ಜಮೀನಿನ ವಿವಾದ ಕೊಲೆಯಲ್ಲಿ ಅಂತ್ಯವಾಗಿದೆ, ಮಹಿಳೆಯನ್ನು ಹೊಡೆದು ಕೊಂದು, ಕಣ್ಣುಗಳನ್ನು ಕಿತ್ತಿರುವ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ. 45 ವರ್ಷದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ, ಖಗಾರಿಯಾ ಜಿಲ್ಲೆಯಲ್ಲಿ ಮಹಿಳೆಯ ದೇಹವು ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ, ಕಣ್ಣುಗಳು ಕಿತ್ತಿದ್ದು ಮತ್ತು ಆಕೆಯ ಖಾಸಗಿ ಭಾಗಗಳಲ್ಲಿ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಲೇಖಾ ದೇವಿ ಎಂಬ ಮಹಿಳೆ ಮೆಹಂದಿಪುರ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಲ್ಲೆ ನಡೆಸಲಾಗಿದೆ.
ಆಕೆಯ ಕುಟುಂಬದವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಮ್ಮ ಐವರು ನೆರೆಹೊರೆಯವರ ಮೇಲೆ ಆರೋಪ ಮಾಡಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ.
ಶನಿವಾರ ಸುಲೇಖಾ ದೇವಿ ಅವರು ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ನಾಲ್ವರು ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮತ್ತಷ್ಟು ಓದಿ: ಆರು ವರ್ಷದ ಬಾಲಕ ಸರಾಗವಾಗಿ ಹಾವುಗಳೊಂದಿಗೆ ಸರವಾಡುತ್ತಾನೆ, ಇಷ್ಟು ಚಿಕ್ಕ ವಯಸ್ಸಲ್ಲಿ ಇದೆಲ್ಲ ಬೇಕಿತ್ತಾ? ಎಂದು ಕೆಲವರು ಟೀಕಿಸಿದ್ದಾರೆ -ನೀವೇನಂತೀರಿ
ಹೊಡೆದು ಕೊಂದು ನಂತರ ಅವರು ಚಾಕುವಿನಿಂದ ಆಕೆಯ ಕಣ್ಣುಗಳನ್ನು ಕಿತ್ತು, ನಾಲಿಗೆಯನ್ನು ಕತ್ತರಿಸಿ ಆಕೆಯ ಖಾಸಗಿ ಅಂಗಗಳನ್ನು ವಿರೂಪಗೊಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಖಾತೆಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ತಿಳಿಸಿವೆ.
ಕೊಲೆ ಆರೋಪ ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪರಾಧ ವರದಿಯಾದಾಗಿನಿಂದ ಆರೋಪಿಗಳು ಪರಾರಿಯಾಗಿದ್ದು, ಅವರನ್ನು ಬಂಧಿಸಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಾವು ಐವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಅವರನ್ನು ಬಂಧಿಸಲು ನಾವು ಪ್ರತ್ಯೇಕ ತಂಡಗಳನ್ನು ರಚಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ