ಆಟೋ ಹಾಗೂ ಖಾಸಗಿ ಬಸ್​ ನಡುವೆ ಭೀಕರ ಅಪಘಾತ: ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ

ಸಾಲ ವಾಪಸ್ ಕೊಡದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ಪ್ರಕರಣ ಹಿನ್ನೆಲೆ ಸೋಲದೇವನಹಳ್ಳಿ ಠಾಣೆ ಪೊಲೀಸರಿಂದ ಆರೋಪಿ ಗಜೇಂದ್ರ ಸೆರೆಹಿಡಿಯಲಾಗಿದೆ. ಏಪ್ರಿಲ್ 27ರಂದು ರತ್ನಮ್ಮ ಮೇಲೆ ರಾಡ್​ನಿಂದ ಹಲ್ಲೆ ಮಾಡಿ ಗಜೇಂದ್ರ ಪರಾರಿಯಾಗಿದ್ದ.

ಆಟೋ ಹಾಗೂ ಖಾಸಗಿ ಬಸ್​ ನಡುವೆ ಭೀಕರ ಅಪಘಾತ: ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 30, 2022 | 2:52 PM

ತುಮಕೂರು: ಆಟೋ ಹಾಗೂ ಖಾಸಗಿ ಬಸ್ ನಡುವೆ ಅಪಘಾತ (Accident) ಸಂಭವಿಸಿದ್ದು, ಮೂವರಿಗೆ ಗಾಯಗೊಂಡಿದ್ದರೆ, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬೆನಿವಾರದ ಕೊಪ್ಪಲು ಬಳಿ ನಡೆದಿದೆ. ಆಟೋದಲ್ಲಿದ್ದ ರಾಮಣ್ಣ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಗಡಿ ಮೂಲದ ರಾಮಣ್ಣ ತಮ್ಮ ಮಕ್ಕಳ ಜೊತೆ ದೇವಸ್ಥಾನಕ್ಕೆ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ ಕುಣಿಗಲ್​ನಲ್ಲಿ ನಡೆಯುತ್ತಿರುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಖಾಸಗಿ ಬಸ್ ಬರುತ್ತಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋದಲ್ಲಿದ್ದ ರಾಮಣ್ಣ ಸಾವನ್ನಪ್ಪಿದ್ದು, ಮೂವರಿಗೆ ಗಾಯವಾಗಿದೆ. ಗಾಯಾಳುಗಳು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಲ ವಾಪಸ್ ಕೊಡದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ; ಆರೋಪಿ ಅರೆಸ್ಟ್

ನೆಲಮಂಗಲ: ಸಾಲ ವಾಪಸ್ ಕೊಡದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ಪ್ರಕರಣ ಹಿನ್ನೆಲೆ ಸೋಲದೇವನಹಳ್ಳಿ ಠಾಣೆ ಪೊಲೀಸರಿಂದ ಆರೋಪಿ ಗಜೇಂದ್ರ ಸೆರೆಹಿಡಿಯಲಾಗಿದೆ. ಏಪ್ರಿಲ್ 27ರಂದು ರತ್ನಮ್ಮ ಮೇಲೆ ರಾಡ್​ನಿಂದ ಹಲ್ಲೆ ಮಾಡಿ ಗಜೇಂದ್ರ ಪರಾರಿಯಾಗಿದ್ದ. ಗಾಯಾಳು ರತ್ನಮ್ಮಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ ಘಟನೆ ನಡೆದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರಿನಲ್ಲಿ ನಿಗೂಢವಾಗಿ ಕೊಲೆಯಾದ ಮಹಿಳಾ ಉದ್ಯಮಿ

ಬೆಂಗಳೂರು: ಸದಾಶಿವನಗರದ ಇ-ಕಾಮರ್ಸ್ ಉದ್ಯಮಿ ಸುನೀತಾ(54) ನಿಗೂಢವಾಗಿ ಕೊಲೆಯಾದ (Murder) ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ವರ್ತೂರು ಪೊಲೀಸರು ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ಕಿರಣ್​ನ ಬಂಧಿಸಿದ್ದಾರೆ. ಪರಿಚಿತರೆ ಮಹಿಳಾ ಉದ್ಯಮಿಯನ್ನು (Business Woman) ಹತ್ಯೆಗೈದಿರುವ ಬಗ್ಗೆ ಪೊಲೀಸರಿಗೆ ಅನುಮಾನ ಇತ್ತು. ಮಾರ್ಚ್ 31 ರಂದು ಮಲ್ಲೇಶ್ವರ ನಿವಾಸದಿಂದ ಬ್ಯುಸಿನೆಸ್ ಮೀಟಿಂಗ್ ಅಂತ ಹೇಳಿ ಉದ್ಯಮಿ ಮಹಿಳೆ ಹೊರಟಿದ್ದರು. ನಾಲ್ಕು ದಿನದ ಬಳಿಕ ವರ್ತೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಹಲವು ಆಯಾಮಗಳಲ್ಲಿ ವರ್ತೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದರು.

ಇನ್ನು ಮಹಿಳಾ ಉದ್ಯಮಿ ಮಿಸ್ಸಿಂಗ್ ಕೇಸ್-ಮರ್ಡರ್ ಮಿಸ್ಟರಿ ಬಗ್ಗೆ ಟಿವಿ9​ಗೆ ಮಾಹಿತಿ ಲಭ್ಯವಾಗಿದೆ. ಸುನೀತಾ ಸದಾಶಿವನಗರದಲ್ಲಿ ತತ್ವ ವಂಶಿ ಇ- ಕಾಮರ್ಸ್ ಬ್ಯುಸಿನೆಸ್ ನಡೆಸುತ್ತಿದ್ದರು. ಉದ್ಯಮಿ ತೆರಳಿದ್ದ ಕಾರಿನ ಸಮೇತ ಕಿರಣ್ ನಾಪತ್ತೆಯಾಗಿದ್ದ. ಉದ್ಯಮಿ ಸುನೀತಾಗೆ ಆರು ತಿಂಗಳ ಹಿಂದೆ ಕಿರಣ್ ಪರಿಚಿತನಾಗಿದ್ದ. ಶ್ರೀಮಂತೆ ಸುನೀತಾ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಆರೋಪಿ ಕಿರಣ್, ಪರಿಚಿತನಾಗಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ:

ಆರ್ಥಿಕತೆ ಉತ್ತಮವಾಗಿದೆ, ಬಿಸಿಲು ಭಯಂಕರವಾಗಿದೆ; ಹಾಗಾಗಿ ವಿದ್ಯುತ್​ ಬೇಡಿಕೆ ಅಗಾಧವಾಗಿದೆ- ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ

‘ಇಲ್ಲಿಗೆ ಬರಲು ನಂಗೆ ಧೈರ್ಯ ಸಾಕಾಗಲ್ಲ’: ಕಲಾವಿದರ ಭವನದಲ್ಲಿ ಅಂಬರೀಷ್​ ನೆನೆದು ರಾಕ್​ಲೈನ್​ ಭಾವುಕ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು