ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ಬದುಕುವ ಆಸೆಪಟ್ಟಿದ್ದ ಬಾಗಪ್ಪ ಹರಿಜನ ಬರ್ಬರ ಹತ್ಯೆ!

ನಾನೂ ಕೂಡಾ ಸಾಮಾನ್ಯರಂತೆ ಬದುಕಬೇಕು ಎಂದುಕೊಂಡಿದ್ದೇನೆ. ಆದರೆ ತನಗೆ ಚಂದಪ್ಪನ ಸಬಂಧಿಗಳು ಬಿಡುತ್ತಿಲ್ಲ ಎಂದು ಭೀಮಾ ತೀರದ ಹಂತಕನಂತಲೇ ಗುರುತಿಸಿಕೊಂಡಿದ್ದ ಬಾಗಪ್ಪ ಹರಿಜನ ಹೇಳಿದ್ದ. ಅದರಂತೆ ಬಾಗಪ್ಪ ಹರಿಜನನನ್ನು ಬಿಡಲಿಲ್ಲ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬಾಗಪ್ಪನನ್ನ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ಇದರೊಂದಿಗೆ ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ ಹರಿದಿದೆ.

ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ಬದುಕುವ ಆಸೆಪಟ್ಟಿದ್ದ ಬಾಗಪ್ಪ ಹರಿಜನ ಬರ್ಬರ ಹತ್ಯೆ!
Bagappa Harijana
Edited By:

Updated on: Feb 11, 2025 | 11:10 PM

ವಿಜಯಪುರ, (ಫೆಬ್ರವರಿ 11): ಕೆಲ ದಿನಗಳಿಂದ ತಣ್ಣಗಿದ್ದ ಭೀಮಾತೀರದಲ್ಲಿ ಈಗ ರಕ್ತದೋಕುಳಿ ಹರಿದಿದೆ. ಭೀಮಾತೀರದ ಹಂತಕ ಬಾಗಪ್ಪ ಹರಿಜನನನ್ನು ದುಷ್ಕರ್ಮಿಗಳು ಬರ್ಬರ ಹತ್ಯೆವಾಗಿ ಹತ್ಯೆ ಮಾಡಿದ್ದಾರೆ. ಇಂದು (ಫೆಬ್ರವರಿ 11) ರಾತ್ರಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ಸಿಕ್ಕ ಸಿಕ್ಕಲಿ ಹೊಡೆದು ಬಾಗಪ್ಪನನ್ನ ಕೊಲೆ ಮಾಡಲಾಗಿದೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಸಲ ಹಂತಕರು ಬಾಗಪ್ಪನನ್ನು ಬಿಡಲಿಲ್ಲ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ಬಾಗಪ್ಪ ವಾಸ ಮಾಡುತ್ತಿದ್ದ.  ಇಂದು (ಫೆಬ್ರವರಿ 11) ರಾತ್ರಿ 8.50ರ ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಏಕಾಏಕಿ ಮಚ್ಚಿನಿಂದ ದಾಳಿ ಮಾಡಿದ್ದಾರೆ. ಸಿಕ್ಕ ಸಿಕ್ಕಲ್ಲಿ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಬಾಗಪ್ಪ ಹರಿಜನ ಭೀಕರ ಕೊಲೆಯಾಗಿದ್ದು, ಘಟನಾ ಸ್ಥಳಕ್ಕೆ ವಿಜಯಪುರ SP ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಬಾಗಪ್ಪ ಹರಿಜನ ಹಂತಕರ ಪತ್ತೆಗಾಗಿ ASP ರಾಮನಗೌಡ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಇನ್ನು ಈ ಬಾಗಪ್ಪ ಹರಿಜನ ಅನೇಕ ಪ್ರಕರಣದಲ್ಲಿ ಕೊಲೆ ಆರೋಪಿ ಆಗಿದ್ದ. ಬಳಿಕ ಜಾಮೀನ ಮೇಲೆ ಆಚೆ ಬರುತ್ತಿದ್ದ. ಕೊನೆ ಈ ಕ್ರೈಂ ಚಟುವಟಿಕೆಗಳಿಂದ ಆಚೆ ಬಂದು ಜೀವನ ಮಾಡಬೇಕೆಂದು ಬಾಗಪ್ಪ ಹೇಳಿಕೊಂಡಿದ್ದ.

ನಾನೂ ಕೂಡಾ ಸಾಮಾನ್ಯರಂತೆ ಬದುಕಬೇಕು ಎಂದುಕೊಂಡಿದ್ದೇನೆ. ಆದರೆ ತನಗೆ ಚಂದಪ್ಪನ ಸಬಂಧಿಗಳು ಬಿಡುತ್ತಿಲ್ಲ ಎಂದು ಭೀಮಾ ತೀರದ ಹಂತಕನಂತಲೇ ಗುರುತಿಸಿಕೊಂಡಿರುವ ಬಾಗಪ್ಪ ಹರಿಜನ ಇತ್ತೀಚೆಗೆ ಹೇಳಿಕೊಂಡಿದ್ದ. ಅಲ್ಲದೇ ಸಾಮಾನ್ಯರಂತೆ ಬದುಕುವ ಆಸೆ ವ್ಯಕ್ತಪಡಿಸಿದ್ದ. ಆದ್ರೆ, ಇದಕ್ಕೆ ದುಷ್ಕರ್ಮಿಗಳು ಅವಕಾಶ ಮಾಡಿಕೊಟ್ಟಿಲ್ಲ.

ಈ ಹಿಂದೆ ಗುಂಡೇಟಿನಿಂದ ಗಾಯಗೊಂಡು ಬದುಕುಳಿದಿದ್ದ ಭೀಮಾ ತೀರದ ಹಂತಕನ ಸಹವರ್ತಿ ಭಾಗಪ್ಪ ಹರಿಜನ, ನಾನು ಸಮಾಜಮುಖಿಯಾಗುತ್ತಿದ್ದೇನೆ. ಆದರೆ ನನ್ನ ಸಹನೆಯನ್ನು ಪರೀಕ್ಷೆ ಮಾಡಬಾರದು. ನನ್ನ ವಿಷಯಕ್ಕೆ ಬಂದಲ್ಲಿ 24 ತಾಸಿನಲ್ಲೇ ಬಂದೂಕು ಹಿಡಿಯುವೆ ಎಂದು ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದ. ಆದ್ರೆ, ಇದೀಗ ವಿರೋಧಿಗಳೇ ಬಾಗಪ್ಪನನ್ನು ಇಲ್ಲವಾಗಿಸಿದ್ದಾರೆ.

Published On - 10:57 pm, Tue, 11 February 25

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us