ನು ಸೀಜ್ ಮಾಡಿರುವ ಎಎಮ್​ಒಎಮ್ ಫೈನಾನ್ಸ್ ಸಂಸ್ಥೆ
ಸಿದ್ದರಾಮಯ್ಯ ರಾಜೀನಾಮೆ: ಕೋರ್ಟ್​ ತೀರ್ಪು ಮೊದಲೇ ಸ್ನೇಹಮಯಿ ಕೃಷ್ಣ ಭವಿಷ್ಯ
ಸಿದ್ದರಾಮಯ್ಯ ರಾಜೀನಾಮೆ: ಕೋರ್ಟ್​ ತೀರ್ಪು ಮೊದಲೇ ಸ್ನೇಹಮಯಿ ಕೃಷ್ಣ ಭವಿಷ್ಯ