ಚಿಕ್ಕಬಳ್ಳಾಪುರ​: ಮಲಗಿದ್ದ ಪತ್ನಿ ಮಕ್ಕಳಿಗೆ ಬೆಂಕಿ ಇಟ್ಟು ಕೊಂದು, ತಾನು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ಮಲಗಿದ್ದ ಪತ್ನಿಯನ್ನ ಹೊಡೆದು ಕೊಂದು ಬಳಿಕ ಮಲಗಿದ್ದ ತನ್ನದೆ ಇಬ್ಬರು ಹೆಣ್ಣು ಮಕ್ಕಳ ಮೇಲೆ ಬೆಂಕಿ ಹಾಕಿ ಸುಟ್ಟು ಹಾಕಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ​: ಮಲಗಿದ್ದ ಪತ್ನಿ ಮಕ್ಕಳಿಗೆ ಬೆಂಕಿ ಇಟ್ಟು ಕೊಂದು, ತಾನು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಚಿಕ್ಕಬಳ್ಳಾಪುರದಲ್ಲಿ ಪತ್ನಿ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 22, 2023 | 8:42 PM

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ಇಂದು(ಫೆ.22) ಬೆಳಿಗ್ಗೆ ಹೃದಯ ವಿದ್ರಾವಕ ಘಟನೆಯೊಂದು ನಡೆದುಹೋಗಿದೆ. ಇದೆ ಗ್ರಾಮದ ನೇತ್ರಾವತಿ ಹಾಗೂ ಸೊಣ್ಣಪ್ಪ ದಂಪತಿಯ ಮನೆಯಲ್ಲಿ ಬೆಳಕು ಹರಿಯುವುದಕ್ಕೂ ಮುನ್ನ ಬೆಂಕಿಯ ಕೆನ್ನಾಲಿಗೆ ಉರಿಯುತ್ತಿತ್ತು. ಇದನ್ನು ಗಮನಿಸಿದ ಸ್ಥಳಿಯರು ಹತ್ತಿರ ಹೋಗಿ ನೋಡುತ್ತಿದ್ದಂತೆ ನೇತ್ರಾವತಿಯ ನೆತ್ತರು ಹರಿಯುತ್ತಿತ್ತು. ಪಕ್ಕದಲ್ಲೆ ಆಕೆಯ ಗಂಡ ಸೊಣ್ಣಪ್ಪ ನರಳಾಡುತ್ತಿದ್ದ ರೂಮ್ ನ ಬೆಡ್ ಮೇಲೆ ದಂಪತಿಯ ದೊಡ್ಡ ಮಗಳು 11 ವರ್ಷದ ಬಾಲಕಿ ವರ್ಷಾ ಬೆಂಕಿಗೆ ಬಲಿಯಾಗಿದ್ದಳು. ಅವಳ ಪಕ್ಕದಲ್ಲೆ ಆಕೆಯ ತಂಗಿ 9 ವರ್ಷದ ಸ್ನೇಹ ಸಹ ಹೆಣವಾಗಿದ್ದಳು. ಅಷ್ಟರಲ್ಲೆ ಸ್ಥಳಿಯರು ಆಗಮಿಸಿ ನೀರಿನಿಂದ ಬೆಂಕಿ ನಂದಿಸಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇನ್ನು ತಕ್ಷಣ ಸ್ಥಳಕ್ಕೆ ಬಂದ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ್​ ಹಾಗೂ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಸೊಣ್ಣಪ್ಪನೆ ಪತ್ನಿಯನ್ನು ಹೊಡೆದು ಕೊಂದ ನಂತರ ಮಲಗಿದ್ದ ಮಕ್ಕಳ ಮೇಲೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನು ಸೊಣ್ಣಪ್ಪನೂ ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಾಯಾಳುವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಇತ್ತ ಮಗಳು ಹಾಗೂ ಮೊಮ್ಮಕ್ಕಳ ಸಾವಿನ ಸುದ್ದಿ ಅರಿತು ಸ್ಥಳಕ್ಕೆ ಬಂದ ನೇತ್ರಾವತಿಯ ತಂದೆ, ಗಂಡ ಹೆಂಡತಿ ಚನ್ನಾಗಿಯೆ ಇದ್ದರು. ಸೊಣ್ಣಪ್ಪನ ಅಣ್ಣ ತಮ್ಮಂದಿರ ಮಧ್ಯೆ ಜಮೀನು ವಿವಾದ ಇತ್ತು, ಗಂಡನ ಆಸ್ತಿಗಾಗಿ ನೇತ್ರಾವತಿ ಕೇಸ್ ಹಾಕಿದ್ದಳು. ಸೊಣ್ಣಪ್ಪ ಹಾಗೂ ಆತನ ಸಹೋದರರು ಸೇರಿಕೊಂಡು ನನ್ನ ಮಗಳು ಹಾಗೂ ಮೊಮ್ಮಕ್ಕಳನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಮೈಸೂರು: ಬುದ್ದಿವಾದ ಹೇಳಿದಕ್ಕೆ ಕಬಾಬ್​ ಅಂಗಡಿ ಮಾಲೀಕನನ್ನೇ ಕೊಲೆ ಮಾಡಿದ ಧುರಳರು

ಅಸಲಿಗೆ ಮೃತ ನೇತ್ರಾವತಿಗೆ ಅನೈತಿಕ ಸಂಬಂಧಗಳು ಇದ್ದವಂತೆ, ಇದ್ರಿಂದ ಗಂಡ ಸೊಣ್ಣಪ್ಪ ಹಾಗೂ ಆಕೆಯ ಮದ್ಯೆ ಪ್ರತಿದಿನ ಗಲಾಟೆ ನಡೆಯುತ್ತಿತ್ತಂತೆ, ಜೊತೆಗೆ ಪೊಲೀಸ್ ಠಾಣೆ, ಕೋರ್ಟ್​ ಕಚೇರಿಗಳಲ್ಲಿ ವ್ಯಾಜ್ಯ ನಡೆಯುತ್ತಿದೆ. ಇತ್ತಿಚೀಗೆ ತಂದೆನೇ ಮಗಳ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ ಎಂದು ಸ್ವತಃ ಹೆಂಡತಿಯೇ ಗಂಡನ ಮೇಲೆ ಪೊಲೀಸರಿಗೆ ಸುಳ್ಳು ದೂರು ನೀಡಿದ್ದಳಂತೆ. ಇದ್ರಿಂದ ಹತಾಶವಾಗಿ ಸೊಣ್ಣಪ್ಪ ಪತ್ನಿ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಯತ್ನ ಮಾಡಿರುವ ಶಂಕೆ ವ್ಯಕ್ತವಾಗಿದೆ.

ವರದಿ: ಭೀಮಪ್ಪ ಪಾಟೀಲ್ ಟಿವಿ9 ಚಿಕ್ಕಬಳ್ಳಾಪುರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:39 pm, Wed, 22 February 23

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ