ಬಸವಲಿಂಗಶ್ರೀ ಆತ್ಮಹತ್ಯೆ ಸುತ್ತ ನೂರೆಂಟು ಅನುಮಾನದ ಹುತ್ತ, ವಿಡಿಯೋ ತೋರಿಸಿ ಸ್ವಾಮೀಜಿಗೆ ಹೆದರಿಸಿದ್ರಾ?

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದ್ದು, ಸ್ವಾಮೀಜಿ ಸಾವಿನ ಸುತ್ತ ನೂರೆಂಟು ಅನುಮಾನದ ಹುತ್ತ ಸುಳಿದಾಡುತ್ತಿವೆ.

ಬಸವಲಿಂಗಶ್ರೀ ಆತ್ಮಹತ್ಯೆ ಸುತ್ತ ನೂರೆಂಟು ಅನುಮಾನದ ಹುತ್ತ,  ವಿಡಿಯೋ ತೋರಿಸಿ ಸ್ವಾಮೀಜಿಗೆ ಹೆದರಿಸಿದ್ರಾ?
bande mutt basavalinga swamiji
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 24, 2022 | 2:58 PM

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್​ ಬಂಡೇಮಠದ ಬಸವಲಿಂಗ ಸ್ವಾಮೀಜಿ (Basavalinga Swamiji) ಆತ್ಮಹತ್ಯೆ ಪ್ರಕರಣ ಹೊಸ ತಿರುವುಪಡೆದುಕೊಂಡಿದ್ದು, ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ ಹಿಂದೆ ಇದೀಗ ಹಲವು ಪ್ರಶ್ನೆಗಳು ಎದ್ದಿದೆ. ಇನ್ನು ಕೆಲ ವೈಯಕ್ತಿಕ ಕಾರಣಗಳಿಂದ ಸ್ವಾಮೀಜಿಗಳು ಬೇಸತ್ತಿದ್ರಾ ಅನ್ನೋ ಅನುಮಾನ ಮೂಡಿದೆ.

ಮುಖಂರರೊಬ್ಬರ ಬೆದರಿಕೆಗೆ ಹೆದರಿ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ರಾ ಎನ್ನುವ ಶಂಕೆ ವ್ಯಕ್ತವಾಗಿದೆ. ಹೀಗೆ ಬಸವಲಿಂಗ ಸ್ವಾಮೀಜಿ ಸಾವಿನ ಸುತ್ತ ನೂರೆಂಟು ಅನುಮಾನದ ಹುತ್ತ ಸುಳಿದಾಡ್ತಿದೆ. ಕೆಲ ಕಾರ್ಯಕ್ರಮಗಳಿಗೆ ಮಠಕ್ಕೆ ಆ ಮುಖಂಡನನ್ನು ಕರೆಯದ್ದಕ್ಕೆ ಯಾವುದೋ ವಿಡಿಯೋ ತೋರಿಸಿ ಸ್ವಾಮೀಜಿಗಳಿಗೆ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.

ಮರ್ಯಾದೆಗೆ ಅಂಜಿ ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ

ಕಳೆದ 4 ದಿನಗಳಿಂದ ನಿರಂತವಾಗಿ ವಿಡಿಯೋ ತೋರಿಸಿ ಬಸವಲಿಂಗ ಸ್ವಾಮೀಜಿಗೆ ಬ್ಲಾಕ್​ಮೇಲ್ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಗಳ ಆತ್ಮಹತ್ಯೆ ಹಿಂದೆ ಷಡ್ಯಂತ್ರ ನಡೆಯಿತಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.

ಡೆತ್​​ನೋಟ್ ವಶಕ್ಕೆ ಪಡೆದು ತನಿಖೆ

ಕಂಚುಗಲ್​ ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ ಹಿಂದೆ ಇದೀಗೆ ಹಲವು ಪ್ರಶ್ನೆಗಳು ಎದ್ದಿದೆ. ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ನನಗೆ ಯಾರು ಸಹಾಯಕ್ಕೆ ಇರಲಿಲ್ಲ. ಕೆಲವರು ಬೆದರಿಕೆ ಹಾಕಿದ್ದಾರೆ ಅಂತಾ ಮೂರು ಪುಟಗಳ ಡೆತ್​ನೋಟ್​ನಲ್ಲಿ ಬರೆದಿದ್ದಾರೆ ಎಂದು ಹೇಳಲಾಗಿದೆ. ಸ್ವಾಮೀಜಿ ಆತ್ಮಹತ್ಯೆ ಸುತ್ತ ಅನುಮಾನದ ಹುತ್ತ ಬೆಳೆದಿದೆ.

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರೋ ಸ್ಥಳದಲ್ಲೇ ಡೆತ್​ನೋಟ್​ ಪತ್ತೆಯಾಗಿದೆ. ಸ್ವಾಮೀಜಿ ಬರೆದಿರೋ ಡೆತ್​ನೋಟ್​ ವಶಕ್ಕೆ ಪಡೆದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಡೆತ್​ನೋಟ್​ನಲ್ಲಿ ಬರೆದಿರೋ ಅಂಶ ಪರಿಶೀಲನೆ ನಡೆಸಲಾಗ್ತಿದೆ. ಆತ್ಮಹತ್ಯೆಗೆ ಶರಣಾಗುವಷ್ಟು ಶ್ರೀಗಳಿಗೆ ನೋವಾಗಿದ್ದಾದ್ರು ಏನು ಅನ್ನೋ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು,ಸತ್ಯಾಸತ್ಯತೆ ಬಯಲಾಗಲಿದೆ.

ಬಂಡೆಮಠ ಸ್ವಾಮೀಜಿ ಸಾವಿನ ಹಿಂದೆ ಯುವತಿ ನೆರಳು ಇದ್ಯಾ? ವಿಡಿಯೋ ಕಾಲ್‌ನಲ್ಲಿ ಬೆದರಿಕೆ ಹಾಕಿದವರು ಯಾರು? ಸ್ವಾಮೀಜಿಗಳು ಮರ್ಯಾದೆಗೆ ಅಂಜುವಂಥದ್ದು ಏನಿತ್ತು? ಎನ್ನುವ ಪ್ರಶ್ನೆಗಳಿಗೆ ಪೊಲೀಸ್ ತನಿಖೆ ಬಳಿಕ ಉತ್ತರ ಸಿಗಲಿದೆ.

Published On - 2:47 pm, Mon, 24 October 22

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!