ಮುಜಾಫರ್‌ಪುರ: ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕನನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಇಂದು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಿಘ್ರಾ ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ 3 ವರ್ಷದ ಮಗುವನ್ನು ಹತ್ಯೆ ಮಾಡಲಾಗಿದೆ.
ಈ ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಬಾಲಕ ತನ್ನ ಇತರ ಸ್ನೇಹಿತರೊಂದಿಗೆ ಆರೋಪಿಯ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಗ್ರಾಮದ ನಿವಾಸಿಗಳು ತಿಳಿಸಿದ್ದಾರೆ. ಮಕ್ಕಳು ತಮ್ಮ ಮನೆಯ ಹೊರಗೆ ಆಟವಾಡುವುದು ಆರೋಪಿಗಳ ಕುಟುಂಬಕ್ಕೆ ಇಷ್ಟವಿರಲಿಲ್ಲ. ಇದೇ ಕಾರಣಕ್ಕೆ ಮಕ್ಕಳು ಅವರ ಮನೆಯೆದುರು ಆಡುವಾಗ 3 ವರ್ಷದ ಮಗುವಿಗೆ ಚಾಕುವಿನಿಂದ ಇರಿದಿದ್ದಾರೆ.
ಇದನ್ನೂ ಓದಿ: ತಾಯಿಯ ಮೇಲೆ ಅತ್ಯಾಚಾರವೆಸಗಿ ತನ್ನ ಹೆಂಡತಿಯಾಗಿರ್ತೀಯಾ ಎಂದು ಕೇಳಿದ್ದ ನೀಚ ಮಗ
ಮಂಗಳವಾರ ಸಂಜೆ ಮಕ್ಕಳು ಆರೋಪಿಯ ಮನೆಯ ಹೊರಗೆ ಆಟವಾಡುತ್ತಿದ್ದಾಗ ಅವರು ಹೊರಗೆ ಬಂದು ಬಾಲಕನಿಗೆ ಚಾಕುವಿನಿಂದ ಇರಿದಿದ್ದು, ಆರೋಪಿ ಮಾನಸಿಕ ಅಸ್ವಸ್ಥ ಎಂದು ಸ್ಥಳೀಯರು ಹೇಳಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ