AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ತೃತೀಯ ಲಿಂಗಿ ಕೊಲೆ ಪ್ರಕರಣ: ಜೊತೆಗಿದ್ದ ಮಹಿಳೆ ಕೊಲೆ ಮಾಡಲು ಕಾರಣ ಇಲ್ಲಿದೆ

ಮೇ 03 ರಂದು ಬೆಂಗಳೂರಿನ ಮುರುಗೇಶ್ ಪಾಳ್ಯದ ಜನರಿಗೆ ತಮ್ಮ ಏರಿಯಾದ ಮನೆಯೊಂದರ ಒಳಗಿನಿಂದ ಕೆಟ್ಟ ವಾಸನೆ ಬರಲು ಆರಂಭಿಸಿದೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದರೇ ತೃತೀಯ ಲಿಂಗಿಯ ಶವ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಅನುಮಾನಸ್ಪದ ಸಾವಿನ ಬೆನ್ನತ್ತಿದ್ದ ಖಾಕಿ ಪಡೆ ಪ್ರಕರಣವನ್ನು ಭೇದಿಸಿದೆ.

ಬೆಂಗಳೂರು ತೃತೀಯ ಲಿಂಗಿ ಕೊಲೆ ಪ್ರಕರಣ: ಜೊತೆಗಿದ್ದ ಮಹಿಳೆ ಕೊಲೆ ಮಾಡಲು ಕಾರಣ ಇಲ್ಲಿದೆ
ಆರೋಪಿ ಪ್ರೇಮಾ, ಮೃತ ತೃತೀಯ ಲಿಂಗಿ ಮಂಜುನಾಯ್ಕ್​​​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 11, 2024 | 8:09 AM

Share

ಬೆಂಗಳೂರು, ಮೇ 11: ತೃತೀಯ ಲಿಂಗಿಯನ್ನು ಕೊಲೆ (Transgender Murder) ಮಾಡಿ ಪರಾರಿಯಾಗಿದ್ದ ಮಹಿಳೆಯಳನ್ನು ಜೀವನ್ ಭೀಮಾ ನಗರ ಪೊಲೀಸರು (Police) ಬಂಧಿಸಿದ್ದಾರೆ. ಮಂಜುನಾಯ್ಕ್​​ (47 ವರ್ಷ) ಮೃತ ತೃತೀಯ ಲಿಂಗಿ. ಪ್ರೇಮಾ ಕೊಲೆ ಆರೋಪಿ. ಸದ್ಯ ಆರೋಪಿ ಪ್ರೇಮಾಳನ್ನು ಬಂಧಿಸಿ ಪೊಲೀಸರು ಜೈಲಿಗೆ ಕಳಿಸಿದ್ದಾರೆ.

ಪ್ರೇಮಾ ಮೂಲತಃ ಬೆಂಗಳೂರಿನವಳಲ್ಲ. ಪತಿ ತೀರಿಕೊಂಡ ಬಳಿಕ ಪ್ರೇಮಾ ಒಂಟಿಯಾಗಿ ವಾಸವಾಗಿದ್ದಳು. ಇದೇ ವೇಳೆ ಪ್ರೇಮಾಗೆ ತೃತೀಯ ಲಿಂಗಿ ಮಂಜಿಭಾಯಿ ಅಲಿಯಾಸ್​ ಮಂಜುನಾಯ್ಕ್ ಪರಿಚಯವಾಗಿತ್ತು. ಬಳಿಕ ಇಬ್ಬರು ಬೆಂಗಳೂರಿಗೆ ಬಂದು ಮುರುಗೇಶ್ ಪಾಳ್ಯದಲ್ಲಿ ಒಂದೇ ಮನೆಯಲ್ಲಿ ವಾಸವಿದ್ದು, ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಇಬ್ಬರ ಮಧ್ಯೆ ಜಗಳ ಶುರುವಾಗಿತ್ತು. ನೀನು ಬೇರೆಯವರ ಜೊತೆ ಸಂಬಂಧ ಇಟ್ಟುಕೊಂಡಿದ್ದೀಯಾ ಅಂತ ಮಂಜುನಾಯ್ಕ್ ಪ್ರೇಮಾ ಜೊತೆ ಜಗಳವಾಡುತ್ತಿದ್ದರು. ಹೀಗೆ ಕಳೆದ ತಿಂಗಳು ಏಪ್ರಿಲ್​ 26 ರಂದು ಇಬ್ಬರ ಮಧ್ಯೆ ಜಗಳವಾಗಿತ್ತು. ಈ ವೇಳೆ ಮಂಜುನಾಯ್ಕ್ ಪ್ರೇಮಾಳನ್ನ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲು ಮುಂದಾಗಿದ್ದರು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಪ್ರೇಮಾ ಮನೆಯಲಿದ್ದ ಟವಲ್ ತೆಗೆದುಕೊಂಡು ಮಂಜುನಾಯ್ಕ್ ಕುತ್ತಿಗೆಗೆ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದಳು.

ಇದನ್ನೂ ಓದಿ: ಕೊಲೆ ಮಾಡಲು ಒಂದು ತಿಂಗಳು ವೆಬ್ ಸೀರೀಸ್ ನೋಡಿದ ಆರೋಪಿಗಳು

ಶವ ಇದ್ದ ಮನೆಯಿಂದ ಕೊಳೆತ ವಾಸನೆ ಬರುತ್ತಿದ್ದಂತೆ ಅಕ್ಕ-ಪಕ್ಕದ ಜನರು ಮೇ 3 ರಂದು ಮನೆ ಬಾಗಿಲು ತೆರೆದಾಗ ಕೊಳೆತ ಸ್ಥಿತಿಯಲ್ಲಿ ಮಂಜುನಾಯ್ಕ್ ಮೃತದೇಹ ಪತ್ತೆಯಾಗಿದೆ. ವಿಚಾರ ತಿಳಿದು ಕೂಡಲೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜೀವನ್ ಭೀಮಾ ನಗರ ಪೊಲೀಸರು, ಅನುಮಾನಸ್ಪದ ಸಾವು ಅಂತ ಪ್ರಕರಣ ದಾಖಲಿಸಿಕೊಂಡರು. ಬಳಿಕ ಮರಣೋತ್ತರ ಪರೀಕ್ಷೆ ವೇಳೆ ಮಂಜುನಾಯ್ಕ್​​ರನ್ನು ಕೊಲೆ ಮಾಡಲಾಗಿದೆ ಅಂತ ತಿಳಿಯಿತು. ಈ ವೇಳೆ ಆರೋಪಿತಳ ಮೇಲೆ ಅನುಮಾನ ಬಂದಿದ್ದು ವಿಚಾರಣೆ ನಡೆಸಿದಾಗ ಅಸಲಿ ವಿಚಾರ ಬಾಯ್ಬಿಟ್ಟಿದ್ದಾಳೆ.

ಸದ್ಯ ಮಹಿಳೆಯನ್ನ ಬಂಧಿಸಿರುವ ಪೊಲೀಸರು ಆರೋಪಿಯನ್ನು ಜೈಲಿಗಟ್ಟಿದ್ದಾರೆ. ಆದರೆ ತನ್ನ ಜೊತೆ 20 ವರ್ಷ ಜೀವನ‌ ಕಳೆದಿದ್ದ ಪ್ರೇಮಾ ಮೇಲೆ, ತೃತೀಯ ಲಿಂಗಿ ಮಂಜುನಾಯ್ಕ್ ಅನುಮಾನ ಪಟ್ಟಿದ್ದ ದುರಂತವಾದರೇ, ತನ್ನ ಪ್ರಾಣ ಉಳಿಸಿಕೊಳ್ಳಲು ಪ್ರೇಮಾ ಕೊಲೆಗಾತಿಯಾಗಿದ್ದು ವಿಪರ್ಯಾವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ