ಬಿಹಾರ: ಛತ್​ಪೂಜೆ ವೇಳೆ ಗುಂಡಿನ ದಾಳಿ, ಇಬ್ಬರು ಸಾವು, ನಾಲ್ವರಿಗೆ ಗಾಯ

ಛತ್​ಪೂಜೆ(Chhath Puja) ವೇಳೆ ಪಕ್ಕದ ಮನೆಯವರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮೃತರು ಒಂದೇ ಕುಟುಂಬದವರಾಗಿದ್ದಾರೆ. ಛತ್​ ಪೂಜೆ ನಡೆಸಿ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ ಮನೆಯವರು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಲಖಿಸಾರೈನ ಹಿರಿಯ ಪೊಲೀಸ್ ಅಧಿಕಾರಿ ಪಂಕಜ್ ಕುಮಾರ್ ಹೇಳಿದ್ದಾರೆ. ಅವರ ನೆರೆಹೊರೆಯವರಾದ ಆಶಿಶ್ ಚೌಧರಿ ಅವರ ಹತ್ತಿರ ಬಂದು, ಬಳಿಕ ಪಿಸ್ತೂಲ್‌ನಿಂದ ಅವರ ಮೇಲೆ ಗುಂಡು ಹಾರಿಸಿದ್ದಾರೆ.

ಬಿಹಾರ: ಛತ್​ಪೂಜೆ ವೇಳೆ ಗುಂಡಿನ ದಾಳಿ, ಇಬ್ಬರು ಸಾವು, ನಾಲ್ವರಿಗೆ ಗಾಯ
ಫೈರಿಂಗ್
Follow us
ನಯನಾ ರಾಜೀವ್
|

Updated on: Nov 20, 2023 | 11:25 AM

ಛತ್​ಪೂಜೆ(Chhath Puja) ವೇಳೆ ಪಕ್ಕದ ಮನೆಯವರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮೃತರು ಒಂದೇ ಕುಟುಂಬದವರಾಗಿದ್ದಾರೆ. ಛತ್​ ಪೂಜೆ ನಡೆಸಿ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ ಮನೆಯವರು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಲಖಿಸಾರೈನ ಹಿರಿಯ ಪೊಲೀಸ್ ಅಧಿಕಾರಿ ಪಂಕಜ್ ಕುಮಾರ್ ಹೇಳಿದ್ದಾರೆ. ಅವರ ನೆರೆಹೊರೆಯವರಾದ ಆಶಿಶ್ ಚೌಧರಿ ಅವರ ಹತ್ತಿರ ಬಂದು, ಬಳಿಕ ಪಿಸ್ತೂಲ್‌ನಿಂದ ಅವರ ಮೇಲೆ ಗುಂಡು ಹಾರಿಸಿದ್ದಾರೆ.

ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದಂತೆ ಕುಟುಂಬದ ಆರು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ಕಳೆದ 10 ದಿನಗಳ ಹಿಂದೆ ಚೌಧರಿ ಮತ್ತು ಸಂತ್ರಸ್ತರ ನಡುವೆ ಜಗಳ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಹಾಸನ ಮಹಿಳಾ ಪೊಲೀಸ್​ ಠಾಣೆಯಲ್ಲಿ ಪತ್ನಿಯನ್ನ ಕೊಲೆ ಮಾಡಲು ಯತ್ನಿಸಿದ ಪತಿ

ಆರೋಪಿಗಳನ್ನು ಗುರುತಿಸಿ ಬಂಧಿಸಲು ನಾವು ನಿರಂತರವಾಗಿ ಶ್ರಮಿಸುತ್ತಿದ್ದೇವೆ ಎಂದು ಕುಮಾರ್ ಹೇಳಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಅಧಿಕಾರಿಗಳ ತಂಡವನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ