AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಹಿಳೆಗೆ ಕಿರುಕುಳ ಆರೋಪ; ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ

ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಮೈಲಾರಪ್ಪ ಬಂಧಿಸಿದ್ದಾರೆ. ವಿರುದ್ಧ ಮಹಿಳೆಯ ಆಸ್ತಿವಿವಾದದ ವಿಚಾರದಲ್ಲಿ ಕಾನೂನು ಸಹಾಯದ ನೆಪದಲ್ಲಿ ಮಹಿಳೆಯನ್ನು ನಿಂದಿಸಿ, ಬಾಗಿಲು ತೆರೆಯುವಂತೆ ಬಲವಂತಪಡಿಸಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಮಹಿಳೆಯ ದೂರಿನ ಆಧಾರದಲ್ಲಿ ಬಸವೇಶ್ವರನಗರ ಪೊಲೀಸ್ ಠಾಣೆ ಕ್ರಮ ಕೈಗೊಂಡಿದೆ.

ಬೆಂಗಳೂರು: ಮಹಿಳೆಗೆ ಕಿರುಕುಳ ಆರೋಪ;  ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ
ಮಹಿಳೆಗೆ ಕಿರುಕುಳ ಆರೋಪ, ಪ್ರೊ.ಬಿ.ಸಿ.ಮೈಲಾರಪ್ಪ ಬಂಧನ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 31, 2025 | 11:56 AM

Share

ಬೆಂಗಳೂರು, ಅಕ್ಟೋಬರ್ 31: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ (B C Mylarappa Arrest) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ ದೂರು ಆಧಾರದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಸಂತ್ರಸ್ತೆಯ ವಿರುದ್ಧ ದಾಖಲಾಗಿದ್ದ ಕೇಸ್​ನಲ್ಲಿ ಆಕೆಯ ಪರ ವಾದಿಸಿದ್ದ ಮೈಲಾರಪ್ಪ

ಸಂತ್ರಸ್ತೆ 2022ನೇ ಸಾಲಿನ ನವೆಂಬರ್ ತಿಂಗಳಲ್ಲಿ ಅಂದಿನ ಬೆಂಗಳೂರು ವಿ.ವಿ ನಿರ್ದೇಶಕರಾದ ಪ್ರೊಫೇಸರ್ ಶ್ರೀ.ಬಿ.ಸಿ ಮೈಲಾರಪ್ಪ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಹರಿಜನ ಸೇವಕ ಸಂಘದಲ್ಲಿ ಲಸಕ್ಕೆ ಸೇರಿದ್ದರು. ಆಗಿನಿಂದ 2 ವರ್ಷ ಅಲ್ಲಿಯೇ ಕೆಲಸ ಮಾಡಿದ್ದರು. ಈ ವೇಳೆ ಆಕೆಯ ಪತಿಯೂ ಅಸಹಜವಾಗಿ ಸಾವನ್ನಪ್ಪಿದ್ದರು. ಈ ವೇಳೆ ಪತಿಯ ಸಾವಿಗೆ ಆಕೆಯೇ ಕಾರಣವೆಂದು ಆಕೆಯ ಅತ್ತೆ, ಮಾವ ದೂರನ್ನೂ ದಾಖಲಿಸಿದ್ದರು. ಅಷ್ಟೇ ಅಲ್ಲದೆ ಸಂತ್ರಸ್ತೆಯ ಹೆಸರಿನಲ್ಲಿದ್ದ ಆಸ್ತಿಯನ್ನು ತಮಗೆ ಬರೆದುಕೊಡುವಂತೆ ಪೀಡಿಸಿದ್ದರು. ಈ ಸಮಯದಲ್ಲಿ ಬಿ.ಸಿ.ಮೈಲಾರಪ್ಪಆಕೆಯ ಗಂಡನ ಸಾವಿನ ಬಗ್ಗೆ ಮಹಾಲಕ್ಷ್ಮೀ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಮತ್ತು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆಕೆಯ ಪರ ವಾದಿಸಿ, ಸಾಕಷ್ಟು ಓಡಾಟ ನಡೆಸಿದ್ದರು.

ಸಾರ್ವಜನಿಕೆರುದೇ ಮಹಿಳೆಯ ಮೇಲೆ ಹಲ್ಲೆ

ಸಂತ್ರಸ್ತೆಯ ತಂದೆಯ ಆಸ್ತಿಯ ಭಾಗದ ವಿಷಯವಾಗಿಯೂ ಹಲವು ಮನಸ್ತಾಪಗಳುಂಟಾಗಿತ್ತು. ತಂದೆ ಆಸ್ತಿಯ ಭಾಗಾಂಶಕ್ಕಾಗಿ  ಸಂತ್ರಸ್ತೆ ಅಣ್ಣ , ವಕೀಲರಾದ ರಘು ಎನ್ನುವವರ ಸಹಾಯದಿಂದ ನ್ಯಾಯಾಲಯದಲ್ಲಿ ಕೇಸು ದಾಖಲಿಸಿದ್ದರು. ಈ ವಿಷಯವಾಗಿ ವಕೀಲರು ಆಗಾಗ ಸಂತ್ರಸ್ತೆಯನ್ನು ಭೇಟಿ ಮಾಡುವ ಸುದ್ದಿ ತಿಳಿದ ಮೈಲಾರಪ್ಪ ಒಂದು ಹೋಟೆಲ್ ಬಳಿ ಮಾತನಾಡಬೇಕೆಂದು ಸಂತ್ರಸ್ತೆಯನ್ನು ಕರೆಸಿಕೊಂಡಿದ್ದರು. ಭೇಟಿ ಮಾಡಲು ಬಂದಾಗ ಆಕೆಗೆ ಒಂದಿಷ್ಟು ದಾಖಲಾತಿಗಳನ್ನು ನೀಡಿ, ಸಹಿ ಹಾಕುವಂತೆ ಹೇಳಿದ್ದರು. ದಾಖಲಾತಿ ಪರಿಶೀಲಿಸಿದಾಗ, ‘ನನ್ನ ಜೀವನದಲ್ಲಿ ಏನೇ ತೊಂದರೆಯಾದರೂ ಅದಕ್ಕೆ ವಕೀಲ ರಘು ಕಾರಣ’ ಎಂದು ಬರೆದಿದ್ದನ್ನು ನೋಡಿ, ಸಹಿ ಹಾಕಲು ಸಂತ್ರಸ್ತೆ ನಿರಾಕರಿಸಿದ್ದರು. ಹೀಗೆ ಬರೆದು ಸಹಿ ಹಾಕಿಸಿಕೊಳ್ಳಲು ನೀವು ಯಾರೆಂದು ಆಕೆ ಪ್ರಶ್ನಿಸಿದಾಗ ಕೋಪಗೊಂಡ ಮೈಲಾರಪ್ಪ, ನಡುರಸ್ತೆಯಲ್ಲಿಯೇ ನಿಂದಿಸಿ, ಆಕೆಯ ಜುಟ್ಟನ್ನು ಹಿಡಿದು ಹಲ್ಲೆ ನಡೆಸಿದ್ದರು.

ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ

ಇಷ್ಟಕ್ಕೇ ಸುಮ್ಮನಾಗದೇ ಮಹಿಳೆಯ ಮನೆಯ ಬಳಿ ಬಂದು ಬಾಗಿಲು ತೆರೆಯುವಂತೆ ಒತ್ತಾಯಿಸಿದ್ದರು. ಮಹಿಳೆಗೆ ಬೆದರಿಕೆ ಹಾಕಿದ್ದ ಆರೋಪದಲ್ಲಿಯೂ ಸಹ ಕಾಮಾಕ್ಷಿಪಾಳ್ಯ ದಲ್ಲಿ ಕೇಸ್ ದಾಖಲಾಗಿತ್ತು. ಆದರೂ ಆಕೆಗೆ ಕರೆ ಮಾಡಿ ಸಹಕರಿಸುವಂತೆ ಬಲವಂತಪಡಿಸಿದ್ದಾಗಿಯೂ ಮಹಿಳೆ ಹೇಳಿಕೊಂಡಿದ್ದಾರೆ. ಮಹಿಳೆಯ ದೂರಿನ ಆಧಾರ ಮೇಲೆ ಬಸವೇಶ್ವರನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಪ್ರೊ.ಬಿ.ಸಿ.ಮೈಲಾರಪ್ಪ ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:55 am, Fri, 31 October 25

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ