ಬೀದರ್: ಸ್ಕಾರ್ಪಿಯೋ ವಾಹನ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು, ಪ್ರಕರಣ ದಾಖಲು
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧರಿಹನುಮಾನ್ ದೇಗುಲ ಬಳಿ ಸ್ಕಾರ್ಪಿಯೋ ವಾಹನ ಡಿಕ್ಕಿಯಾಗಿ ಬೈಕ್ ಸವಾರರು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಬೋರ್‌ವೆಲ್ ಲಾರಿ ಹರಿದು ತೋಟದ ಮಾಲೀಕ ದುರ್ಮರಣ ಹೊಂದಿರುವಂತಹ ಘಟನೆ ವಿಜಯಪುರದಲ್ಲಿ ನಡೆದಿದೆ.
ಬೀದರ್, ಜನವರಿ 25: ಸ್ಕಾರ್ಪಿಯೋ ವಾಹನ ಡಿಕ್ಕಿ (Accident) ಯಾಗಿ ಬೈಕ್ ಸವಾರರು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಧರಿಹನುಮಾನ್ ದೇಗುಲ ಬಳಿ ನಡೆದಿದೆ. ಬೈಕ್‌ನಲ್ಲಿದ್ದ ಸಿದ್ದಪ್ಪ(45), ಸುಖದೇವ(42) ಮೃತಪಟ್ಟ ದುರ್ದೈವಿಗಳು. ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ತಳೇವಾಡ ಗ್ರಾಮದಲ್ಲಿ ಬೋರ್‌ವೆಲ್ ಲಾರಿ ಹರಿದು ತೋಟದ ಮಾಲೀಕ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಮೊಹಮ್ಮದ್ ಕೊಲ್ಹಾರ ಮೃತ ದುರ್ದೈವಿ. ಕೂಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು: ಐವರು ಪ್ರಾಣಾಪಾಯದಿಂದ ಪಾರು
ಕೋಲಾರ: ತಾಂತ್ರಿಕ ದೋಷದ ಹಿನ್ನಲೆ ಇದ್ದಕ್ಕಿದ್ದಂತೆ ಕಾರು ಹೊತ್ತಿ ಉರಿದಿದ್ದು, ಕಾರ್ನಲ್ಲಿದ್ದ ಒಂದು ಮಗು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಎನ್.ವಡ್ಡಹಳ್ಳಿ ಬಳಿ ನಡೆದಿದೆ.
ಇದನ್ನೂ ಓದಿ: ಚಳ್ಳಕೆರೆ ಬಳಿ ನಡೆದ ಕಾರು ಅಪಘಾತಕ್ಕೆ ಬಲಿಯಾದ ನಾಲ್ವರಲ್ಲಿ ಎರಡು ಹಸುಳೆಗಳು ಮತ್ತು ಇನ್ನೊಂದು 2-ವರ್ಷದ ಮಗು!
ಬೆಂಗಳೂರು ಮೂಲದ ಮಹೇಶ್ ಎಂಬುವರಿಗೆ ಕಾರು ಸೇರಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಂಗಲಿ ಪೊಲೀಸರು ಭೇಟಿ ಮಾಡಿ ಪರಿಶೀಲನೆ ಮಾಡಿದ್ದಾರೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆಟೋ ಟಚ್ ಆಗಿ ಬೈಕ್ನಿಂದ ಬಿದ್ದಿದ್ದ ಸವಾರನ ಮೇಲೆ ಹರಿದ ಬಸ್
ಕಲಬುರಗಿ: ಆಟೋ ಟಚ್ ಆಗಿ ಬೈಕ್ನಿಂದ ಬಿದ್ದಿದ್ದ ಸವಾರನ ಮೇಲೆ KSRTC ಬಸ್ ಹರಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ನಗರದ ಹುಮನಾಬಾದ್ ರಸ್ತೆಯಲ್ಲಿ ನಡೆದಿದೆ. ಸೋಮಶೇಖರ್(34) ಮೃತ ಬೈಕ್ ಸವಾರ.
ಇದನ್ನೂ ಓದಿ: ವಿಜಯಪುರದ ಪ್ರೇಮ-ಕಾಮ-ವಂಚನೆ ಪ್ರಕರಣದಲ್ಲಿ ಪೊಲೀಸಪ್ಪನೇ ಆರೋಪಿ! ದೂರು ದಾಖಲಾದ ಬಳಿಕ ನಾಪತ್ತೆ
ದಾಲ್‌ಮೀಲ್‌ನಲ್ಲಿ ಕೆಲಸ ಮುಗಿಸಿ ಹೊರಟಿದ್ದಾಗ ದುರಂತ ಸಂಭವಿಸಿದೆ. ಬೀದರ್ ಕಡೆಯಿಂದ ಕಲಬುರಗಿ ಕಡೆಗೆ KSRTC ಬಸ್ ಬರುತ್ತಿತ್ತು. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬಾಲ ಮಂದಿರಲ್ಲಿ ಸಂತ್ರಸ್ತ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ
ತುಮಕೂರು: ಬಾಲ ಮಂದಿರಲ್ಲಿ ಸಂತ್ರಸ್ತ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಬಾಲಕಿಯರ ಬಾಲ ಮಂದಿರದಲ್ಲಿ ನಡೆದಿದೆ. ಮೈಸೂರು ಮೂಲದ ಅಪ್ರಾಪ್ತ ಬಾಲಕಿಗೆ ಆಶ್ರಯ ನೀಡಲಾಗಿತ್ತು. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.