ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್

ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ವಿದ್ಯಾ ಲೋಕಾಯುಕ್ತ ಬಲೆಗೆ ಬಿದ್ದ ಆಫೀಸರ್​.

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್
ಲೋಕಾಯುಕ್ತ ಕಚೇರಿImage Credit source: prajavani.net
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 01, 2023 | 4:31 PM

ಬೆಂಗಳೂರು: ಲಂಚ (bribe) ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ವಿದ್ಯಾ ಲೋಕಾಯುಕ್ತ ಬಲೆಗೆ ಬಿದ್ದ ಆಫೀಸರ್​. ಬೆಂಗಳೂರಿನ ಕಸ್ತೂರಿನಗರ ಸಬ್​ಡಿವಿಷನ್​ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಘಟನೆ ನಡೆದಿದೆ. ವಿದ್ಯುತ್ ಕಂಬ ತೆರವುಗೊಳಿಸಲು ಅರವಿಂದ ಎನ್ನುವವರಿಂದ 25 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇಂದು ಮುಂಗಡವಾಗಿ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದಿದ್ದಾರೆ. ಸದ್ಯ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿರುವ ಲೋಕಾಯುಕ್ತ ಪೊಲೀಸರು ಬೆಸ್ಕಾಂ ಇಒ ವಿದ್ಯಾರನ್ನು ವಶಕ್ಕೆ ಪಡೆದಿದ್ದಾರೆ.

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ, ಆರೋಪಿ ಅರೆಸ್ಟ್

ಬೆಂಗಳೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನೈಜೀರಿಯಾ ಪ್ರಜೆ ನೋಕೊಚಾ. ಯುಕೆಯಲ್ಲಿ ಉದ್ಯೋಗ ಕೊಡಿಸುವುದಾಗಿ ದೊಡ್ಡಗುಬ್ಬಿ ಮೂಲದ ಮಹಿಳೆ ಬಳಿ 37 ಲಕ್ಷ ಹಣ ಪಡೆದು ವಂಚಿಸಿದ್ದ. ಮಹಿಳೆ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ ಲ್ಯಾಪ್​ಟಾಪ್​​​​​, 6 ಮೊಬೈಲ್​, ಸಿಮ್​​ಕಾರ್ಡ್, ಪಾಸ್​ಪೋರ್ಟ್ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಆರೋಪವೆಂದ ಅಜೀಂ ಪ್ರೇಮ್​ ಜಿ ವಿವಿ

ಎರಡು ಕುಟುಂಬಗಳ ನಡುವೆ ಗಲಾಟೆ: ವೇಳೆ ತೀವ್ರ ಗಾಯಗೊಂಡಿದ್ದ ವ್ಯಕ್ತಿ ಸಾವು

ಚಿತ್ರದುರ್ಗ: ಎರಡು ಕುಟುಂಬದ ಗಲಾಟೆ ವೇಳೆ ತೀವ್ರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಜೋಡಿಚಿಕ್ಕೇನಹಳ್ಳಿ ಗೊಲ್ಲರಹಟ್ಟಿ ನಿವಾಸಿ ಬೊಮ್ಮಲಿಂಗಪ್ಪ(30) ಮೃತ ವ್ಯಕ್ತಿ. ಪ್ರೇಮಿಗಳು ಊರು ಬಿಟ್ಟು ಹೋಗಿದ್ದಕ್ಕೆ 2 ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ಬಿಡಿಸಲು ಹೋಗಿದ್ದ ಬೊಮ್ಮಲಿಂಗಪ್ಪ ಮೇಲೆ ಹಲ್ಲೆ ಮಾಡಲಾಗಿತ್ತು. ತಲೆ ಹಾಗೂ ಎದೆ ಭಾಗಕ್ಕೆ ಹಲ್ಲೆ ಹಿನ್ನೆಲೆ ಬೊಮ್ಮಲಿಂಗಪ್ಪ ಮೃತಪಟ್ಟಿದ್ದಾರೆ.  ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru: ಪ್ರೀತಿಸಿ ಅವೈಡ್ ಮಾಡಿದ ಪ್ರಿಯತಮೆ; ಮನಸೋ ಇಚ್ಛೆ ಇರಿದು ಯುವತಿಯನ್ನು ಕೊಲೆ ಮಾಡಿದ ಪಾಗಲ್ ಪ್ರೇಮಿ!

ಜಾಗಟಕಲ್​ನಲ್ಲಿ ಶಾರ್ಟ್​ ಸರ್ಕ್ಯೂಟ್​​ನಿಂದ ಹೊತ್ತಿ ಉರಿದ ಹತ್ತಿ

ರಾಯಚೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಭಾರೀ ಅವಘಡ ಸಂಭವಿಸಿದ್ದು, ಕೂದಲೆಳೆಯ ಅಂತರದಲ್ಲಿ ದೊಡ್ಡ ದುರಂತ ತಪ್ಪಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಗಟಕಲ್ ಗ್ರಾಮದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಹತ್ತಿ ರಾಶಿಗೆ ಬೆಂಕಿ ಹೊತ್ತಿಕೊಂಡಿದೆ. ನಂತರ ನೋಡ ನೋಡುತ್ತಲೇ ಹತ್ತಿ ರಾಶಿ ಪಕ್ಕದ ಗುಡಿಸಲುಗಳಿಗೆ ಬೆಂಕಿ ವ್ಯಾಪಿಸಿದೆ. ಈ ವೇಳೆ ಗುಡಿಸಲಿನಲ್ಲಿದ್ದ ಒಂದು ಸಿಲಿಂಡರ್ ಕೂಡ ಬ್ಲಾಸ್ಟ್ ಆಗಿದೆ.

ಅಗ್ನಿ ಅವಘಡದಲ್ಲಿ ಅಪಾರ ಪ್ರಮಾಣದ ಹತ್ತಿ ಜೊತೆಗೆ ಐದಾರು ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಂದ್ರ ಮೂಲದ ರೈತರಿಗೆ ಸೇರಿದ ಗುಡಿಸಲು ಎನ್ನಲಾಗುತ್ತಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ದೇವದುರ್ಗ ಗ್ರಾಮೀಣ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:17 pm, Wed, 1 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್