ಪಟ್ನಾ: ಬಿಹಾರದ ಬೆಗುಸರಾಯ್ ಜಿಲ್ಲೆಯ ಹೆದ್ದಾರಿಯಲ್ಲಿ ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುವರಾಜ್, ಕೇಶವ್, ಅರ್ಜುನ್ ಮತ್ತು ಸುಮಿತ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಏನಿದು ಪ್ರಕರಣ?
ಬಿಹಾರದ ರಾಷ್ಟ್ರೀಯ ಹೆದ್ದಾರಿ 31 ಮತ್ತು 28 ರ ಉದ್ದಕ್ಕೂ ಸೆ.13ರಂದು ಅಮಾಯಕ ಪಾದಚಾರಿಗಳ ಮೇಲೆ ಗುಂಡಿನ ಸುರಿಮಳೆಗೈಯಲಾಗಿತ್ತು. ಸಂಜೆ 5 ಗಂಟೆ ಸುಮಾರಿಗೆ ಬೈಕ್ಗಳಲ್ಲಿ ಮಲ್ಹಿಪುರ್ ಚೌಕ್‌ಗೆ ಆಗಮಿಸಿದ ಬಂದೂಕುಧಾರಿಗಳು ಜನನಿಬಿಡ ಪ್ರದೇಶದಲ್ಲಿನ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಆರಂಭಿಸಿದ್ದಾರೆ. ಬೈಕ್‌ನಲ್ಲಿ ವೇಗವಾಗಿ ಸಂಚರಿಸುತ್ತಾ ಸುಮಾರು 30 ಕಿ.ಮೀ.ವರೆಗೂ 11 ಜನರ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಜನರೆಲ್ಲರೂ ಪ್ರಾಣ ಉಳಿಸಿಕೊಳ್ಳಲು ಎಲ್ಲೆಂದರಲ್ಲಿ ಓಡಾಡಿದ್ದಾರೆ. ಘಟನೆಯಲ್ಲಿ ಚಂದನ್ ಕುಮಾರ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಬರೌನಿ ಥರ್ಮಲ್ ಪವರ್ ಸ್ಟೇಷನ್ ಬಳಿ ಎನ್ಎಚ್ 31 ರಿಂದ ಹಿಡಿದು ಎನ್ಎಚ್ 28 ರ ಬಚ್ವಾರಾವರೆಗೆ ತಮ್ಮ ಬೈಕ್‌ನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಈ ದುಷ್ಕರ್ಮಿಗಳು ಗುಂಡುಗಳನ್ನು ಹಾರಿಸಿದ್ದಾರೆ. ದುಷ್ಕರ್ಮಿಗಳು ಎಸಗಿದ ದುಷ್ಕೃತ್ಯಗಳು ಬಚ್ವಾರಾ ಪ್ರದೇಶದ ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದ್ದು, ಇಬ್ಬರು ಆರೋಪಿಗಳು ಬೈಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಕಾರ್ಯಪ್ರವೃತರಾದ ಪೊಲೀಸರು ಸದ್ಯ ನಾಲ್ವರನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ