ಬೀದರ್: ಜಮೀನು ವಿಚಾರಕ್ಕೆ 2 ಕುಟುಂಬಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

| Updated By: ಆಯೇಷಾ ಬಾನು

Updated on: Jan 11, 2024 | 3:26 PM

ಎರಡು ಕುಟುಂಬಗಳ ನಡುವಿನ ಜಮೀನು ವಿವಾದವೇ ಕೊಲೆಗೆ ಕಾರಣವಾಗಿದೆ. ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಮತ್ತು ಪುತ್ರ ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಲ್ಲಿಕಾರ್ಜುನ ಕುಸಿದು ಬಿದ್ದಿದ್ದಾರೆ.

ಬೀದರ್: ಜಮೀನು ವಿಚಾರಕ್ಕೆ 2 ಕುಟುಂಬಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಸಾಂದರ್ಭಿಕ ಚಿತ್ರ
Follow us on

ಬೀದರ್, ಜ.11: ಬೀದರ್‌ (Bidar) ಜಿಲ್ಲೆಯಲ್ಲಿ ಜಮೀನು ವಿಚಾರಕ್ಕೆ (Property Issue) ಎರಡು ಕುಟುಂಬಗಳ ನಡುವೆ ಹೊಡೆದಾಟ, ಬಡಿದಾಟ ನಡೆದಿದೆ. ಜಮೀನು ವಿಚಾರಕ್ಕೆ ಶುರುವಾದ ಈ ಗಲಾಟೆಯಲ್ಲಿ ಓರ್ವ ಬಲಿಯಾಗಿದ್ದಾನೆ (Murder). ಎರಡು ಕುಟುಂಬಗಳ ನಡುವಿನ ಜಮೀನು ವಿವಾದವೇ ಕೊಲೆಗೆ ಕಾರಣವಾಗಿದೆ.

ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಮತ್ತು ಪುತ್ರ ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಲ್ಲಿಕಾರ್ಜುನ ಕುಸಿದು ಬಿದ್ದಿದ್ದಾರೆ. ತತಕ್ಷಣವೇ ಮನ್ನಾಖೇಳಿ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗೇ ಮಲ್ಲಿಕಾರ್ಜುನ್ ಮೃತಪಟ್ಟಿದ್ದಾರೆ. ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮೃತ ಮಲ್ಲಿಕಾರ್ಜುನ ಕುಟುಂಬಸ್ಥರು ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಹೊಳಲ್ಕೆರೆ ಪುರಸಭೆ ಸದಸ್ಯರು, ಬೆಂಬಲಿಗರ ನಡುವೆ ಬಡಿದಾಟ

ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಪುರಸಭೆ ಸದಸ್ಯರು ಮತ್ತು ಬೆಂಬಲಿಗರು ಬಡಿದಾಡಿಕೊಂಡಿದ್ದಾರೆ. ವಾಟರ್ ಟ್ಯಾಂಕ್ ವಿಚಾರಕ್ಕೆ ಈ ಗಲಾಟೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪುರಸಭೆ ಸದಸ್ಯರು ಮತ್ತು ಬೆಂಬಲಿಗರ ನಡುವೆ ತಹಶೀಲ್ದಾರ್ ಮತ್ತು ಅಧಿಕಾರಿಳ ಮುಂದೆ ಹೊಡೆದಾಡಿದ್ದಾರೆ. ಆಗಿದ್ದು ಏನಂದ್ರೆ, ಹೊಳಲ್ಕೆರೆ ಮಾಜಿ ಶಾಸಕ ಹೆಚ್.ಆಂಜನೇಯ ಬೆಂಬಲಿಗ ಕೆ.ಸಿ.ರಮೇಶ್ ಮತ್ತು ಬಿಜೆಪಿ ಶಾಸಕ‌ ಎಂ.ಚಂದ್ರಪ್ಪ ಬೆಂಬಲಿತ ಸುಧಾ ಬಸವರಾಜ್ ಗುಂಪಿನ ಮಧ್ಯೆ ಘರ್ಷಣೆ ನಡೆದಿದೆ. ಹೊಳಲ್ಕೆರೆ ಪಟ್ಟಣದ ಗೃಹ ಮಂಡಳಿ ಲೇಔಟ್‌ನ ವಾಟರ್ ಟ್ಯಾಂಕ್ ಡೆಮಾಲಿಶ್ ವಿಚಾರಕ್ಕೆ ಭಿನ್ನಭಿಪ್ರಾಯ ಉಂಟಾಗಿ ಗಲಾಟೆಯಾಗಿದೆ. ಕೆಲ ದಿನಗಳ ಹಿಂದೆ ನಡೆದ ಘರ್ಷಣೆಯ ವಿಡಿಯೋ ವೈರಲ್ ಆಗಿದ್ದು, ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ‌ ದೂರು, ಪ್ರತಿದೂರು ದಾಖಲಾಗಿದೆ.

ಇದನ್ನೂ ಓದಿ: ಪತಿ ಸಾವಿನ ವಿಷಯ ತಿಳಿಯುತಿದ್ದಂತೇ ಪತ್ನಿಗೆ ಹೃದಯಾಘಾತ, ಸಾವಿನಲ್ಲೂ ಒಂದಾದ ವೃದ್ದ ದಂಪತಿ

ಮರಕ್ಕೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ರಾಯಲ್ ಎನ್​​​​ಫೀಲ್ಡ್ ಬೈಕ್ ಮರಕ್ಕೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೋಲಾರ ತಾಲ್ಲೂಕಿನ ಕೋರಗೊಂಡಹಳ್ಳಿ ಬಳಿ ಘಟನೆ ನಡೆದಿದ್ದು, ಮಾಲೂರು ತಾಲ್ಲೂಕಿನ ಹುಳದೇನಹಳ್ಳಿ ನಿವಾಸಿ ನಾರಾಯಣಸ್ವಾಮಿ ಮೃತಪಟ್ಟ ದುರ್ದೈವಿ. ಟೇಕಲ್​​ನಿಂದ ಕೋಲಾರಕ್ಕೆ ಬರುತ್ತಿದ್ದಾಗ ಟಾಟಾ ಏಸ್​​​ಗೆ ಡಿಕ್ಕಿಯಾಗುವುದನ್ನ ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದ್ರು. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ