AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್

ಬಿಹಾರದ ಬೆಗುಸರಾಯ್ ಜಿಲ್ಲೆಯ ಹೆದ್ದಾರಿಯಲ್ಲಿ ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್
ಬಿಹಾರದಲ್ಲಿ ಸಾರ್ವಜನಿಕರ ಮೇಲೆ ನಡೆಡದ ಗುಂಡಿನ ದಾಳಿ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು (ಸಿಸಿಟಿವಿಯಲ್ಲಿ ಆರೋಪಿಗಳ ದೃಶ್ಯಾವಳಿ ಸೆರೆಯಾದ ಚಿತ್ರ)
TV9 Web
| Edited By: Rakesh Nayak Manchi|

Updated on: Sep 16, 2022 | 9:19 AM

Share

ಪಟ್ನಾ: ಬಿಹಾರದ ಬೆಗುಸರಾಯ್ ಜಿಲ್ಲೆಯ ಹೆದ್ದಾರಿಯಲ್ಲಿ ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುವರಾಜ್, ಕೇಶವ್, ಅರ್ಜುನ್ ಮತ್ತು ಸುಮಿತ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಪ್ರಕರಣ?

ಬಿಹಾರದ ರಾಷ್ಟ್ರೀಯ ಹೆದ್ದಾರಿ 31 ಮತ್ತು 28 ರ ಉದ್ದಕ್ಕೂ ಸೆ.13ರಂದು ಅಮಾಯಕ ಪಾದಚಾರಿಗಳ ಮೇಲೆ ಗುಂಡಿನ ಸುರಿಮಳೆಗೈಯಲಾಗಿತ್ತು. ಸಂಜೆ 5 ಗಂಟೆ ಸುಮಾರಿಗೆ ಬೈಕ್​ಗಳಲ್ಲಿ ಮಲ್ಹಿಪುರ್ ಚೌಕ್‌ಗೆ  ಆಗಮಿಸಿದ ಬಂದೂಕುಧಾರಿಗಳು ಜನನಿಬಿಡ ಪ್ರದೇಶದಲ್ಲಿನ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಆರಂಭಿಸಿದ್ದಾರೆ. ಬೈಕ್​ನಲ್ಲಿ ವೇಗವಾಗಿ ಸಂಚರಿಸುತ್ತಾ ಸುಮಾರು 30 ಕಿ.ಮೀ.ವರೆಗೂ 11 ಜನರ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಜನರೆಲ್ಲರೂ ಪ್ರಾಣ ಉಳಿಸಿಕೊಳ್ಳಲು ಎಲ್ಲೆಂದರಲ್ಲಿ ಓಡಾಡಿದ್ದಾರೆ. ಘಟನೆಯಲ್ಲಿ ಚಂದನ್ ಕುಮಾರ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಬರೌನಿ ಥರ್ಮಲ್ ಪವರ್ ಸ್ಟೇಷನ್ ಬಳಿ ಎನ್ಎಚ್ 31 ರಿಂದ ಹಿಡಿದು ಎನ್ಎಚ್ 28 ರ ಬಚ್ವಾರಾವರೆಗೆ ತಮ್ಮ ಬೈಕ್‌ನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಈ ದುಷ್ಕರ್ಮಿಗಳು ಗುಂಡುಗಳನ್ನು ಹಾರಿಸಿದ್ದಾರೆ. ದುಷ್ಕರ್ಮಿಗಳು ಎಸಗಿದ ದುಷ್ಕೃತ್ಯಗಳು ಬಚ್ವಾರಾ ಪ್ರದೇಶದ ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದ್ದು, ಇಬ್ಬರು ಆರೋಪಿಗಳು ಬೈಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಕಾರ್ಯಪ್ರವೃತರಾದ ಪೊಲೀಸರು ಸದ್ಯ ನಾಲ್ವರನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ