AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ವೇಳೆ ಬೃಹತ್ ಮಾನವ ಕಳ್ಳಸಾಗಣೆ ಜಾಲ ಬಹಿರಂಗ

ಮಾನವ ಕಳ್ಳಸಾಗಣೆ ದಂಧೆಯ ಕಿಂಗ್‌ಪಿನ್‌ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಬೆಂಗಳೂರು ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬಾಂಗ್ಲಾದಲ್ಲಿ ಆರೋಪಿಗಳನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ.

ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ವೇಳೆ ಬೃಹತ್ ಮಾನವ ಕಳ್ಳಸಾಗಣೆ ಜಾಲ ಬಹಿರಂಗ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 03, 2021 | 6:00 PM

Share

ಬೆಂಗಳೂರು: ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ವೇಳೆ ಬೃಹತ್ ಮಾನವ ಕಳ್ಳಸಾಗಣೆ ವಿಚಾರ ಬಹಿರಂಗವಾಗಿದೆ. ಮಾನವ ಕಳ್ಳಸಾಗಣೆ ದಂಧೆಯ ಕಿಂಗ್‌ಪಿನ್‌ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಬೆಂಗಳೂರು ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬಾಂಗ್ಲಾದಲ್ಲಿ ಆರೋಪಿಗಳನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ.

ಕಿಂಗ್‌ಪಿನ್‌ ಅಶ್ರಾಫ್​ ಉಲ್ಲಾ ಇಸ್ಲಾಂ ಅಲಿಯಾಸ್ ಬಾಸ್ ರಫಿ, ಶಹೀದಾ ಬೇಗಮ್ ಅಲಿಯಾಸ್ ಮೇಡಮ್ ಶಹೀದಾ, ಇಸ್ಮಾಯಿಲ್, ರೆಹಮಾನ್ ಶೇಖ್‌ ಬಂಧಿತ ಆರೋಪಿಗಳು. ರಫಿ ಕಳೆದ 10 ವರ್ಷಗಳಿಂದ ಯುವತಿಯರ ಕಳ್ಳಸಾಗಣೆ ಮಾಡುತ್ತಿದ್ದ. ಈವರೆಗೆ ಸುಮಾರು 500 ಯುವತಿಯರನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಿದ್ದ. ಇಷ್ಟೂ ಯುವತಿಯರನ್ನು ವೇಶ್ಯಾವಾಟಿಕೆ ದಂಧೆಗೆ ಬಳಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣ ಬಳಿಕ ಪೊಲೀಸರು ಮಾಹಿತಿ ವಿನಿಮಯ ಮಾಡಿಕೊಂಡಿದ್ದರು. ಬೆಂಗಳೂರು ಪೊಲೀಸರಿಂದ ಮಾಹಿತಿ ಬಂದ ಬಳಿಕ ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಐದು ದಿನ ಕಸ್ಟಡಿಗೆ ಪಡೆದಿದ್ದಾರೆ. ಅತ್ಯಾಚಾರದ ವಿಡಿಯೊ ವೈರಲ್ ಆದ ಬಳಿಕ ಪ್ರಕರಣ ದಾಖಲಿಸಿ ರಫೀಕ್‌ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ರಫೀಕ್ ಮೂಲಕವೇ ಭಾರತಕ್ಕೆ ಬೃಹತ್ ಮಾನವ ಕಳ್ಳಸಾಗಣೆ ನಡೆಯುತ್ತಿತ್ತು. ಇತ್ತೀಚೆಗೆ ಬೆಂಗಳೂರಿನಿಂದ ರಫೀಕ್ ತವರು ದೇಶವಾದ ಬಾಂಗ್ಲಾಕ್ಕೆ ಹೋಗಿದ್ದ. ಬಾಂಗ್ಲಾದೇಶ ಮತ್ತು ಬೆಂಗಳೂರು ನಡುವೆ ಪದೇಪದೆ ಓಡಾಡ್ತಿದ್ದ.

ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ ಆರೋಪಿಗಳು ಈತನ ಮೂಲಕವೇ ಬಾಂಗ್ಲಾದಿಂದ ಅಕ್ರಮವಾಗಿ ಬೆಂಗಳೂರು ನಗರಕ್ಕೆ ಬಂದಿದ್ದರು. ಕಳ್ಳಸಾಗಣೆ ಬಳಿಕ ಆಧಾರ್ ಕಾರ್ಡ್‌, ಉಳಿದುಕೊಳ್ಳಲು ವ್ಯವಸ್ಥೆಯ ಜೊತೆಗೆ ವೇಶ್ಯಾವಾಟಿಕೆ ದಂಧೆವರೆಗೂ ಎಲ್ಲಾ ವ್ಯವಸ್ಥೆಯನ್ನೂ ರಫೀಕ್ ಮಾಡಿಕೊಡುತ್ತಿದ್ದ. ಈವರೆಗೆ ರಫೀಕ್ ಎಷ್ಟು ಜನರನ್ನು ಭಾರತಕ್ಕೆ ಕಳಿಸಿದ್ದಾನೆಂದು ಬಾಂಗ್ಲಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(Biggest Human Traffic Gang Arrested in Bangladesh on Tip off from Bengaluru police)

ಇದನ್ನೂ ಓದಿ: ಬಾಂಗ್ಲಾ ಯುವತಿಯ ಮೇಲೆ ಅತ್ಯಾಚಾರ ಪ್ರಕರಣ: ವಿಡಿಯೋದಲ್ಲಿದ್ದ ಮೂವರು ಆರೋಪಿಗಳು ಪೊಲೀಸರ ವಶಕ್ಕೆ

ಇದನ್ನೂ ಓದಿ: ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣ: ತನಿಖೆ ವೇಳೆ ಹೊರಬಿತ್ತು ಬೃಹತ್ ಮಾನವ ಕಳ್ಳಸಾಗಣೆ ಜಾಲದ ಕರಾಳ ಮುಖ

Published On - 5:58 pm, Thu, 3 June 21