ಬಿಹಾರದಲ್ಲಿ ಆಡುತ್ತಿದ್ದ 3 ವರ್ಷದ ಬಾಲಕನಿಗೆ ಚಾಕುವಿನಿಂದ ಇರಿದು ಕೊಲೆ

ಬಿಹಾರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪಕ್ಕದ ಮನೆಯ ಮಕ್ಕಳು ತಮ್ಮ ಮನೆಯ ಹೊರಗೆ ಆಟವಾಡುತ್ತಿರುವುದಕ್ಕೆ ಕೋಪಗೊಂಡಿದ್ದ ಆರೋಪಿ ತಮ್ಮ ಮನೆಯಂಗಳಕ್ಕೆ ಆಡಲು ಬಂದ 3 ವರ್ಷದ ಮಗುವಿಗೆ ಚಾಕುವಿನಿಂದ ಇರಿದಿದ್ದಾರೆ. ನಂತರ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

ಬಿಹಾರದಲ್ಲಿ ಆಡುತ್ತಿದ್ದ 3 ವರ್ಷದ ಬಾಲಕನಿಗೆ ಚಾಕುವಿನಿಂದ ಇರಿದು ಕೊಲೆ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Sep 25, 2024 | 4:33 PM

ಮುಜಾಫರ್​​ಪುರ: ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕನನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಇಂದು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಿಘ್ರಾ ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ 3 ವರ್ಷದ ಮಗುವನ್ನು ಹತ್ಯೆ ಮಾಡಲಾಗಿದೆ.

ಈ ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಬಾಲಕ ತನ್ನ ಇತರ ಸ್ನೇಹಿತರೊಂದಿಗೆ ಆರೋಪಿಯ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಗ್ರಾಮದ ನಿವಾಸಿಗಳು ತಿಳಿಸಿದ್ದಾರೆ. ಮಕ್ಕಳು ತಮ್ಮ ಮನೆಯ ಹೊರಗೆ ಆಟವಾಡುವುದು ಆರೋಪಿಗಳ ಕುಟುಂಬಕ್ಕೆ ಇಷ್ಟವಿರಲಿಲ್ಲ. ಇದೇ ಕಾರಣಕ್ಕೆ ಮಕ್ಕಳು ಅವರ ಮನೆಯೆದುರು ಆಡುವಾಗ 3 ವರ್ಷದ ಮಗುವಿಗೆ ಚಾಕುವಿನಿಂದ ಇರಿದಿದ್ದಾರೆ.

ಇದನ್ನೂ ಓದಿ: ತಾಯಿಯ ಮೇಲೆ ಅತ್ಯಾಚಾರವೆಸಗಿ ತನ್ನ ಹೆಂಡತಿಯಾಗಿರ್ತೀಯಾ ಎಂದು ಕೇಳಿದ್ದ ನೀಚ ಮಗ

ಮಂಗಳವಾರ ಸಂಜೆ ಮಕ್ಕಳು ಆರೋಪಿಯ ಮನೆಯ ಹೊರಗೆ ಆಟವಾಡುತ್ತಿದ್ದಾಗ ಅವರು ಹೊರಗೆ ಬಂದು ಬಾಲಕನಿಗೆ ಚಾಕುವಿನಿಂದ ಇರಿದಿದ್ದು, ಆರೋಪಿ ಮಾನಸಿಕ ಅಸ್ವಸ್ಥ ಎಂದು ಸ್ಥಳೀಯರು ಹೇಳಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ